ಜೂನ್ 11, ಭಾರತದಲ್ಲಿ ಇಂದು ಚಿನ್ನದ ಬೆಲೆ: ಇಂದು ಚಿನ್ನಪ್ರಿಯರಿಗೆ ದೊಡ್ಡ ಶಾಜ್ ಎದುರಾಗಿದೆ. ಕಳೆದ 3 ದಿನಗಳಿಂದ ಇಳಿಕೆಯನ್ನೇ ನೋಡಿದ್ದ ಚಿನ್ನದ ಬೆಲೆ ಇಂದು ದಿಢೀರ್ ಏರಿಕೆ ಕಂಡಿದೆ. ಬುಧವಾರ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ, 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆಯುವ, ಭಾರಿ ಏರಿಕೆಯ ನಂತರ 9,84,000 ರೂ. ತಲುಪಿದೆ. ಚಿನ್ನ ಖರೀದಿದಾರರ ತಲೆ ಮೇಲೆ ಬೆಲೆಯ ಭಾರ ತಾಂಡವವಾಡುತ್ತಿದೆ. ಮೇ ತಿಂಗಳಿಗೆ ಹೋಲಿಸಿದರೆ ಜೂನ್ ತಿಂಗಳಿನಲ್ಲಿ ಈವರೆಗೂ ಅತಿಹೆಚ್ಚು ಬೆಲೆಯನ್ನು ನೋಡಬಹುದಾಗಿದೆ. ಈಗಾಗಲೇ ಹೂಡಿಕೆ ಮಾಡಿರುವವರಿಗೆ ಇದು ಗುಡ್‌ನ್ಯೂಸ್ ಆದರೆ, ಈಗ ಹೂಡಿಕೆ ಮಾಡಬೇಕೆಂದಿರುವವರಿಗೆ ಇದು ಬಹಳ ಆಘಾತದ ಸಂಗತಿಯಾಗಿದೆ.

ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, 9,840 ರೂ. ಆಗಿದೆ. ನಿನ್ನೆ ಇದರ ಬೆಲೆ 9,758 ರೂ. ಆಗಿದ್ದು ನಿನ್ನೆಗಿಂತ ಇಂದು, 82 ರೂ. ಏರಿಕೆಯಾಗಿದೆ.
10 ಗ್ರಾಂ ಚಿನ್ನ: 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, 98,400 ರೂ. ಆಗಿದೆ. ನಿನ್ನೆ ಇದರ ಬೆಲೆ 97,580 ರೂ. ಆಗಿದ್ದು ನಿನ್ನೆಗಿಂತ ಇಂದು, 820 ರೂ. ಏರಿಕೆಯಾಗಿದೆ.
100 ಗ್ರಾಂ ಚಿನ್ನ: 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, 9,84,000 ರೂ. ಆಗಿದೆ. ನಿನ್ನೆ ಇದರ ಬೆಲೆ 9,75,800 ರೂ. ಆಗಿದ್ದು ನಿನ್ನೆಗಿಂತ ಇಂದು, 8,200 ರೂ. ಏರಿಕೆಯಾಗಿದೆ.
ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, 9,020 ರೂ. ಆಗಿದೆ. ನಿನ್ನೆ ಇದರ ಬೆಲೆ 8,945 ರೂ. ಆಗಿದ್ದು ನಿನ್ನೆಗಿಂತ ಇಂದು, 75 ರೂ. ಏರಿಕೆಯಾಗಿದೆ.
10 ಗ್ರಾಂ ಚಿನ್ನ: 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, 90,200 ರೂ. ಆಗಿದೆ. ನಿನ್ನೆ ಇದರ ಬೆಲೆ 89,450 ರೂ. ಆಗಿದ್ದು ನಿನ್ನೆಗಿಂತ ಇಂದು, 750 ರೂ. ಏರಿಕೆಯಾಗಿದೆ.
100 ಗ್ರಾಂ ಚಿನ್ನ: 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, 9,02,000 ರೂ. ಆಗಿದೆ. ನಿನ್ನೆ ಇದರ ಬೆಲೆ 8,94,500 ರೂ. ಆಗಿದ್ದು ನಿನ್ನೆಗಿಂತ ಇಂದು 7,500 ರೂ. ಏರಿಕೆಯಾಗಿದೆ.
ಭಾರತದಲ್ಲಿ 18 ಕ್ಯಾರಟ್ ಚಿನ್ನದ ಬೆಲೆ:
1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,380 ರೂ. ಆಗಿದೆ. ನಿನ್ನೆ ಇದರ ಬೆಲೆ 7,319 ರೂ. ಆಗಿದ್ದು ನಿನ್ನೆಗಿಂತ ಇಂದು, 61 ರೂ. ಏರಿಕೆಯಾಗಿದೆ.
10 ಗ್ರಾಂ ಚಿನ್ನ: 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, 73,800 ರೂ. ಆಗಿದೆ. ನಿನ್ನೆ ಇದರ ಬೆಲೆ 73,190 ರೂ. ಆಗಿದ್ದು ನಿನ್ನೆಗಿಂತ ಇಂದು, 610 ಏರಿಕೆಯಾಗಿದೆ.
100 ಗ್ರಾಂ ಚಿನ್ನ: 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, 7,38,000 ರೂ. ಆಗಿದೆ. ನಿನ್ನೆ ಇದರ ಬೆಲೆ 7,31,900 ರೂ. ಆಗಿದ್ದು ನಿನ್ನೆಗಿಂತ ಇಂದು, 6,100 ರೂ. ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,840 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,020 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,415 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,840 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,020 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,855 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,035 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,393 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,840 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,020 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,840 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,020 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,840 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,020 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,840 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,020 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,840 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,020 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,845 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,025 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,384 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,845 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,025 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,384 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ 109 ರೂ. ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ 1,090 ರೂ. ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ 10,900 ರೂ. ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ 1,09,000 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ, ಜೂನ್ 11ರಂದು ಸ್ಪಾಟ್ ಚಿನ್ನದ ಬೆಲೆಯು, 0.5%ಕ್ಕೆ ಏರಿಕೆಯಾಗಿ ಪ್ರತಿ ಔನ್ಸ್‌ಗೆ $3,339.60 ರಷ್ಟಕ್ಕೆ ತಲುಪಿದೆ. ಜೊತೆಗೆ ಅಮೆರಿಕಾದ ಫ್ಯೂಚರ್ ಗೋಲ್ಡ್ ಪ್ರತಿ ಔನ್ಸ್‌ಗೆ $3,361.20ಗೆ ತಲುಪಿದೆ.. ಈ ಸ್ಥಿತಿಗತಿಯು ಚಿನ್ನದ ಮೌಲ್ಯದಲ್ಲಿ ಬೃಹತ್ ಏರಿಕೆ ಅಥವಾ ಇಳಿಕೆ ಆಗದ ರೀತಿಯಲ್ಲಿ, ಹೂಡಿಕೆದಾರರು ಇನ್ನೂ ನಿರೀಕ್ಷೆಯಲ್ಲಿರುವುದನ್ನು ಸೂಚಿಸುತ್ತದೆ.
ಹೂಡಿಕೆಯ ಸಾಧನವಾಗಿರುವ ಚಿನ್ನ:
ಹೂಡಿಕೆಯ ಸಾಧನವಾಗಿರುವ ಚಿನ್ನವು ಭಾರತದಲ್ಲಿ ಹಲವು ರೀತಿಯ ಮಹತ್ವದ ಸ್ಥಾನ ಪಡೆದುಕೊಂಡಿದೆ. ಮಹಿಳೆಯರಿಗೆ ಒಡವೆ ರೂಪದಲ್ಲಿ ಇದು ಖುಷಿ ನೀಡುತ್ತದೆ. ಹಾಗೆಯೇ ಪ್ರತಿಷ್ಠೆಯ ಸಂಕೇತವಾಗಿ ಗೌರವ ತಂದುಕೊಡುತ್ತದೆ. ಇನ್ನು ಕಷ್ಟ ಅಂತ ಬಂದಾಗ ಆರ್ಥಿಕ ಸಹಾಯ ಮಾಡುವ ಮಿತ್ರನಾಗಿರುತ್ತದೆ. ಹೂಡಿಕೆಯ ರೂಪದಲ್ಲಿ ನೋಡುವುದಾದರೆ, ಚಿನ್ನವು ಭವಿಷ್ಯದ ದೊಡ್ಡ ಸಂಪತ್ತಾಗಿ ಪಾತ್ರ ನಿರ್ವಹಿಸುತ್ತದೆ. ಒಂದೇ ಲೋಹ ಹಲವು ರೀತಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಹೀಗಾಗಿಯೇ ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವದ ಸ್ಥಾನವಿದೆ. ಚಿನ್ನವನ್ನು ಪೂಜೆ-ಪುನಸ್ಕಾರ, ಮದುವೆ-ಸಮಾರಂಭಗಳಲ್ಲಿ ಇರಿಸದೇ ಏನೂ ನೆರವೇರುವುದಿಲ್ಲ. ಅದರಲ್ಲೂ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮೆಚ್ಚು. ಏನು ಕೊಟ್ಟರೂ ಮನಸೋಲದ ನಾರಿಯರಿಗೆ ಚಿನ್ನವೇ ದೊಡ್ಡ ಮಟ್ಟದ ಉಡುಗೊರೆ. ಅವರಿಗೆ ಚಿನ್ನವೇ ಭೂಷಣ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications