ಮಹಿಳೆಯರಿಗೆ ಮತ್ತೆ ಶಾಕ್..ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಕೂಡ ಚಿನ್ನದ ಬೆಲೆ ಭಾರಿ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಏರಿಕೆಯನ್ನೇ ನೋಡುತ್ತಿರುವ ಮಹಿಳೆಯರು, ಬೆಲೆ ಕಡಿಮೆ ಆಗುವ ದಿನಕ್ಕಾಗಿ ಕಾಯುತ್ತಿದ್ದಾರೆ. ಆದರೆ ವಾರದಲ್ಲಿ ಒಂದೆರಡು ದಿನ ಕೊಂಚವೆ ಕಡಿಮೆಯಾಗುವ ಚಿನ್ನದ ಬೆಲೆ, ಒಂದೇ ಬಾರಿ ಗಗನಕ್ಕೇರುತ್ತಿದೆ. ಇದು ನಿಜಕ್ಕೂ ಮಹಿಳೆಯರ ಪಾಲಿಗೆ ಶಾಕಿಂಗ್ ಸುದ್ದಿಯಾಗಿದೆ. ಚಿನ್ನವು ಪ್ರತಿಷ್ಠೆಯ ಸಂಕೇತವಾಗಿದ್ದು, ಇದೊಂದು ದೊಡ್ಡ ಸಂಪತ್ತಿಗೆ ಸಮಾನವಾಗಿದೆ. ಇದರ ಬೆಲೆ ದಿನದಿಂದ ದಿನಕ್ಕೆ ಭೂಮಿಗಿಂತ ತೂಕವಾಗುತ್ತಿದ್ದು, ಬೇಡಿಕೆಯಂತೂ ಎಂದೂ ಕಡಿಮೆಯಾಗುವ ಮಾತಿಲ್ಲ ಎನ್ನುವಂತಾಗಿದೆ.

ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ಹೆಚ್ಚಿನ ಬೇಡಿಕೆಯಾದಾಗ ಬೆಲೆ ಏರುತ್ತದೆ ಮತ್ತು ಕಡಿಮೆಯಾಗಿದರೆ ಇಳಿಯಬಹುದು. ಹೀಗಾಗಿ, ಚಿನ್ನ ಖರೀದಿಸಲು ಅಥವಾ ಹೂಡಿಕೆ ಮಾಡಲು ನಿರ್ಧಾರ ತೆಗೆದುಕೊಳ್ಳುವ ಮುನ್ನ ದೈನಂದಿನ ಬೆಲೆಗಳ ಹೋಲಿಕೆ ಮಾಡುವುದು ಉತ್ತಮ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ. ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ.
ಸಭೆ-ಸಮಾರಂಭಗಳಲ್ಲಿ ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ಇನ್ನು ಭಾರತದಲ್ಲಿ ಚಿನ್ನಕ್ಕೆ ಅದರದ್ದೇ ಆದ ಮಹತ್ವವಿದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ
22 ಕ್ಯಾರಟ್ ಚಿನ್ನದ ಬೆಲೆ
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ, 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,120 ಇದೆ. ಅಂದರೆ ನಿನ್ನೆ ₹8,065 ಆಗಿದ್ದು ಇಂದು ₹55 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 81 ಸಾವಿರದ 200 ರೂ. ಇದೆ. ಅಂದರೆ ನಿನ್ನೆ 80 ಸಾವಿರದ 650 ರೂ. ಆಗಿದ್ದು ಇಂದು ₹550 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 12 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 6 ಸಾವಿರದ 500 ರೂ. ಆಗಿದ್ದು ಇಂದು ₹5,500 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ
24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,858 ಇದೆ. ಅಂದರೆ ನಿನ್ನೆಯ ಬೆಲೆ ₹8,798 ಆಗಿದ್ದು ಇಂದು ಪ್ರತಿ ಗ್ರಾಂಗೆ ₹60 ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 88 ಸಾವಿರದ 580 ರೂ. ಇದೆ. ಅಂದರೆ ನಿನ್ನೆಯ ಬೆಲೆ 87 ಸಾವಿರದ 980 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹600 ಏರಿಕೆಯಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷ 85 ಸಾವಿರದ 800 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 8 ಲಕ್ಷದ 79 ಸಾವಿರದ 800 ರೂ. ಆಗಿದ್ದು ಇಂದು ₹6,000 ಏರಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,644 ಇದೆ. ಅಂದರೆ ನಿನ್ನೆಯ ಬೆಲೆ ₹6,599 ಆಗಿದ್ದು ಇಂದು ಪ್ರತಿ ಗ್ರಾಂಗೆ ₹45 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 66 ಸಾವಿರದ 440 ರೂ. ಇದೆ. ಅಂದರೆ ನಿನ್ನೆಯ ಬೆಲೆ 65 ಸಾವಿರದ 990 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹450 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷ 64 ಸಾವಿರದ 400 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 59 ಸಾವಿರದ 900 ರೂ. ಆಗಿದ್ದು ಇಂದು ₹4,500 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,120 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,858 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,695 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,120 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,858 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,644 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,135 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,873 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,656 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,120 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,858 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,644 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,120 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,858 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,644 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,120 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,858 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,644 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,120 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,858 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,644 ಆಗಿದೆ.
ಭಾರತದಲ್ಲಿ ಬೆಳ್ಳಿ ಬೆಲೆ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹1 ರಷ್ಟು ಏರಿಕೆಯಾಗಿದೆ. ಅಂದರೆ ಇಂದಿನ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹101 ಇದೆ. ನಿನ್ನೆ ಈ ಬೆಲೆ ₹100 ಇತ್ತು. ಹಾಗೆಯೇ ಪ್ರತಿ 10 ಗ್ರಾಂ ಬೆಳ್ಳಿ ಬೆಲೆ ₹1,010 ಆಗಿದೆ. ನಿನ್ನೆ ಈ ಬೆಲೆ ₹1,000 ಆಗಿದ್ದು ಇಂದು ₹10 ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ಬೆಲೆ ಇಂದು, ₹10,100 ಆಗಿದೆ. ನಿನ್ನೆ ಈ ಬೆಲೆ ₹10,000 ಆಗಿತ್ತು. ಅಂದರೆ ಇಂದು ₹100 ಹೆಚ್ಚಾಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆ ಇಂದು ₹1,01,000 ಆಗಿದೆ. ನಿನ್ನೆ ಈ ₹1,00,000 ಆಗಿದ್ದು ಇಂದು ₹1,000 ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ವರದಿ ಪ್ರಕಾರ ಇಂದು (ಮಾರ್ಚ್ 13) 0300 GMT ವೇಳೆಗೆ ಸ್ಪಾಟ್ ಚಿನ್ನವು ಪ್ರತಿ ಔನ್ಸ್‌ಗೆ ಶೇ.0.4 ಏರಿಕೆಯಾಗಿ $2,943.66 ಕ್ಕೆ ತಲುಪಿದೆ. ಆದರೆ ಯುಎಸ್ ಚಿನ್ನ ಪ್ರತಿ ಔನ್ಸ್‌ಗೆ ಶೇ.0.2 ಏರಿಕೆಯಾಗಿ $2,951.90 ಕ್ಕೆ ತಲುಪಿದೆ.ಸ್ಪಾಟ್ ಬೆಳ್ಳಿ ಕೂಡ ಪ್ರತಿ ಔನ್ಸ್‌ಗೆ ಶೇ. 0.1ಏರಿಕೆಯಾಗಿ $33.26 ಕ್ಕೆ ತಲುಪಿದೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿನ್ನೆ (ಮಾರ್ಚ್ 12) ಕೆನಡಾದ ಉಕ್ಕು ಮತ್ತು ಅಲ್ಯೂಮಿನಿಯಂ ಮೇಲೆ ತೆರಿಗೆಯನ್ನು 50% ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದರು. ಆದರೆ, ನಂತರ ತಮ್ಮ ವಾಣಿಜ್ಯ ಯುದ್ಧದ ಬೆದರಿಕೆಯನ್ನು ಹಿಂಪಡೆದು, ಅದರ ಪ್ರಮಾಣವನ್ನು ಕಡಿಮೆ ಮಾಡಿದರು. ಅದೇ ಸಮಯದಲ್ಲಿ, ಒಂಟಾರಿಯೋ ಪ್ರೀಮಿಯರ್ ಡಗ್ ಫೋರ್ಡ್ ಅಮೇರಿಕಾದಿಂದ ವಿದ್ಯುತ್ ಆಮದು ಮೇಲೆ ಯೋಜಿಸಿದ್ದ 25% ಹೆಚ್ಚುವರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರು.
ಈ ಬೆಳವಣಿಗೆಗಳು ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಹೂಡಿಕೆದಾರರು ಅಮೇರಿಕಾ-ಕನಡಾ ವ್ಯಾಪಾರ ಸಂಬಂಧದ ಬದಲಾವಣೆಗಳನ್ನು ನಿಗಾ ವಹಿಸುತ್ತಿದ್ದಾರೆ. ಚಿನ್ನವು ಅನಿಶ್ಚಿತ ಆರ್ಥಿಕ ಪರಿಸ್ಥಿತಿಯಲ್ಲಿ ಸುರಕ್ಷಿತ ಹೂಡಿಕೆ ಆಯ್ಕೆಯಾಗಿ ಕಾರ್ಯನಿರ್ವಹಿಸುವ ಕಾರಣ, ಅದರ ದರವು ಕಾನೂನು ಮತ್ತು ಆರ್ಥಿಕ ನೀತಿಗಳ ಬದಲಾವಣೆಯಿಂದ ಪ್ರಭಾವಿತವಾಗಬಹುದು.


Click it and Unblock the Notifications