ಮೇ 17, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಮೇ 15ರಂದು ಭಾರಿ ಕುಸಿತ ನೋಡಿದ್ದ ಚಿನ್ನದ ಬೆಲೆ, ಮೇ 16ರಂದು ಭಾರಿ ಜಿಗಿತ ನೋಡಿತ್ತು. ಒಂದೊಂದೇ ದಿನಗಳಲ್ಲಿ ಚಿನ್ನದ ಬೆಲೆಯು ದಾಖಲೆಯ ಇಳಿಕೆ ಮತ್ತು ಏರಿಕೆ ನೋಡಿದೆ. ಆದರೆ ಮೇ 17ನೇ ತಾರೀಖಾದ ಇಂದು ಎರಡೂ ಆಗಿಲ್ಲ. ಬೆಲೆಯಲ್ಲಿ ಏರಿಕೆಯೂ ಆಗಿಲ್ಲ ಇಳಿಕೆಯೂ ಆಗಿಲ್ಲ. ಇಂದು ಬೆಲೆ ಇಳಿಕೆಯಾಬಹುದು ಎಂದು ಕಾಯುತ್ತಿದ್ದವರಿಗೆ ನಿರಾಸೆಯಾದರೆ, ಬೆಲೆ ಎಷ್ಟು ಹೆಚ್ಚಳವಾಗುತ್ತದೋ ಎಂದು ಆತಂಕದಲ್ಲಿದ್ದವರಿಗೆ ನಿರಾಳವಾಗಿದೆ ಎನ್ನಬಹುದು. ಆದರೂ ಚಿನ್ನದ ಬೆಲೆ ದಿನದಿಂದ ದಿನ ತನ್ನ ಮೌಲ್ಯವನ್ನು ಭಾರಿ ಪ್ರಮಾಣದಲ್ಲಿ ಏರಿಸಿಕೊಂಡು, ಬಳಿಕ ಕೊಂಚ ಪ್ರಮಾಣದಲ್ಲಿ ಇಳಿದುಬಿಡುತ್ತದೆ.

ಇನ್ನು ಭಾರತದಲ್ಲಿ ಚಿನ್ನ ಕೊಳ್ಳುವವರ ಸಂಖ್ಯೆ ಹೆಚ್ಚಾಗಿಯೇ ಇದೆ. ಹೀಗಾಗಿ ಭಾರತದಲ್ಲಿ ಚಿನ್ನಕ್ಕೆ ಹೆಚ್ಚು ಮಹತ್ವವಿದೆ. ಹೂಡಿಕೆದಾರರು ಚಿನ್ನದ ಮೇಲಿನ ಹೂಡಿಕೆಗೆ ಒಂದಲ್ಲ ಒಂದು ಮಾರ್ಗವನ್ನು ಅನುಸರಿಸುತ್ತಾರೆ. ಚಿನ್ನದ ಮ್ಯೂಚುವಲ್ ಫಂಡ್, ಚಿನ್ನದ ಸ್ಥಿರ ಠೇವಣಿ, ಚಿನ್ನದ ಇಟಿಎಫ್ ಹೀಗೆ ಹೂಡಿಕೆಗೆ ನಾನಾ ಆಯ್ಕೆಗಳಿವೆ. ಇವುಗಳಲ್ಲಿ ಹೂಡಿಕೆ ಮಾಡುವ ಮೂಲಕ ತಮ್ಮ ಭವಿಷ್ಯದ ಭದ್ರ ನಿಧಿಯನ್ನ ಕಾಯ್ದಿರಿಸಿಕೊಳ್ಳುತ್ತಾರೆ. ಆದರೆ ಹೂಡಿಕೆ ಮಾಡುವಾಗ ಬೆಲೆ ಹೆಚ್ಚಿದ್ದರೆ ಸ್ವಲ್ಪ ಕಷ್ಟಕರ. ಹೂಡಿಕೆ ಮಾಡುವವರ ಜೇಬು ಖಾಲಿಯಾಗುತ್ತದೆ. ಅದರಲ್ಲೂ ಇದು ಮದುವೆ-ಸಮಾರಂಭಗಳ ಸೀಸನ್ ಆಗಿರುವುದರಿಂದ, ಈ ಬೆಲೆಗಳ ಏರಿಳಿತವು ಹೂಡಿಕೆದಾರರ ನಿದ್ದೆಗೆಡಿಸುತ್ತಿದೆ ಎನ್ನಬಹುದು.
ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ ಕೊಂಚ ತಣ್ಣಗಾದ ಬೆನ್ನಲ್ಲೇ ಚಿನ್ನದ ಬೆಲೆಯು ಭಾರಿ ಪ್ರಮಾಣದಲ್ಲಿ ಏರಿಳಿತ ನೋಡುತ್ತಿದೆ. ಈ ಕುಸಿತವು ಮುಖ್ಯವಾಗಿ ಭಾರತ-ಪಾಕಿಸ್ತಾನ ಉದ್ವಿಗ್ನತೆ ಮತ್ತು ದುರ್ಬಲ ಜಾಗತಿಕ ಬೇಡಿಕೆಯಿಂದಾಗಿ ಸಂಭವಿಸಿದೆ. ಹೆಚ್ಚುವರಿಯಾಗಿ, ಯುಎಸ್ ಮತ್ತು ಚೀನಾ ಎರಡೂ ಸುಂಕ ಹೆಚ್ಚಳವನ್ನು 90 ದಿನಗಳವರೆಗೆ ವಿರಾಮಗೊಳಿಸಲು ಒಪ್ಪಿಕೊಂಡ ನಂತರ ಅಂತರರಾಷ್ಟ್ರೀಯ ಭಾವನೆ ಬದಲಾಯಿತು, ಇದು ಸುರಕ್ಷಿತ ಸ್ವತ್ತುಗಳ ತಕ್ಷಣದ ಆಕರ್ಷಣೆಯನ್ನು ಕಡಿಮೆ ಮಾಡಿತು.
ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 22 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,720 ಇತ್ತು. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 87 ಸಾವಿರದ 200 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ ₹8,72,000 ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಅಷ್ಟೇ ಇದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 24 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,513 ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ ₹95,130 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ ₹9,51,300 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 18 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 18 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,135 ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ ₹71,350 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ ₹7,13,500 ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,185 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,735 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,528 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,147 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,513 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,030 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,851 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,389 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,725 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,518 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,139 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹97 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ ₹970 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹9,700 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹97,000 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿ ಪ್ರಕಾರ ಮೇ 16ರಂದು, 4:29 GMT ವೇಳೆಗೆ ಸ್ಪಾಟ್ ಚಿನ್ನದ ಬೆಲೆ 0.8% ರಷ್ಟು ಇಳಿಕೆ ನೋಡಿದೆ. ಅಲ್ಲದೇ ಸ್ಪಾಟ್ ಚಿನ್ನದ ದರವು ಪ್ರತಿ ಔನ್ಸ್‌ಗೆ $3,213.56ರಷ್ಟು ವಹಿವಾಟು ನಡೆಸಿದೆ. 2025ರ ಮೇ ತಿಂಗಳಲ್ಲಿ ಬಂಗಾರದ ಮೌಲ್ಯ ತೀವ್ರ ಕುಸಿತಕ್ಕೊಳಗಾಗಿದ್ದು, ಡಾಲರ್ ಬಲ, ವ್ಯಾಪಾರ ಚಟುವಟಿಕೆಗಳು ಸ್ಥಿರವಾಗಿರುವುದು ಮತ್ತು ಗರಿಷ್ಠ ಬಡ್ಡಿದರ ನಿರೀಕ್ಷೆಗಳೇ ಇದರ ಹಿಂದೆ ಪ್ರಮುಖ ಕಾರಣಗಳಾಗಿವೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications