ಮಹಿಳೆಯರಿಗೆ ಕಹಿಸುದ್ದಿ ಸಿಕ್ಕಿದೆ..ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆ ದಿಢೀರ್ ಏರಿಕೆಯಾಗಿದೆ. ಒಂದು ದಿನ ಕೊಂಚವೇ ಬೆಲೆಗಳಲ್ಲಿ ಇಳಿಮುಖವಾಗು ಚಿನ್ನ, ವಾರವಿಡೀ ಧನಾತ್ಮಕವಾಗಿರುತ್ತದೆ. ಹಾಗೆಯೇ ಇಂದು ಕೂಡ ಚಿನ್ನದ ಬೆಲೆ ಏರಿಕೆಯಾಗಿದೆ. ಭಾರತೀಯರ ಪಾಲಿನ ಪ್ರತಿಷ್ಠೆಯ ಸಂಕೇತವೂ ಆಗಿರುವ, ಮಧ್ಯಮ ವರ್ಗದ ಜನರ ಪಾಲಿನ ದೊಡ್ಡ ಆಸ್ತಿಯೂ ಆಗಿರುವ ಚಿನ್ನಕ್ಕೆ ಹಿಂದೆಂದೂ ಡಿಮ್ಯಾಂಡ್ ಕಡಿಮೆಯಾಗಿಲ್ಲ, ಹಾಗೆಯೇ ಇನ್ನೆಂದೂ ಕಡಿಮೆಯೂ ಆಗುವುದಿಲ್ಲ ಎಂಬುದಕ್ಕೆ ಈ ಬೆಳವಣಿಗೆಗಳೇ ಸಾಕ್ಷಿಯಾಗಿವೆ.

ಚಿನ್ನವನ್ನು ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಮಾತ್ರವಲ್ಲ, ಸಾಂಸ್ಕೃತಿಕ ಮತ್ತು ವೈಯಕ್ತಿಕ ಹೂಡಿಕೆಗಳ ದೃಷ್ಟಿಯಿಂದಲೂ ಅತ್ಯಂತ ಪ್ರಾಮುಖ್ಯತೆಯಿಂದ ಪರಿಗಣಿಸಲಾಗುತ್ತದೆ. ಮದುವೆಗಳು, ಹಬ್ಬಗಳು, ಮತ್ತು ಹೂಡಿಕೆ ಉದ್ದೇಶಗಳಿಗಾಗಿ ಚಿನ್ನ ಖರೀದಿಯು ಭಾರತೀಯ ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಚಿನ್ನದ ಬೆಲೆಯಲ್ಲಿ ಆಗುವ ಏರಿಳಿತವು ಗ್ರಾಹಕರಿಗೆ ಮತ್ತು ಹೂಡಿಕೆದಾರರಿಗೆ ತೀವ್ರವಾದ ಪ್ರಭಾವ ಬೀರುತ್ತದೆ.
ಇತ್ತೀಚಿನ ದಿನಗಳಲ್ಲಿ ಅಂತರಾಷ್ಟ್ರೀಯ ಮತ್ತು ಸ್ಥಳೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ ಕಂಡುಬರುತ್ತಿದೆ. ವಿವಿಧ ಆರ್ಥಿಕ ಮತ್ತು ಭೌಗೋಳಿಕ ಕಾರಣಗಳ ಕಾರಣಕ್ಕೆ ಚಿನ್ನದ ದರಗಳು ಹೆಚ್ಚಾಗುತ್ತಿದ್ದು, ಇದರಿಂದಾಗಿ ಚಿನ್ನದ ಹೂಡಿಕೆ ಮತ್ತು ಖರೀದಿ ಸಂಬಂಧಿತ ಚಟುವಟಿಕೆಗಳು ವ್ಯಾಪಕ ಪ್ರಭಾವ ಅನುಭವಿಸುತ್ತಿವೆ. ಇನ್ನು ಭಾರತದಲ್ಲಿ ಚಿನ್ನಕ್ಕೆ ಅದರದ್ದೇ ಆದ ಮಹತ್ವವಿದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ
22 ಕ್ಯಾರಟ್ ಚಿನ್ನದ ಬೆಲೆ
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ, 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,050 ಇದೆ. ಅಂದರೆ ನಿನ್ನೆ ₹8,040 ಆಗಿದ್ದು ಇಂದು ₹10 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 80 ಸಾವಿರದ 500 ರೂ. ಇದೆ. ಅಂದರೆ ನಿನ್ನೆ 80 ಸಾವಿರದ 400 ರೂ. ಆಗಿದ್ದು ಇಂದು 100 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 5 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 4 ಸಾವಿರ ರೂ. ಆಗಿದ್ದು ಇಂದು ₹1,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ
24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,782 ಇದೆ. ಅಂದರೆ ನಿನ್ನೆಯ ಬೆಲೆ ₹8,771 ಆಗಿದ್ದು ಇಂದು ಪ್ರತಿ ಗ್ರಾಂಗೆ ₹11 ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 87 ಸಾವಿರದ 820 ರೂ. ಇದೆ. ಅಂದರೆ ನಿನ್ನೆಯ ಬೆಲೆ 87 ಸಾವಿರದ 710 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ 110 ಏರಿಕೆಯಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷ 78 ಸಾವಿರದ 200 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 8 ಲಕ್ಷದ 77 ಸಾವಿರದ 100 ರೂ. ಆಗಿದ್ದು ಇಂದು ₹1,100 ಏರಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,587 ಇದೆ. ಅಂದರೆ ನಿನ್ನೆಯ ಬೆಲೆ ₹6,578 ಆಗಿದ್ದು ಇಂದು ಪ್ರತಿ ಗ್ರಾಂಗೆ ₹9 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 65 ಸಾವಿರದ 870 ರೂ. ಇದೆ. ಅಂದರೆ ನಿನ್ನೆಯ ಬೆಲೆ 65 ಸಾವಿರದ 780 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹90 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷ 58 ಸಾವಿರದ 700 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 57 ಸಾವಿರದ 800 ರೂ. ಆಗಿದ್ದು ಇಂದು ₹900 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,050 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,782 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,635 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,050 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,782 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,587 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,065 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,797 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,599 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,050 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,782 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,587 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,050 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,782 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,587 ಆಗಿದೆ.
ಹೈದರಾಬಾದ್: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,050 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,782 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,587 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಭಾರತೀಯರಿಗೆ ಬೆಳ್ಳಿ ವಿಚಾರದಲ್ಲಿ ಕೊಂಚ ಖುಷಿ ಸಿಕ್ಕಿದಂತಾಗಿದೆ. ಏಕೆಂದರೆ ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹0.10ರಷ್ಟು ಇಳಿಕೆಯಾಗಿದೆ. ಅಂದರೆ ಇಂದಿನ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹99 ಇದೆ. ನಿನ್ನೆ ಈ ಬೆಲೆ ₹99.10 ಇತ್ತು. ಹಾಗೆಯೇ ಪ್ರತಿ 10 ಗ್ರಾಂ ಬೆಳ್ಳಿ ಬೆಲೆ ₹990 ಆಗಿದೆ. ನಿನ್ನೆ ಈ ಬೆಲೆ ₹991 ಆಗಿದ್ದು ಇಂದು ₹1 ಇಳಿಕೆಯಾಗಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ಬೆಲೆ ಇಂದು, ₹9,900 ಆಗಿದೆ. ನಿನ್ನೆ ಈ ಬೆಲೆ ₹9,910 ಆಗಿತ್ತು. ಅಂದರೆ ಇಂದು ₹10 ಕಡಿಮೆಯಾಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆ ಇಂದು ₹99,000 ಆಗಿದೆ. ನಿನ್ನೆ ಈ ₹99,100 ಆಗಿದ್ದು ಇಂದು ₹100 ಇಳಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ಇಂದು ಚಿನ್ನದ ಸ್ಪಾಟ್ ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿದೆ. ಅಮೇರಿಕನ್ ಡಾಲರ್‌ನ ದುರ್ಬಲತೆ ಮತ್ತು ಜಾಗತಿಕ ವಾಣಿಜ್ಯ ಉದ್ವಿಗ್ನತೆಗಳ ನಡುವಿನ ಸುರಕ್ಷಿತ ಹೂಡಿಕೆಗಳು ಹೆಚ್ಚಳವಾದ ಕಾರಣದಿಂದ, ಸ್ಪಾಟ್ ಚಿನ್ನದ ಬೆಲೆ 0.1% ಏರಿಕೆ ಕಂಡು, ಪ್ರತಿ ಔನ್ಸ್‌ಗೆ $2,912.79 ತಲುಪಿದೆ. ಅದೇ ಸಮಯದಲ್ಲಿ, ಅಮೇರಿಕಾದ ಚಿನ್ನದ ಭವಿಷ್ಯಾವಾಣಿ ದರಗಳು 0.2% ಏರಿಕೆ ಕಂಡು, ಪ್ರತಿ ಔನ್ಸ್‌ಗೆ $2,919.40 ಆಗಿದೆ.


Click it and Unblock the Notifications