ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಯಥಾಸ್ಥಿತಿಯನ್ನು ಕಾಯ್ದಿರಿಸಿಕೊಂಡಿದೆ. ಚಿನ್ನದ ಬೆಲೆಯಲ್ಲಿ ನಿನ್ನೆಗಿಂತ ಇಂದಿಗೆ ಯಾವುದೇ ರೀತಿಯ ಏರಿಕೆಯಾಗಲಿ, ಇಳಿಕೆಯಾಗಲಿ ಕಂಡುಬಂದಿಲ್ಲ. ಇದರಿಂದ ಮಹಿಳೆಯರ ಪಾಲಿಗೆ ಇಂದು ಖುಷಿ ಸುದ್ದಿಯೂ ಇಲ್ಲ. ಹಾಗೆಯೇ ಕಹಿ ಸುದ್ದಿಯೂ ಇಲ್ಲ. ಚಿನ್ನದ ಬೆಲೆ ಇಳಿಕೆಯಾಗದಿದ್ದರೂ ಏರಿಕೆಯಾಗಿಲ್ಲ ಎಂಬ ಸಮಾಧಾನಕರ ಸುದ್ದಿ ಸಿಕ್ಕಿದೆ. ಭಾರತದಲ್ಲಿ ಚಿನ್ನದ ಬೆಲೆ ಹಾವು-ಏಣಿಯಾಟ ಆಡುತ್ತಿದೆ. ಈ ವಾರದಲ್ಲಿ ಚಿನ್ನದ ಬೆಲೆ ಏರಿಕೆ-ಇಳಿಕೆ ಎರಡನ್ನೂ ನೋಡಿದೆ. ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಸ್ಥಿರವಾಗಿದೆ.

ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಎಂತಲೂ ಭಾರತದಲ್ಲಿ ಪ್ರತಿನಿಧಿಸಲಾಗುತ್ತದೆ. ಸಭೆ ಸಮಾರಂಭಗಳಲ್ಲಿ ಒಡವೆಯೇ ಆಕರ್ಷಣೆ. ಹೀಗಾಗಿ ಮಹಿಳೆಯರಿಗೆ ಅತಿ ಪ್ರಿಯಾವಾದುದ್ದು ಈ ಚಿನ್ನ. ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 22 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,005 ಇತ್ತು. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 90,050 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 500 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಅಷ್ಟೇ ಇದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 24 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,824 ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 98,240 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 82 ಸಾವಿರದ 400 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 18 ಕ್ಯಾರಟ್ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 18 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,368 ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 73 ಸಾವಿರದ 680 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷದ 36 ಸಾವಿರದ 800 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,460 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,020 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,834 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,005 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,824 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,368 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,010 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,829 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,372 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,010 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,829 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,372 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹100.90 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ ₹1,009 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹10,090 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹1,00,900 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಶುಕ್ರವಾರ ( ಏಪ್ರಿಲ್ 25) ಸ್ಪಾಟ್ ಗೋಲ್ಡ್ ಬೆಲೆಯಲ್ಲಿ ಸರಾಸರಿ 0.8% ಇಳಿಕೆಯಾಗಿದೆ. ಅಂದರೆ 0421 GMT ವೇಳೆಯಲ್ಲಿ ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ಗೆ $3,322.36 ತಲುಪಿ ವ್ಯವಹಾರ ನಡೆಸಿದೆ. ಅದರಂತೆಯೇ ಯುಸ್‌ನ ಫ್ಯೂಚರ್ ಗೋಲ್ಡ್ ಕೂಡ 0.5% ಇಳಿಕೆಯಾಗಿದ್ದು, ಪ್ರತಿ ಔನ್ಸ್‌ಗೆ $3,332.90 ಆಗಿ ಸ್ಥಿರವಾಗಿದೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications