ಮಹಿಳೆಯರಿಗೆ ಇಂದು ಕಹಿಸುದ್ದಿ ಸಿಕ್ಕಿಂದತಾಗಿದೆ..ಏಕೆಂದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಚಿನ್ನ ಭಾರತದಲ್ಲಿ ಪ್ರತಿಷ್ಠೆಯ ಸಂಕೇತವಾಗಿರುವುದರಿಂದ, ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮೆಚ್ಚು. ಚಿನ್ನದ ಬೆಲೆಯಲ್ಲಿ ಇಂದಾದರೂ ಕಡಿಮೆಯಾಗುತ್ತಾ ಎಂದು ಮಹಿಳೆಯರು ಕಾಯುತ್ತಲೇ ಇರುತ್ತಾರೆ. ಆದರೆ ಚಿನ್ನದ ಬೆಲೆಯಲ್ಲಿ ದಿನೇ ದಿನೆ ಏರಿಕೆಯಾಗುತ್ತಿರುವುದು ಮಹಿಳೆಯರ ಪಾಲಿಗೆ ನಿಜಕ್ಕೂ ಕಹಿಸುದ್ದಿಯಾಗಿದೆ. ಚಿನ್ನವು ಪ್ರತಿಷ್ಠೆಯ ಸಂಕೇತವಾಗಿದ್ದು, ಇದೊಂದು ದೊಡ್ಡ ಸಂಪತ್ತಿಗೆ ಸಮಾನವಾಗಿದೆ. ಇದರ ಬೆಲೆ ದಿನದಿಂದ ದಿನಕ್ಕೆ ಭೂಮಿಗಿಂತ ತೂಕವಾಗುತ್ತಿದ್ದು, ಬೇಡಿಕೆಯಂತೂ ಎಂದೂ ಕಡಿಮೆಯಾಗುವ ಮಾತಿಲ್ಲ ಎನ್ನುವಂತಾಗಿದೆ.

ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ. ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ.
ಸಭೆ-ಸಮಾರಂಭಗಳಲ್ಲಿ ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ಇನ್ನು ಭಾರತದಲ್ಲಿ ಚಿನ್ನಕ್ಕೆ ಅದರದ್ದೇ ಆದ ಮಹತ್ವವಿದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ, 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,065 ಇದೆ. ಅಂದರೆ ನಿನ್ನೆ ₹8,020 ಆಗಿದ್ದು ಇಂದು ₹45 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 80 ಸಾವಿರದ 650 ರೂ. ಇದೆ. ಅಂದರೆ ನಿನ್ನೆ 80 ಸಾವಿರದ 200 ರೂ. ಆಗಿದ್ದು ಇಂದು ₹450 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 6 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 2 ಸಾವಿರ ರೂ. ಆಗಿದ್ದು ಇಂದು ₹4,500 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,798 ಇದೆ. ಅಂದರೆ ನಿನ್ನೆಯ ಬೆಲೆ ₹8,749 ಆಗಿದ್ದು ಇಂದು ಪ್ರತಿ ಗ್ರಾಂಗೆ ₹49 ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 87 ಸಾವಿರದ 980 ರೂ. ಇದೆ. ಅಂದರೆ ನಿನ್ನೆಯ ಬೆಲೆ 87 ಸಾವಿರದ 490 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹490 ಏರಿಕೆಯಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷ 79 ಸಾವಿರದ 800 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 8 ಲಕ್ಷದ 74 ಸಾವಿರದ 200 ರೂ. ಆಗಿದ್ದು ಇಂದು ₹4,900 ಏರಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,599 ಇದೆ. ಅಂದರೆ ನಿನ್ನೆಯ ಬೆಲೆ ₹6,562 ಆಗಿದ್ದು ಇಂದು ಪ್ರತಿ ಗ್ರಾಂಗೆ ₹37 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 65 ಸಾವಿರದ 990 ರೂ. ಇದೆ. ಅಂದರೆ ನಿನ್ನೆಯ ಬೆಲೆ 65 ಸಾವಿರದ 620 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹370 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷ 59 ಸಾವಿರದ 900 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 56 ಸಾವಿರದ 200 ರೂ. ಆಗಿದ್ದು ಇಂದು ₹3,700 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,065 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,798 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,650 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,065 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,798 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,599 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,035 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,813 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,611 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,065 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,798 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,599 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,065 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,798 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,599 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,065 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,798 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,599 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,065 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,798 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,599 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹2 ರಷ್ಟು ಏರಿಕೆಯಾಗಿದೆ. ಅಂದರೆ ಇಂದಿನ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹100 ಇದೆ. ನಿನ್ನೆ ಈ ಬೆಲೆ ₹98 ಇತ್ತು. ಹಾಗೆಯೇ ಪ್ರತಿ 10 ಗ್ರಾಂ ಬೆಳ್ಳಿ ಬೆಲೆ ₹1,000 ಆಗಿದೆ. ನಿನ್ನೆ ಈ ಬೆಲೆ ₹980 ಆಗಿದ್ದು ಇಂದು ₹20 ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ಬೆಲೆ ಇಂದು, ₹10,000 ಆಗಿದೆ. ನಿನ್ನೆ ಈ ಬೆಲೆ ₹9,800 ಆಗಿತ್ತು. ಅಂದರೆ ಇಂದು ₹200 ಹೆಚ್ಚಾಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆ ಇಂದು ₹1,00,000 ಆಗಿದೆ. ನಿನ್ನೆ ಈ ₹98,000 ಆಗಿದ್ದು ಇಂದು ₹2,000 ಏರಿಕೆಯಾಗಿದೆ.
ಸ್ಪಾಟ್ ಚಿನ್ನದ ವಿವರ:
ಮಾರ್ಚ್ 12, 2025 ರಂದು, ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ $2,916.69ಗೆ ವಹಿವಾಟು ನಡೆದಿದೆ. ಮತ್ತು ಅಮೆರಿಕಾದ ಚಿನ್ನದ ಭವಿಷ್ಯವು ಸ್ವಲ್ಪ ಏರಿಕೆಯಿಂದ $2,922.30ಗೆ ವಹಿವಾಟು ನಡೆಯುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಿಂದ ಭಾರತದಲ್ಲಿಯೂ ಚಿನ್ನದ ದರಗಳು ಪ್ರಭಾವಿತವಾಗಿವೆ.
ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದನ್ನು ಗಮನಿಸಿದರೆ, ಒಟ್ಟು ಹೂಡಿಕೆಯಲ್ಲಿ ಶೇಕಡಾ 10-15ರಷ್ಟು ಚಿನ್ನದಲ್ಲಿ ಹೂಡಿಕೆ ಮಾಡುವುದು ಸೂಕ್ತ. ಏಕೆಂದರೆ ಅದು ಮುಂದಿನ ದಿನಗಳಲ್ಲಿ ಹೆಚ್ಚು ಲಾಭದಾಯಕವಾಗಿ ಕೈಗೆ ಸಿಗುತ್ತದೆ. ಹಾಗೆಯೇ ಚಿನ್ನದ ಬೆಲೆ ಗಗನಕ್ಕೇರಿರುವ ಸಂದರ್ಭದಲ್ಲಿ ಹೂಡಿಕೆ ಮಾಡುವುದನ್ನು ತಪ್ಪಿಸಿ, ಬೆಲೆ ಸ್ಥಿರವಾಗಿರುವಾಗ ಅಥವಾ ಇಳಿಕೆಯಾಗಿರುವಾಗ ಹೂಡಿಕೆ ಮಾಡುವುದು ಒಳಿತು.ಭೌತಿಕ ಚಿನ್ನದ ಬದಲು ಡಿಜಿಟಲ್ ಚಿನ್ನ ಅಥವಾ ಚಿನ್ನದ ಬಾಂಡ್‌ಗಳಲ್ಲಿ ಹೂಡಿಕೆ ಮಾಡುವುದು ಸುರಕ್ಷಿತ ಮತ್ತು ಅನುಕೂಲಕರ ಎಂದು ಪರಿಗಣಿಸಬಹುದಾಗಿದೆ.
ಇನ್ನು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಚಿನ್ನ, ಈಗಾಗಲೇ ದೊಡ್ಡ ಸಂಪತ್ತಿಗೆ ಸಮಾನವಾಗಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಹೂಡಿಕೆ ಮಾಡುವವರು ಕಾಯುವಿಕೆಯನ್ನು ಬಿಟ್ಟರೆ ಒಳಿತು. ಏಕೆಂದರೆ ಮುಂದಿನ ದಿನಗಳಲ್ಲಿ ಚಿನ್ನ ಕೊಳ್ಳಲು ಸಾಕಷ್ಟು ಪರದಾಡಬೇಕಾಗುತ್ತದೆ. ಚಿನ್ನದ ಬೆಲೆ ಇಳಿಕೆಯಾಗುತ್ತದೆ ಎಂಬುದನ್ನೇ ಕಾಯ್ದರೆ ಹೆಚ್ಚು ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ. ಹೀಗಾಗಿ ಹೂಡಿಕೆದಾರರು ತಮ್ಮ ಕೈಲಾದಷ್ಟು ಹಣವನ್ನು ಚಿನ್ನದ ಮೇಲೆ ಹಾಕಿದರೆ ಒಳ್ಳೆಯದು.


Click it and Unblock the Notifications