ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಕೂಡ ಚಿನ್ನದ ಬೆಲೆ ದಾಖಲೆಯ ಏರಿಕೆ ಕಂಡಿದೆ. ನಿನ್ನೆ ಕೂಡ ಚಿನ್ನದ ಬೆಲೆಯ ಏರಿಕೆ ಈ ತಿಂಗಳ ಗರಿಷ್ಠ ಏರಿಕೆಯಾಗಿತ್ತು. ಇದೀಗ ಇಂದಿನ ಬೆಲೆ ನೋಡಿದರೆ ಮತ್ತಷ್ಟು ಕುಸಿದು ಬೀಳುವಂತಿದೆ. ಚಿನ್ನದ ಮೇಲೆ ಹೂಡಿಕೆ ಮಾಡುವ ಹೂಡಿಕೆದಾರರಿಗೆ ಇದು ನಿಜಕ್ಕೂ ಶಾಕಿಂಗ್ ಸುದ್ದಿ ಎನ್ನಬಹುದಾಗಿದೆ. ಭಾರೀ ಬೆಲೆ ಏರಿಕೆಯ ಹಿಂದೆ ಅಮೆರಿಕಾ-ಚೀನಾ ನಡುವಿನ ವ್ಯಾಪಾರ ಸಂಘರ್ಷ, ಯುದ್ಧ ಭೀತಿ ಹಾಗೂ ಜಾಗತಿಕ ಆರ್ಥಿಕ ಅಸ್ಥಿರತೆ ಪ್ರಮುಖ ಕಾರಣಗಳಾಗಿವೆ. ಇತ್ತೀಚಿನ ದಿನಗಳಲ್ಲಿ ಅಮೆರಿಕಾ ಮತ್ತು ಚೀನಾದ ನಡುವಿನ ಸಂಧಿ ಪ್ರಕ್ರಿಯೆ ವಿಫಲವಾಗಿರುವುದು, ಪರಸ್ಪರ ಸುಂಕ ಜಾರಿಗೆ ಮುಂದಾಗಿರುವುದು, ಜಾಗತಿಕ ಹೂಡಿಕೆದಾರರಲ್ಲಿ ಆತಂಕ ಹುಟ್ಟಿಸಿ, ಚಿನ್ನದತ್ತ ಹೂಡಿಕೆಯನ್ನು ಹೆಚ್ಚಿಸಿದೆ.

ಮಾರುಕಟ್ಟೆಗಳಲ್ಲಿ ಚಿನ್ನದ ಖರೀದಿ ಒಪ್ಪಂದಗಳು ಹೆಚ್ಚಾಗಿವೆ. ಹೂಡಿಕೆದಾರರು ಮುಂದಿನ ದಿನಗಳಲ್ಲಿ ಚಿನ್ನದ ದರ ಇನ್ನಷ್ಟು ಏರಲಿದೆ ಎಂಬ ನಿರೀಕ್ಷೆಯೊಂದಿಗೆ ಈಗಾಗಲೇ ಖರೀದಿಗೆ ಮುಕ್ತಾಯವಾಗಿದ್ದಾರೆ. ಇದರಿಂದ ತಕ್ಷಣದ ಬೆಲೆಗೆ ಸಹ ಬಲ ದೊರೆತಿದೆ. ಅಲ್ಲದೇ ಏಪ್ರಿಲ್-ಮೇ ತಿಂಗಳುಗಳಲ್ಲಿ ಸಾಮಾನ್ಯವಾಗಿ ಮದುವೆಗಳ ಸೀಸನ್ ಆರಂಭವಾಗುತ್ತದೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೇಡಿಕೆ ದೇಶೀಯವಾಗಿ ಸಹ ಇಳಿಕೆಯಾಗದೆ ಏರಿಕೆಯಾಗಿರುವುದಕ್ಕೆ ಪ್ರಮುಖ ಕಾರಣವಾಗಿರಬಹುದು. ಹಾಗಾದರೆ ಇಂದು ಭಾರತದಲ್ಲಿ ಚಿನ್ನದ ಬೆಲೆ ಎಷ್ಟಿದೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,745 ಇದೆ. ಅಂದರೆ ನಿನ್ನೆ ₹8,560 ಆಗಿದ್ದು ಇಂದು ₹185 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 87 ಸಾವಿರದ 450 ರೂ. ಇದೆ. ಅಂದರೆ ನಿನ್ನೆ 85 ಸಾವಿರದ 600ರೂ. ಆಗಿದ್ದು ಇಂದು ₹1,850 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 74 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 56 ಸಾವಿರ ರೂ. ಆಗಿದ್ದು ಇಂದು ₹18,500ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,540 ಇದೆ. ಅಂದರೆ ನಿನ್ನೆ ₹9,338 ಆಗಿದ್ದು ಇಂದು ₹202 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 95 ಸಾವಿರದ 400 ರೂ. ಇದೆ. ಅಂದರೆ ನಿನ್ನೆ 93 ಸಾವಿರದ 380 ರೂ. ಆಗಿದ್ದು ಇಂದು ₹2,020 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 54 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 54 ಸಾವಿರದ 800 ರೂ. ಆಗಿದ್ದು ಇಂದು ₹20,200ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,155 ಇದೆ. ಅಂದರೆ ನಿನ್ನೆಯ ಬೆಲೆ ₹7,004 ಆಗಿದ್ದು ಇಂದು ಪ್ರತಿ ಗ್ರಾಂಗೆ ₹151ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 71 ಸಾವಿರದ 550 ರೂ. ಇದೆ. ಅಂದರೆ ನಿನ್ನೆಯ ಬೆಲೆ 70ಸಾವಿರದ 040 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹1,510 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 15 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 400 ರೂ. ಆಗಿದ್ದು ಇಂದು ₹15,100 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,745 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,540 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,245ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,745ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,540 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,155ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,760 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,555 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,168 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,745ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,540 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,155 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,745ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,540 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,155 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,745ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,540 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,155 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,745ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,540 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,155 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,745ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,540 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,155 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,750 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,545ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,159 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,750 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,545ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,159 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಬೆಳ್ಳಿ ಬೆಲೆಯೂ ಏರಿಕೆಯಾಗಿದೆ. ಪ್ರತಿ ಗ್ರಾಂ ಬೆಳ್ಳಿಗೆ ಇಂದು ₹97.10ಆಗಿದೆ. ಅಂದರೆ ಈ ಬೆಲೆ ನಿನ್ನೆ ₹97ಆಗಿದ್ದು ಇಂದು ₹0.10 ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿಗೆ ಇಂದು ₹971ಆಗಿದೆ. ಅಂದರೆ ಈ ಬೆಲೆ ನಿನ್ನೆ ₹970 ಆಗಿದ್ದು ಇಂದು ₹1 ಏರಿಕೆಯಾಗಿದೆ. 100 ಗ್ರಾಂ ಬೆಳ್ಳಿಗೆ ಇಂದು ₹9,710ಆಗಿದೆ. ಅಂದರೆ ಈ ಬೆಲೆ ನಿನ್ನೆ ₹9,700ಆಗಿದ್ದು ಇಂದು ₹10ಏರಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹97,100ಆಗಿದೆ. ಅಂದರೆ ಈ ಬೆಲೆ ನಿನ್ನೆ ₹97,000ಆಗಿದ್ದು ಇಂದು ₹100 ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ಇಂದು (ಏಪ್ರಿಲ್ 11) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಚಿನ್ನದ ದರ ಬೆಳಿಗ್ಗೆ 3:50 (GMT) ರ ಸಮಯಕ್ಕೆ 1.4% ಏರಿಕೆ ಆಗಿ ಪ್ರತಿ ಔನ್ಸ್‌ಗೆ $3,217.78 ಆಗಿತ್ತು. ನ್ನದ ಬೆಲೆ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರತಿ ಔನ್ಸ್‌ಗೆ $3,200 ಗಡಿ ದಾಟಿದೆ. ಶುಕ್ರವಾರ ಈ ಮಹತ್ವದ ಗರಿಷ್ಠ ಮಟ್ಟ ತಲುಪಲು ಕಾರಣವಾಗಿದ್ದು, ಅಮೆರಿಕ ಡಾಲರ್ ಮೌಲ್ಯ ಕುಸಿತ ಮತ್ತು ಚುರುಕಾಗುತ್ತಿರುವ ವ್ಯಾಪಾರ ಯುದ್ಧ. ಈ ಅನಿಶ್ಚಿತ ಪರಿಸ್ಥಿತಿಯಲ್ಲಿ ಹೂಡಿಕೆದಾರರು ಭದ್ರತಾ ಹೂಡಿಕೆಗಳಾದ ಚಿನ್ನದತ್ತ ಓಡಿದ್ದಾರೆ. ಇದು ಚಿನ್ನದ ಮೇಲಿನ ವಿಶ್ವಮಟ್ಟದ ಭರವಸೆಯನ್ನೂ ತೋರಿಸುತ್ತದೆ, ವಿಶೇಷವಾಗಿ ಭೀತಿಯ ಪರಿಸ್ಥಿತಿಗಳಲ್ಲೂ ಅದು ಸುರಕ್ಷಿತ ಹೂಡಿಕೆ ಆಯ್ಕೆ ಎಂಬುದನ್ನು ಪುಷ್ಟಿಸುತ್ತದೆ.
ಟ್ರಂಪ್ ಅವರ ಈ ತೀರ್ಮಾನದಿಂದ ತಕ್ಷಣವೇ ಏಷ್ಯಾದ ಷೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಪ್ರತಿಕ್ರಿಯೆ ಕಂಡುಬಂದಿತು. ಇದರಿಂದ ಹೂಡಿಕೆದಾರರಲ್ಲಿ ಭೀತಿಯಿಂದಾಗಿ ಉಂಟಾಗಿದ್ದ ಒತ್ತಡ ಕಡಿಮೆಯಾಯಿತು. ಈ ನಿರ್ಧಾರವು ಜಾಗತಿಕ ಆರ್ಥಿಕ ಸ್ಥಿತಿಗೆ ತಾತ್ಕಾಲಿಕ ಉಸಿರಾಟ ನೀಡಿದರೂ, ಮುಂದಿನ ದಿನಗಳಲ್ಲಿ ಟ್ರಂಪ್ ಆಡಳಿತದ ವ್ಯಾಪಾರ ನೀತಿ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರ ಬಗ್ಗೆ ಇನ್ನೂ ಅನಿಶ್ಚಿತತೆ ಇದೆ.
ಒಟ್ಟಿನಲ್ಲಿ, ಅಮೆರಿಕಾ-ಚೀನಾ ಸಂಘರ್ಷ, ಯುದ್ಧದ ಭೀತಿ, ರೂಪಾಯಿಯ ಮೌಲ್ಯ ಕುಸಿತ, ಜಾಗತಿಕ ಬ್ಯಾಂಕುಗಳ ಬಂಗಾರದ ಸಂಗ್ರಹ, ಹಾಗೂ ದೇಶೀಯ ಮದುವೆ ಅವಧಿಯ ಬೇಡಿಕೆಸೇರಿ ಎಲ್ಲ ಅಂಶಗಳ ಸಮೂಹ ಪರಿಣಾಮವಾಗಿ ಚಿನ್ನದ ದರ ಜಿಗಿತ ಕಂಡಿದೆ. ಹೀಗಾಗಿ ಹೂಡಿಕೆದಾರರು ಶೇರು ಮಾರುಕಟ್ಟೆ ಅಥವಾ ಕ್ರಿಪ್ಟೋ ಮಾರುಕಟ್ಟೆಯ ಬದಲು ಚಿನ್ನವನ್ನು ಭದ್ರ ಹೂಡಿಕೆ ಮಾಧ್ಯಮವೆಂದು ಆಯ್ಕೆ ಮಾಡುತ್ತಿದ್ದಾರೆ.


Click it and Unblock the Notifications