ಮೊದಲ ವಾರದಿಂದ ಏರಿಕೆ ಕಂಡಿದ ಚಿನ್ನ ಇಂದು ಸ್ವಲ್ಪ ಮಟ್ಟದಲ್ಲಿ ಇಳಿಕೆ ಕಂಡಿದೆ. ಹೌದು ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ದರ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಚಿನ್ನ ಖರೀದಿ ಮಾಡಬೇಕೆಂದುಕೊಂಡವರೆಗೆ ಕೊಂಚ ರಿಲೀಫ್ ಸಿಕ್ಕಿದೆ. ಇನ್ನೂ ಬೆಳ್ಳಿ ಖರೀದಿಗೆ ಇಂದು ಸಕಾಲವೆಂದೇ ಹೇಳಬಹುದು ಏಕೆಂದರೆ ಬೆಳ್ಳೆಯ ಸಹ ಇಳಿಕೆ ಕಂಡಿದೆ.ಹಾಗಿದ್ರೆ,ಭಾರತದಲ್ಲಿ ಶುಕ್ರವಾರ(ಫೆ.21) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನ ಇಂದು ಇಳಿಕೆಯಾಗಿರುವುದರಿಂದ ಖರೀದಾರರು ಖುಷಿ ದುಪ್ಪಟ್ಟಾಗಿದೆ. ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 80,700 ರೂಪಾಯಿ ಇದೆ. ಅಪರಂಜಿ 10 ಗ್ರಾಮ್ 24 ಕ್ಯಾರಟ್ ಗೋಲ್ಡ್ ರೇಟ್ 87,750 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಹತ್ತು ಗ್ರಾಂ ಚಿನ್ನ ಬೆಲೆ370 ರೂ.ಗಳ ಇಳಿಕೆ ಕಂಡಿದೆ.

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?
ಭಾರತದಲ್ಲಿ ಚಿನ್ನದ ದರ ಇಂದು ಇಳಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 8,025 ರೂಪಯಿ ಆಗಿದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,775 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 80,250 ರೂ.ಗಳು ಇದೆ. 10 ಗ್ರಾಂನ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 87,750 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.
100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 8,02,500 ರೂ.ಗಳು ಇದೆ.ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,77,500 ರೂಪಾಯಿ ಇದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 2,900 ರೂ.ಗಳ ಇಳಿಕೆ ಕಂಡಿದೆ.18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 65,660 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆ ಕೊಂಚ ಇಳಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಗಳು ಇಂದು ಏರಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ1,00,400 ರೂಪಾಯಿಗಳು ವಾಹಿವಾಟುವಿದೆ. ಒಂದು ಗ್ರಾಂ 100.40 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ10,040 ಬೆಲೆ ಇದೆ. 100 ಗ್ರಾಂ ಬೆಳ್ಳಿ 10,040 ರೂ.ಗಳು ವ್ಯಾಪಾರವಿದೆ. ನಿನ್ನೆ ಹೋಲಿಕೆ ಮಾಡಿದ್ರೆ ಬೆಳ್ಳಿಯ ಬೆಲೆ ಇಳಿಕೆ ಕಂಡಿದೆ.
MCX ಗೋಲ್ಡ್ ರೇಟ್ ಹೇಗಿದೆ?
ಇಂದು MCX (ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್) ನಲ್ಲಿ ಚಿನ್ನದ ಬೆಲೆಗಳು ಸ್ವಲ್ಪ ಕುಸಿದವು. ಏಪ್ರಿಲ್ 4, 2025 ರಂದು ಪಕ್ವವಾಗಬೇಕಿದ್ದ ಚಿನ್ನದ ಫ್ಯೂಚರ್‌ಗಳು ಶೇ.0.35 ರಷ್ಟು ಕುಸಿದು ರೂ.87,720 ಕ್ಕೆ ತಲುಪಿದೆ.
ಮಾರ್ಚ್ 5, 2025 ರ ಮುಕ್ತಾಯ ದಿನಾಂಕವಿರುವ ಬೆಳ್ಳಿ ಫ್ಯೂಚರ್‌ಗಳು ಸಹ ಇಂದು ಬೆಳಿಗ್ಗೆ ಕುಸಿತ ಕಂಡವು, ಹಿಂದಿನ ಮುಕ್ತಾಯಕ್ಕಿಂತ ಶೇ.0.53 ಕಡಿಮೆಯಾಗಿ ರೂ. 96,597 ಕ್ಕೆ ವಹಿವಾಟು ನಡೆಸಿತು.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ರಾಯಿಟರ್ಸ್ ಪ್ರಕಾರ 05:01 GMT ರಂತೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇ.0.4 ರಷ್ಟು ಕುಸಿದು $2,927.89 ಕ್ಕೆ ತಲುಪಿದೆ. ಈ ಕುಸಿತದ ಹೊರತಾಗಿಯೂ, ಈ ವಾರ ಬೆಳ್ಳಿಯು ಶೇ.1 ಕ್ಕಿಂತ ಹೆಚ್ಚು ಏರಿಕೆಯಾಗಿದ್ದು, ಗುರುವಾರ ದಾಖಲೆಯ ಗರಿಷ್ಠ $2,954.69 ತಲುಪಿದೆ. ಯುಎಸ್ ಚಿನ್ನದ ಭವಿಷ್ಯವು ಶೇ.0.5ರಷ್ಟು ಕುಸಿದು $2,942 ಕ್ಕೆ ತಲುಪಿದೆ.ಆದರೆ ಸ್ಪಾಟ್ ಬೆಳ್ಳಿ ಕೂಡ ಶೇ.0.4ರಷ್ಟು ಕುಸಿದು ಪ್ರತಿ ಔನ್ಸ್‌ಗೆ $32.79 ಕ್ಕೆ ತಲುಪಿದೆ.
ವಿವಿಧ ನಗರಗಳಲ್ಲಿರುವ ಗೋಲ್ಡ್ ರೇಟ್ ವಿವರ
ನಗರ 22ಕ್ಯಾರೆಟ್ 24K ಕ್ಯಾರೆಟ್
ಬೆಂಗಳೂರು 8,025 8,755
ಚೆನ್ನೈ 8,025 8,755
ಮುಂಬೈ 8,025 8,755
ದೆಹಲಿ 8,030 8,755
ಕೋಲ್ಕತಾ 8,025 8,755
ಹೈದರಾಬಾದ್ 8,025 8,755
ಪುಣೆ 8,025 8,755
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್)
ಬೆಂಗಳೂರು: 10,040ರೂ
ಚೆನ್ನೈ: 10,790 ರೂ
ಮುಂಬೈ:10,040ರೂ
ದೆಹಲಿ: 10,040ರೂ
ಕೋಲ್ಕತಾ: 10,040 ರೂ
ಹೈದರಾಬಾದ್: 10,790 ರೂ
ಪುಣೆ : 10,040 ರೂ
ಚಿನ್ನ ಖರೀದಿಸಲು ಯೋಜಿಸುತ್ತಿದ್ದರೆ, ಅದನ್ನು ಮೂರು ತಿಂಗಳು ಮುಂದೂಡುವುದು ಉತ್ತಮ. ಏಪ್ರಿಲ್‌ವರೆಗೆ ಕಾದರೆ, ಆ ನಂತರ ಚಿನ್ನದ ಬೆಲೆಗಳು ಕಡಿಮೆಯಾಗುತ್ತವೆ. ಏಕೆಂದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ.
ಕೇಂದ್ರ ಸರ್ಕಾರವು ದರವನ್ನು ಶೇಕಡಾ 15 ರಿಂದ ಶೇಕಡಾ 6 ಕ್ಕೆ ಇಳಿಸಿದೆ. ಇದರಿಂದಾಗಿ ಏಪ್ರಿಲ್ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿಯುವ ಸಾಧ್ಯತೆ ಇದೆ. ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications