ದೇಶೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಯೊಂದಿಗೆ ಸಾಗಿದ್ದ ಚಿನ್ನದ ಬೆಲೆ ನಿನ್ನೆ ಸ್ವಲ್ಪ ಮಟ್ಟದಲ್ಲಿ ಇಳಿಕೆ ಕಂಡಿದೆ. ಆದರೆ ಇಂದು ಬಂಗಾರದ ಬೆಲೆ ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ ಸ್ಥಿರವಾಗಿದೆ.ಚಿನ್ನದ ಬೆಲೆ ಏರಿಕೆಯಾಗಿರುವುದರಿಂದ ಆಭರಣ ಪ್ರಿಯರು ಶಾಕ್ ಆಗಿದ್ದಾರೆ. ಬಹು ದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ. ಹಾಗಿದ್ರೆ, ಭಾರತದಲ್ಲಿ ಶನಿವಾರದಂದು ( ಫೆ.08) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೌದು,ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 79,450 ರೂಪಾಯಿ ಇದೆ. ಅಪರಂಜಿ 10 ಗ್ರಾಮ್ 24 ಕ್ಯಾರಟ್ ಗೋಲ್ಡ್ ರೇಟ್ 86,670ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಹತ್ತು ಗ್ರಾಂ ಚಿನ್ನ ಬೆಲೆ 160 ರೂ.ಗಳ ಏರಿಕೆ ಕಂಡಿದೆ.

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?
ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,945 ರೂಪಯಿ ಆಗಿದೆ.ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,667 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 79,450 ರೂ.ಗಳು ವ್ಯಾಪಾರವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 86,670 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.
ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,94,500 ರೂ.ಗಳು ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,66,700 ರೂ.ಗಳು ಇದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 1,600 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 65,010 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡಿದೆ.ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,500 ರೂಪಾಯಿಗಳು ವಾಹಿವಾಟುವಿದ್ದು, ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 99.50 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 995 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,950 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಏಪ್ರಿಲ್ 2025 ರಲ್ಲಿ ಮುಕ್ತಾಯಗೊಂಡ ಎಂಸಿಎಕ್ಸ್ ಚಿನ್ನದ ಬೆಲೆ 10 ಗ್ರಾಂಗೆ 84,845 ರೂ. ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ ನಂತರ, ಮಾರ್ಚ್ 2025 ರಲ್ಲಿ ಮುಕ್ತಾಯಗೊಂಡ ಎಂಸಿಎಕ್ಸ್ ಬೆಳ್ಳಿ ಬೆಲೆ 1 ಕೆಜಿಗೆ 95,790 ರೂ. ಇಂಟ್ರಾಡೇ ಗರಿಷ್ಠ ಮಟ್ಟವನ್ನು ತಲುಪಿ ನಂತರ 1 ಕೆಜಿ ಮಟ್ಟಕ್ಕೆ 95,500 ರೂ. ನಲ್ಲಿ ಮುಕ್ತಾಯವಾಯಿತು.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ಟ್ರೇಡಿಂಗ್ ಎಕನಾಮಿಕ್ಸ್ ಪ್ರಕಾರ, ಸ್ಪಾಟ್ ಚಿನ್ನವು ಪ್ರತಿ ಔನ್ಸ್‌ಗೆ $2,870 ಕ್ಕೆ ಏರಿತು, ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿ ಸತತ ಆರನೇ ವಾರದ ಲಾಭದತ್ತ ಸಾಗುತ್ತಿದೆ. ಜಾಗತಿಕ ವ್ಯಾಪಾರ ಉದ್ವಿಗ್ನತೆ ಮತ್ತು ಆರ್ಥಿಕ ಅನಿಶ್ಚಿತತೆಯ ಮಧ್ಯೆ ಹೆಚ್ಚಿದ ಬೇಡಿಕೆಯಿಂದಾಗಿ ಈ ಲೋಹವು ಈ ವಾರ ಪದೇ ಪದೇ ಏರಿಕೆಯ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಅಧ್ಯಕ್ಷ ಟ್ರಂಪ್ ವಾರದ ಆರಂಭದಲ್ಲಿ ಮೆಕ್ಸಿಕೊ ಮತ್ತು ಕೆನಡಾ ಮೇಲಿನ ಸುಂಕಗಳನ್ನು ಮುಂದೂಡಿದರು. ಆದರೆ ಎಲ್ಲಾ ಚೀನೀ ಆಮದುಗಳ ಮೇಲೆ ಶೇ.10ಸುಂಕವನ್ನು ವಿಧಿಸಿದರು.
ವಿವಿಧ ನಗರದ ಚಿನ್ನದ ಬೆಲೆಗಳ ವಿವರ
| ನಗರ | 22ಕ್ಯಾರೆಟ್ | 24K ಕ್ಯಾರೆಟ್ |
| ಬೆಂಗಳೂರು | 7,945 | 8,667 |
| ಚೆನ್ನೈ | 7,945 | 8,667 |
| ಮುಂಬೈ | 7,930 | 8,651 |
| ದೆಹಲಿ | 7,960 | 8,682 |
| ಕೋಲ್ಕತಾ | 7,945 | 8,667 |
| ಹೈದರಾಬಾದ್ | 7,930 | 8,651 |
| ಪುಣೆ | 7,945 | 8,667 |
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್)
ಬೆಂಗಳೂರು: 9,950 ರೂ
ಚೆನ್ನೈ: 10,700 ರೂ
ಮುಂಬೈ: 9,950 ರೂ
ದೆಹಲಿ: 9,950 ರೂ
ಕೋಲ್ಕತಾ: 9,950 ರೂ
ಹೈದರಾಬಾದ್: 10,700 ರೂ
ಪುಣೆ : 9,950 ರೂ
ಚಿನ್ನ ಖರೀದಿಸಲು ಯೋಜಿಸುತ್ತಿದ್ದರೆ, ಅದನ್ನು ಮೂರು ತಿಂಗಳು ಮುಂದೂಡುವುದು ಉತ್ತಮ. ಏಪ್ರಿಲ್‌ವರೆಗೆ ಕಾದರೆ, ಆ ನಂತರ ಚಿನ್ನದ ಬೆಲೆಗಳು ಕಡಿಮೆಯಾಗುತ್ತವೆ. ಏಕೆಂದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ. ಕೇಂದ್ರ ಸರ್ಕಾರವು ದರವನ್ನು ಶೇಕಡಾ 15 ರಿಂದ ಶೇಕಡಾ 6 ಕ್ಕೆ ಇಳಿಸಿದೆ. ಇದರಿಂದಾಗಿ ಏಪ್ರಿಲ್ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿಯುವ ಸಾಧ್ಯತೆ ಇದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications