ಭಾರತದಲ್ಲಿ ಚಿನ್ನದ ಮೇಲಿನ ಡಿಮ್ಯಾಂಡ್ ದಿನೇ ದಿನೆ ಹೆಚ್ಚುತ್ತಿದೆ. ಯಾಕೆಂದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಚಿನ್ನ ಕೊಳ್ಳುವುದೇ ಬೇಡ, ಕೇವಲ ಬೆಲೆ ಕೇಳಿದ್ರೇನೆ ಭಾರತೀಯರು ಸುಸ್ತಾಗಿ ಬಿಡುತ್ತಾರೆ. ಹಾಗೆಯೇ ನಿನ್ನೆ ಮೊನ್ನೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದ ಮಹಿಳೆಯರು, ಇಂದಾದರೂ ಬೆಲೆ ಇಳಿಕೆಯಾಗುತ್ತದಾ ಎಂದು ಕಾದು ಕುಳಿತಿದ್ದರು. ಆದರೆ ಅವರಿಗೆ ಇಂದು ಕೂಡ ನಿರಾಸೆಯಾಗಿದೆ. ಏಕೆಂದರೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಚಿನ್ನ ಕೊಳ್ಳೋದೇ ಬೇಡ, ಕೇವಲ ಚಿನ್ನದ ಬೆಲೆ ಕೇಳಿದ್ರೆನೆ ಬೆವರಿಳಿಯುತ್ತದೆ. ಅಷ್ಟಾಗಿದೆ ಇಂದಿನ ಚಿನ್ನದ ಬೆಲೆಯಲ್ಲಿ ಏರಿಕೆ.

ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಎಂತಲೂ ಭಾರತದಲ್ಲಿ ಪ್ರತಿನಿಧಿಸಲಾಗುತ್ತದೆ. ಸಭೆ ಸಮಾರಂಭಗಳಲ್ಲಿ ಒಡವೆಯೇ ಆಕರ್ಷಣೆ. ಹೀಗಾಗಿ ಮಹಿಳೆಯರಿಗೆ ಅತಿ ಪ್ರಿಯಾವಾದುದ್ದು ಈ ಚಿನ್ನ. ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಅದರಲ್ಲೂ ಇದು ಬೆಲೆ ಜಾಸ್ತಿಯಾಗುತ್ತಿದ್ದು, ಚಿನ್ನವನ್ನೇ ಉಡುಗೊರೆಯಾಗಿ ಕೊಟ್ಟರೆ ಮಹಿಳೆಯರ ಸಂತೋಷ ಆಕಾಶಕ್ಕೆ ಹಾರಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಒಂದು ಮಹತ್ವ ನೀಡಲಾಗಿದೆ. ಇದರ ಬೆಲೆ ಎಷ್ಟೇ ಹೆಚ್ಚಾದರೂ ಇದರ ಮೇಲಿನ ಪ್ರೀತಿ ಕಡಿಮೆಯಾಗುವುದಿಲ್ಲ.
ಇನ್ನು ಚಿನ್ನದ ಬೆಲೆ ಇಳಿಕೆಯಾಗಲಿ, ಏರಿಕೆಯಾಗಲಿ ಅದಕ್ಕೊಂದು ಕಾರಣವಿರುತ್ತದೆ. ಅದು ಒಂದೇ ಕಾರಣದಿಂದ ಇಳಿಕೆ ಹಾಗೂ ಏರಿಕೆಯನ್ನು ನೋಡುವುದಿಲ್ಲ. ಅಂದರೆ ಚಿನ್ನದ ಬೆಲೆ ಯಾವಾಗ ಏರಿಕೆಯಾಗುತ್ತದೆ ಎಂದರೆ ಅದು ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಹೀಗಾಗಿ ಚಿನ್ನದ ಬೇಡಿಕೆ ಹೆಚ್ಚಾಗುತ್ತದೆ. ಹಾಗೆಯೇ ಬೆಲೆಯೂ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ. ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಹಾಗಾದರೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,310 ಇದೆ. ಅಂದರೆ ನಿನ್ನೆ ₹8,290 ಆಗಿದ್ದು ಇಂದು ₹20 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 83 ಸಾವಿರದ 100 ರೂ. ಇದೆ. ಅಂದರೆ ನಿನ್ನೆ 82 ಸಾವಿರದ 900 ರೂ. ಆಗಿದ್ದು ಇಂದು ₹200 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 31 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 29 ಸಾವಿರ ರೂ. ಆಗಿದ್ದು ಇಂದು ₹2,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,066 ಇದೆ. ಅಂದರೆ ನಿನ್ನೆಯ ಬೆಲೆ ₹9,044 ಆಗಿದ್ದು ಇಂದು ಪ್ರತಿ ಗ್ರಾಂಗೆ ₹44 ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 90 ಸಾವಿರದ 660 ರೂ. ಇದೆ. ಅಂದರೆ ನಿನ್ನೆಯ ಬೆಲೆ 90 ಸಾವಿರದ 440 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹220 ಏರಿಕೆಯಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 6 ಸಾವಿರದ 600 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 9 ಲಕ್ಷದ 4 ಸಾವಿರದ 400 ರೂ. ಆಗಿದ್ದು ಇಂದು ₹2,200 ಏರಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹6,799 ಇದೆ. ಅಂದರೆ ನಿನ್ನೆಯ ಬೆಲೆ ₹6,783 ಆಗಿದ್ದು ಇಂದು ಪ್ರತಿ ಗ್ರಾಂಗೆ ₹16.10 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 67 ಸಾವಿರದ 991 ರೂ. ಇದೆ. ಅಂದರೆ ನಿನ್ನೆಯ ಬೆಲೆ 67 ಸಾವಿರದ 830 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹161 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 6 ಲಕ್ಷ 79 ಸಾವಿರದ 910 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 6 ಲಕ್ಷದ 78 ಸಾವಿರದ 300 ರೂ. ಆಗಿದ್ದು ಇಂದು ₹1,610 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,310 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,066 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,855 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,310 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,066 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,799 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,325 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,081 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,811 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,310 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,066 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,799 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,310 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,066 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,799 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,310 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,066 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,799 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,310 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,066 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,799 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,310 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,066 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,799 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,315 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,071 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,803 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,315 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,071 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹6,803 ಆಗಿದೆ..
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ ಕಾಣಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹0.10 ರಷ್ಟು ಏರಿಕೆಯಾಗಿದೆ. ಅಂದರೆ ಇಂದಿನ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹105.10 ಇದೆ. ನಿನ್ನೆ ಈ ಬೆಲೆ ₹105 ಇತ್ತು. ಹಾಗೆಯೇ ಪ್ರತಿ 10 ಗ್ರಾಂ ಬೆಳ್ಳಿ ಬೆಲೆ ₹1,051 ಆಗಿದೆ. ನಿನ್ನೆ ಈ ಬೆಲೆ ₹1,050 ಆಗಿದ್ದು ಇಂದು ₹1 ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ಬೆಲೆ ಇಂದು, ₹10,510 ಆಗಿದೆ. ನಿನ್ನೆ ಈ ಬೆಲೆ ₹10,500 ಆಗಿತ್ತು. ಅಂದರೆ ಇಂದು ₹10 ಹೆಚ್ಚಾಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆ ಇಂದು ₹1,05,100 ಆಗಿದೆ. ನಿನ್ನೆ ಈ ₹1,05,000 ಆಗಿದ್ದು ಇಂದು ₹100 ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ಮಾರ್ಚ್ 20, 2025ರಂದು ಸ್ಪಾಟ್ ಗೋಲ್ಡ್ ಬೆಲೆ 0350 GMT ವೇಳೆಗೆ, $3,048.37 ಪ್ರತಿ ಔನ್ಸ್‌ಗೆ ವಹಿವಾಟು ನಡೆಸಿದೆ. ವಹಿವಾಟಿನ ಆರಂಭಿಕ ಹಂತದಲ್ಲಿ, ಚಿನ್ನದ ದರವು ಇತಿಹಾಸದಲ್ಲೇ ಉನ್ನತ ಮಟ್ಟವಾದ $3,055.96 ಅನ್ನು ತಲುಪಿತ್ತು. ಆದರೆ ಕೊಂಚ ಕುಸಿತ ಕಂಡು $3,048.37 ಕ್ಕೆ ಸ್ಥಿರಗೊಂಡಿತು. ಅಮೆರಿಕಾ ಫೆಡರಲ್ ರಿಸರ್ವ್‌ನ ಬಡ್ಡಿದರ ನೀತಿ, ಮುದ್ರಣೋತ್ಪನ್ನ ಚಿಂತನೆಗಳು, ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಗಳು ಈ ಬೆಳವಣಿಗೆಗಳಿಗೆ ಪ್ರಮುಖ ಕಾರಣವಾಗಿವೆ.


Click it and Unblock the Notifications