ಚಿನ್ನದ ಬೆಲೆ ಕಡಿಮೆಯಾಗಬಹುದು ಎಂದು ಕಾದು ಕುಳಿತಿದ್ದ ಮಹಿಳೆಯರಿಗೆ ಭಾರಿ ನಿರಾಸೆಯಾಗಿದೆ. ಏಕೆಂದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಇಷ್ಟು ದಿನ ಹತ್ತು, ಇಪ್ಪತ್ತು, ಐವತ್ತು ರೂ.ಗಳಲ್ಲೇ ಏರಿಕೆ ನೋಡುತ್ತಿದ್ದ ಜನರಿಗೆ, ಈಗ ಎದೆ ಝಲ್ ಅನ್ನಿಸುವಂತ ಸುದ್ದಿ ಇದೆ. ಇಂದು ದಾಖಲೆ ಪ್ರಮಾಣದಲ್ಲಿ ಚಿನ್ನದ ದರ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ ಎಂದು ತಿಳಿಯಲು ಹೋದರೆ ಸುಸ್ತಾಗಿಬಿಡುತ್ತದೆ. ಚಿನ್ನ ಕೊಳ್ಳೋದೇ ಬೇಡ, ಕೇವಲ ಚಿನ್ನದ ಬೆಲೆ ಕೇಳಿದ್ರೆನೆ ಬೆವರಿಳಿಯುತ್ತದೆ. ಅಷ್ಟಾಗಿದೆ ಇಂದಿನ ಚಿನ್ನದ ಬೆಲೆಯಲ್ಲಿ ಏರಿಕೆ.

ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ಹೆಚ್ಚಿನ ಬೇಡಿಕೆಯಾದಾಗ ಬೆಲೆ ಏರುತ್ತದೆ ಮತ್ತು ಕಡಿಮೆಯಾಗಿದರೆ ಇಳಿಯಬಹುದು. ಹೀಗಾಗಿ, ಚಿನ್ನ ಖರೀದಿಸಲು ಅಥವಾ ಹೂಡಿಕೆ ಮಾಡಲು ನಿರ್ಧಾರ ತೆಗೆದುಕೊಳ್ಳುವ ಮುನ್ನ ದೈನಂದಿನ ಬೆಲೆಗಳ ಹೋಲಿಕೆ ಮಾಡುವುದು ಉತ್ತಮ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ. ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ.
ಸಭೆ-ಸಮಾರಂಭಗಳಲ್ಲಿ ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ಇನ್ನು ಭಾರತದಲ್ಲಿ ಚಿನ್ನಕ್ಕೆ ಅದರದ್ದೇ ಆದ ಮಹತ್ವವಿದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ
22 ಕ್ಯಾರಟ್ ಚಿನ್ನದ ಬೆಲೆ
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ, 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,230 ಇದೆ. ಅಂದರೆ ನಿನ್ನೆ ₹8,120 ಆಗಿದ್ದು ಇಂದು ₹110 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 82 ಸಾವಿರದ 300 ರೂ. ಇದೆ. ಅಂದರೆ ನಿನ್ನೆ 81 ಸಾವಿರದ 200 ರೂ. ಆಗಿದ್ದು ಇಂದು ₹1,100 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 23 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 12 ಸಾವಿರ ರೂ. ಆಗಿದ್ದು ಇಂದು ₹11,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ
24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,978 ಇದೆ. ಅಂದರೆ ನಿನ್ನೆಯ ಬೆಲೆ ₹8,858 ಆಗಿದ್ದು ಇಂದು ಪ್ರತಿ ಗ್ರಾಂಗೆ ₹120 ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 89 ಸಾವಿರದ 780 ರೂ. ಇದೆ. ಅಂದರೆ ನಿನ್ನೆಯ ಬೆಲೆ 88 ಸಾವಿರದ 580 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹1,200 ಏರಿಕೆಯಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷ 97 ಸಾವಿರದ 800 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 8 ಲಕ್ಷದ 85 ಸಾವಿರದ 800 ರೂ. ಆಗಿದ್ದು ಇಂದು ₹12,000 ಏರಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,734 ಇದೆ. ಅಂದರೆ ನಿನ್ನೆಯ ಬೆಲೆ ₹6,644 ಆಗಿದ್ದು ಇಂದು ಪ್ರತಿ ಗ್ರಾಂಗೆ ₹90 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 67 ಸಾವಿರದ 340 ರೂ. ಇದೆ. ಅಂದರೆ ನಿನ್ನೆಯ ಬೆಲೆ 66 ಸಾವಿರದ 440 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹900 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷ 73 ಸಾವಿರದ 400 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 64 ಸಾವಿರದ 400 ರೂ. ಆಗಿದ್ದು ಇಂದು ₹9,000 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,230 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,978 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,785 