ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಏರಿಕೆಯಾಗಿದೆ.ಹೌದು, ಬಂಗಾರ ಮಾರುಕಟ್ಟೆ ಆಭರಣ ಪ್ರಿಯರಿಗೆ ಶಾಕ್ ಕೊಟ್ಟಿದೆ. ಬೆಳ್ಳಿಯ ಬೆಲೆ ನಿನ್ನೆಗೆ ಹೋಲಿಕೆ ಮಾಡಿದ್ರೆ ಯಾವುದೇ ಬದಲಾವಣೆಯಾಗಿಲ್ಲ.ಚಿನ್ನದ ಬೆಲೆ ಏರಿಕೆಯಾಗಿರುವುದರಿಂದ ಚಿನ್ನದ ಕೊಳ್ಳುವುದಕ್ಕೆ ಚಿನ್ನ ಖರೀದಿದಾರರಿ ಹಿಂದೇಟು ಹಾಕುತ್ತಿದ್ದಾರೆ. ಚಿನ್ನ ಕೊಳ್ಳಬೇಕು ಅಂದುಕೊಂಡವರಿಗೆ ನಿರಾಸೆಯಾಗಿದೆ. ಡೋನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಿದದ್ದರೂ ಜಾಗತಿಕ ಮಟ್ಟದಲ್ಲಿ ಚಿನ್ನದ ವಾಹಿವಾಟು ಕಡಿಮೆಯಾಗಿಲ್ಲ ಎಂದೇ ಹೇಳಬಹುದು. ಹಾಗಿದ್ರೆ ಭಾರತದಲ್ಲಿ ಗುರುವಾರದಂದು( ಜ.22) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಭಾರತದಲ್ಲಿ ಬಂಗಾರದ ಬೆಲೆ ಎಷ್ಟಿದೆ?
ಭಾರತದಲ್ಲಿ ಚಿನ್ನದ ದರ ಇಂದು ಇಳಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,525 ರೂಪಯಿ ಆಗಿದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,209 ರೂಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 75,250 ರೂಗಳ ವಾಹಿವಾಟುವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 82,090 ರೂ.ಗಳ ವ್ಯಾಪಾರವಿದೆ.

ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,52,500 ರೂ ಇದೆ.ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,20,900 ರೂ.ಗಳ ವಹಿವಾಟುವಿದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ರೆ ಅಪರಂಜಿ ಚಿನ್ನದಲ್ಲಿ8,600ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 61,570 ರೂ ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಯಲ್ಲಿ ಇಂದು ಸ್ಥಿರವಾಗಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 96,500 ರೂಪಾಯಿಗಳು ವಾಗಿವಾಟುವಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 96.50 ರೂಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 965 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,650ರೂ ಗಳು ವ್ಯಾಪಾರವಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
ಇಂದು MCX ಚಿನ್ನದ ಬೆಲೆಗಳು ಹಾಗು ಬೆಳ್ಳಿ ಬೆಲೆ ಎರಡೂ ಕೂಡ ಇಳಿಕೆಯಾಗಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.22%ನಷ್ಟು ಇಳಿಕೆಯಾಗಿ 79,395 ರೂ. ಆಗಿದೆ. ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.37% ನಷ್ಟು ಏರಿಕೆಯಾಗಿ 92,430 ರೂಪಾಯಿ ವಹಿವಾಟು ನಡೆಸುತ್ತಿದೆ. ಈ ತಿಂಗಳು ಚಿನ್ನದ ಬೆಲೆಗಳು ಏರಿಕೆಯಾಗುತ್ತಲೇ ಇದೆ. ಇದು ಹೂಡಿಕೆದಾರರಿಗೆ ಆತಂಕವನ್ನ ಸೃಷ್ಟಿ ಮಾಡಿದೆ. ಬೌಗೋಳಿಕ ಜಾಗತಿಕ ಉದ್ವಿಗ್ನತೆಗಳು, ಬಡ್ಡಿ ದರಗಳು, ಸರ್ಕಾರಿ ನೀತಿಗಳು, ಕರೆನ್ಸಿ ವಿನಿಮಯ ದರಗಳು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ವರ್ಷದ ಮೊದಲ ತಿಂಗಳಿನಲ್ಲಿ ಸಾಕಷ್ಟು ಏರಿಳಿತಗಳನ್ನ ಗಮನಿಸುವಂತಾಯಿತು.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ಸ್ಪಾಟ್ ಚಿನ್ನ ಮತ್ತು ಬೆಳ್ಳಿ ದರಗಳು ಕೂಡ ಇಂದು ಏರಿಕೆಯಾಗಿದೆ. ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 1.22% ಏರಿಕೆಯಾಗಿ 2,742 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಇತ್ತ ಸ್ಪಾಟ್ ಬೆಳ್ಳಿ ಭವಿಷ್ಯವು ಪ್ರತಿ ಔನ್ಸ್‌ಗೆ 0.42% ಏರಿಕೆಯಾಗಿ 30.78 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ 0.32% ಏರಿಕೆಯಾಗಿ 950.25 ಡಾಲರ್ ತಲುಪಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ 2.22% ಏರಿಕೆಯಾಗಿ 969.00 ಡಾಲರ್ ತಲುಪಿದೆ.
ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ
| ನಗರ | 22 ಕ್ಯಾರೆಟ್ | 24k ಕ್ಯಾರೆಟ್ |
| ಬೆಂಗಳೂರು | 7,525 | 8,209 |
| ಚೆನ್ನೈ | 7,525 | 8,209 |
| ಮುಂಬೈ | 7,525 | 8,209 |
| ದೆಹಲಿ | 7,540 | 8,224 |
| ಕೋಲ್ಕತಾ | 7,525 | 8,209 |
| ಹೈದರಾಬಾದ್ | 7,525 | 8,209 |
| ಪುಣೆ | 7,525 | 8,209 |
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
ಬೆಂಗಳೂರು: 9,650ರೂ
ಚೆನ್ನೈ: 10,400 ರೂ
ಮುಂಬೈ: 9,650ರೂ
ದೆಹಲಿ: 9,650 ರೂ
ಕೋಲ್ಕತಾ: 9,650 ರೂ
ಹೈದರಾಬಾದ್:10,400 ರೂ
ಪುಣೆ : 9,650 ರೂ
ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್


Click it and Unblock the Notifications