ಅಮೆರಿಕ, ಕೆನಡಾ ಮತ್ತು ಮೆಕ್ಸಿಕೊ ದೇಶಗಳು ಸುಂಕದ ಕುರಿತು ಚರ್ಚೆ ನಡೆಸುತ್ತಿದ್ದಂತೆ ಭಾರತದಲ್ಲಿ ಚಿನ್ನದ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಗಳು ಕೂಡ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಆಭರಣ ಪ್ರಿಯರು ಶಾಕ್ ಆಗಿದ್ದಾರೆ.ಬಹು ದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ. ಹಾಗಿದ್ರೆ ಭಾರತದಲ್ಲಿ ಬುಧವಾರದಂದು ( ಫೆ.05) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 79,050 ರೂಪಾಯಿ ಇದೆ. ಅಪರಂಜಿ 10 ಗ್ರಾಮ್ 24 ಕ್ಯಾರಟ್ ಗೋಲ್ಡ್ ರೇಟ್ 86,240 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಹತ್ತು ಗ್ರಾಂ ಚಿನ್ನ ಬೆಲೆ1,040 ರೂ.ಗಳ ಏರಿಕೆ ಕಂಡಿದೆ.

ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?
ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ.22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,905 ರೂಪಯಿ ಆಗಿದೆ.ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,624ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ79,050 ರೂ.ಗಳು ವ್ಯಾಪಾರವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 86,240 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.
ಇನ್ನೂ 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,90,500 ರೂ.ಗಳು ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,62,400
ಇದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 10,400 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 64,680 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟು?
ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡಿದೆ.ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,500 ರೂಪಾಯಿಗಳು ವಾಹಿವಾಟುವಿದ್ದು, ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 99.50 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 995 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,950 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
MCX ಚಿನ್ನ ಏಪ್ರಿಲ್ 83,200 ಮಟ್ಟಕ್ಕಿಂತ ಹೆಚ್ಚಿದ್ದರೆ 84,500 ಮಟ್ಟಕ್ಕೆ ಸಾಗುವ ನಿರೀಕ್ಷೆಯಿದೆ. 83,200 ಮಟ್ಟಕ್ಕಿಂತ ಕಡಿಮೆ ಬೆಲೆಗಳು ಮಾತ್ರ 82,600 ಮಟ್ಟಕ್ಕೆ ತೀವ್ರವಾಗಿ ಇಳಿಯಬಹುದು ಎಂದು ICICI ಡೈರೆಕ್ಟ್ ರಿಸರ್ಚ್‌ನ ತಾಂತ್ರಿಕ ಸಂಶೋಧನಾ ವಿಶ್ಲೇಷಕರು ಹೇಳಿದ್ದಾರೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ?
ರಾಯಿಟರ್ಸ್ ಪ್ರಕಾರ, ಬುಧವಾರ ಯುಎಸ್ ಚಿನ್ನದ ಫ್ಯೂಚರ್‌ಗಳು ಶೇ.0.2 ಏರಿಕೆಯಾಗಿ $2,879.70 ಕ್ಕೆ ತಲುಪಿದ್ದರೆ, ಸ್ಪಾಟ್ ಚಿನ್ನವು 0253 GMT ಯ ಹೊತ್ತಿಗೆ ಔನ್ಸ್‌ಗೆ ಶೇ.0.2 ಏರಿಕೆಯಾಗಿ $2,848.69 ಕ್ಕೆ ತಲುಪಿದ್ದು, ದಿನದ ಆರಂಭದಲ್ಲಿ $2,853.97 ರಷ್ಟು ಹೊಸ ಗರಿಷ್ಠ ಮಟ್ಟವನ್ನು ತಲುಪಿದೆ. ಪಲ್ಲಾಡಿಯಮ್ ಶೇ.0.9 ಇಳಿಕೆಯಾಗಿ $981.75ಕ್ಕೆ ತಲುಪಿದೆ ಪ್ಲಾಟಿನಂ ಶೇ.0.3ಏರಿಕೆಯಾಗಿ $966.95 ಕ್ಕೆ ತಲುಪಿದೆ.ಆದರೆ ಸ್ಪಾಟ್ ಬೆಳ್ಳಿ ಶೇ.0.2 ಏರಿಕೆಯಾಗಿ ಔನ್ಸ್‌ಗೆ $32.15ಕ್ಕೆ ತಲುಪಿದೆ.
ವಿವಿಧ ನಗರದ ಚಿನ್ನದ ಬೆಲೆಗಳ ವಿವರ
| ನಗರ | 22ಕ್ಯಾರೆಟ್ | 24k ಕ್ಯಾರೆಟ್ |
| ಬೆಂಗಳೂರು | 7,905 | 8,624 |
| ಚೆನ್ನೈ | 7,905 | 8,624 |
| ಮುಂಬೈ | 7,905 | 8,624 |
| ದೆಹಲಿ | 7,920 | 8,869 |
| ಕೋಲ್ಕತಾ | 7,905 | 8,624 |
| ಹೈದರಾಬಾದ್ | 7,905 | 8,624 |
| ಪುಣೆ | 7,905 | 8,624 |
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್)
| ಬೆಂಗಳೂರು | 9,950 ರೂ |
| ಚೆನ್ನೈ | 10,700ರೂ |
| ಮುಂಬೈ | 9,950 ರೂ |
| ದೆಹಲಿ | 9,950 ರೂ |
| ಕೋಲ್ಕತಾ | 9,950 ರೂ |
| ಹೈದರಾಬಾದ್ | 10,700ರೂ |
| ಪುಣೆ | 9,950 ರೂ |
ಚಿನ್ನ ಖರೀದಿಸಲು ಯೋಜಿಸುತ್ತಿದ್ದರೆ, ಅದನ್ನು ಮೂರು ತಿಂಗಳು ಮುಂದೂಡುವುದು ಉತ್ತಮ. ಏಪ್ರಿಲ್‌ವರೆಗೆ ಕಾದರೆ, ಆ ನಂತರ ಚಿನ್ನದ ಬೆಲೆಗಳು ಕಡಿಮೆಯಾಗುತ್ತವೆ. ಏಕೆಂದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ. ಕೇಂದ್ರ ಸರ್ಕಾರವು ದರವನ್ನು ಶೇಕಡಾ 15 ರಿಂದ ಶೇಕಡಾ 6 ಕ್ಕೆ ಇಳಿಸಿದೆ. ಇದರಿಂದಾಗಿ ಏಪ್ರಿಲ್ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿಯುವ ಸಾಧ್ಯತೆ ಇದೆ.
ಭಾರತದಲ್ಲಿ ಚಿನ್ನಕ್ಕೆ ಹೆಚ್ಚಿನ ಮಹತ್ವವಿದೆ.ಭಾರತೀಯ ಮಹಿಳೆಯರಿಗೆ ಚಿನ್ನ ಅಚ್ಚು-ಮೆಚ್ಚು ಅದರಿಂದ ಅತಿ ಹೆಚ್ಚಾಗಿ ಚಿನ್ನವನ್ನು ಖರೀದಿ ಮಾಡುತ್ತಾರೆ.ಆದರೆ ಇಂದು ಬಂಗಾರದ ಬೆಲೆ ಏರಿಕೆಯಾಗಿರುವುರಿಂದ ಚಿನ್ನ ಖರೀದಿ ಮಾಡಲು ಹಿಂದೇಟು ಆಗುತ್ತಿದ್ದಾರೆ.


Click it and Unblock the Notifications