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,230 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,978 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,734 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,245 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,993 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,746 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,230 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,978 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,734 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,230 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,978 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,734 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,230 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,978 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,734 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,230 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,978 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,734 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,230 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,978 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,734 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ ಕಾಣಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹2 ರಷ್ಟು ಏರಿಕೆಯಾಗಿದೆ. ಅಂದರೆ ಇಂದಿನ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹103 ಇದೆ. ನಿನ್ನೆ ಈ ಬೆಲೆ ₹101ಇತ್ತು. ಹಾಗೆಯೇ ಪ್ರತಿ 10 ಗ್ರಾಂ ಬೆಳ್ಳಿ ಬೆಲೆ ₹1,030 ಆಗಿದೆ. ನಿನ್ನೆ ಈ ಬೆಲೆ ₹1,010 ಆಗಿದ್ದು ಇಂದು ₹20 ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ಬೆಲೆ ಇಂದು, ₹10,300 ಆಗಿದೆ. ನಿನ್ನೆ ಈ ಬೆಲೆ ₹10,100 ಆಗಿತ್ತು. ಅಂದರೆ ಇಂದು ₹200 ಹೆಚ್ಚಾಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆ ಇಂದು ₹1,03,000 ಆಗಿದೆ. ನಿನ್ನೆ ಈ ₹1,01,000 ಆಗಿದ್ದು ಇಂದು ₹2,000 ಏರಿಕೆಯಾಗಿದೆ
ಸ್ಪಾಟ್ ಚಿನ್ನದ ವಿವರ:
ಮನಿ ಕಂಟ್ರೋಲ್ ವರದಿಯ ಪ್ರಕಾರ, ಸ್ಪಾಟ್ ಗೋಲ್ಡ್ ಬೆಲೆ 0330 GMT ವೇಳೆಗೆ $2,987.51 ಆಗಿತ್ತು. ಆದರೆ, ಈ ಹಿಂದೆ ಚಿನ್ನ $2,990.09 ದರವನ್ನು ತಲುಪಿತ್ತು, ಇದು ಇತಿಹಾಸದಲ್ಲೇ ಗರಿಷ್ಠ ಮಟ್ಟ ಎನ್ನಬಹುದಾಗಿದೆ. ಚಿನ್ನದ ದರವು $3,000 ಗಡಿ ಹತ್ತಿರ ಮುನ್ನಡೆಯುತ್ತಿದೆ, ಇದು ಹೂಡಿಕೆದಾರರಲ್ಲಿ ಹೆಚ್ಚು ಕುತೂಹಲ ಮೂಡಿಸಿದೆ. ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು ಈ ವಾರದ ದರದಲ್ಲಿ 2.5% ಏರಿಕೆಯಾಗಿದೆ. ಅಮೇರಿಕಾದ ಚಿನ್ನದ ಭವಿಷ್ಯ ಉಳಿತಾಯ ದರ 0.3% ಏರಿಕೆ ಕಂಡು $3,000.20 ಆಗಿದೆ.
ಆರ್ಥಿಕ ಅನಿಶ್ಚಿತತೆ ಹೆಚ್ಚಿದಾಗ, ಹೂಡಿಕೆದಾರರು ಚಿನ್ನವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಾರೆ ಹೀಗಾಗಿ ಚಿನ್ನದ ಬೆಲೆ ಏರಿಕೆ ಕಾಣುತ್ತದೆ. ಹಾಗೆಯೇ ಬಂಡವಾಳ ಮಾರುಕಟ್ಟೆ ಅಸ್ಥಿರತೆ ಮತ್ತು ಕೇಂದ್ರ ಬ್ಯಾಂಕುಗಳ ನೀತಿಗಳು ಚಿನ್ನದ ಮೇಲಿನ ಬೇಡಿಕೆಯನ್ನು ಹೆಚ್ಚಿಸಿವೆ. ಜೊತೆಗೆ ಅಮೇರಿಕಾದ ಹಣಕಾಸು ನೀತಿಯ ಪ್ರಭಾವವೂ ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ.


Click it and Unblock the Notifications