ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದೆರಡು ದಿನಗಳಲ್ಲಿ ಕೊಂಚವೇ ಇಳಿಕೆಯಾಗುವ ಚಿನ್ನ, ದೀಢೀರ್ ಅಂತಾ ಅತಿಹೆಚ್ಚು ಬೆಲೆಗೆ ಏರಿಕೆಯಾಗುತ್ತದೆ. ನಿನ್ನೆ ಮೊನ್ನೆಯ ದಿನಗಳಲ್ಲಿ ಸ್ವಲ್ಪವೇ ಇಳಿಕೆ ನೋಡಿದ್ದ ಚಿನ್ನದ ಬೆಲೆ, ಇಂದು ಆಘಾತ ನೀಡುವಷ್ಟು ಹೆಚ್ಚಾಗಿದೆ. ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ, ಚಿನ್ನವನ್ನು ಖರೀದಿಸಲು ಉತ್ಸುಕರಾಗಿರುವ ಗ್ರಾಹಕರಿಗೆ ಇದು ಅಚ್ಚರಿ ತರುತ್ತಿದೆ. ಏಪ್ರಿಲ್ 16, 2025ರ ಬೆಳಗ್ಗೆ ಬಿಡುಗಡೆಯಾದ ಅಧಿಕೃತ ದರಪಟ್ಟಿಯ ಪ್ರಕಾರ, ಎಲ್ಲಾ ಕ್ಯಾರೆಟ್‌ಗಳ ಬಂಗಾರದ ಬೆಲೆಯಲ್ಲಿ ಗಣನೀಯ ಏರಿಕೆಯನ್ನು ಗಮನಿಸಬಹುದಾಗಿದೆ.

ಬಂಗಾರವು ಸದಾ ಸುರಕ್ಷಿತ ಹೂಡಿಕೆ ಆಯ್ಕೆಯೆಂದು ಪರಿಗಣಿಸಲಾಗುತ್ತದೆ. ಇತ್ತೀಚಿನ ಬಂಡವಾಳ ಮಾರುಕಟ್ಟೆಯ ಅಸ್ಥಿರತೆಯ ಹಿನ್ನೆಲೆಯಲ್ಲಿ, ಹಲವು ಹೂಡಿಕಾದಾರರು ತಮ್ಮ ಹಣವನ್ನು ಚಿನ್ನದಲ್ಲಿ ಉಳಿಸಲು ಮುಂದಾಗುತ್ತಿದ್ದಾರೆ. ಚಿನ್ನದ ದರ ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆ ಕಾಣಬಹುದು ಎಂಬ ನಿರೀಕ್ಷೆ ಇದೆ. ಆದ್ದರಿಂದ, ಈಗಾಗಲೇ ಚಿನ್ನವನ್ನು ಹೂಡಿಕೆ ರೂಪದಲ್ಲಿ ಪರಿಗಣಿಸಲು ಇದು ಉತ್ತಮ ಕಾಲವಾಗಬಹುದು. ಆದರೆ ಚಿನ್ನದ ಬೆಲೆ ದಿನೇ ದಿನೆ ಏರಿಕೆಯಾಗುತ್ತಿದ್ದು, ಖರೀದಿದಾರರಿಗೆ ಆತಂಕ ಎದುರಾಗುತ್ತಿದೆ. ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ ಎಂಬುದನ್ನು ಮೊದಲು ನೋಡೋಣ. ಬಳಿಕ ಈ ಪರಿಯ ಏರಿಕೆಗೆ ನಿಖರ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,815 ಇದೆ. ಅಂದರೆ ನಿನ್ನೆ ₹8,720 ಆಗಿದ್ದು ಇಂದು ₹95 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 88 ಸಾವಿರದ 150 ರೂ. ಇದೆ. ಅಂದರೆ ನಿನ್ನೆ 87 ಸಾವಿರದ 200ರೂ. ಆಗಿದ್ದು ಇಂದು ₹950 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 81 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 72 ಸಾವಿರ ರೂ. ಆಗಿದ್ದು ಇಂದು ₹9,500ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,617 ಇದೆ. ಅಂದರೆ ನಿನ್ನೆ ₹9,518 ಆಗಿದ್ದು ಇಂದು ₹99 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 96 ಸಾವಿರದ 170 ರೂ. ಇದೆ. ಅಂದರೆ ನಿನ್ನೆ 95 ಸಾವಿರದ 180 ರೂ. ಆಗಿದ್ದು ಇಂದು ₹990ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 61 ಸಾವಿರದ 700 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 51 ಸಾವಿರದ 800 ರೂ. ಆಗಿದ್ದು ಇಂದು ₹9,900 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,213 ಇದೆ. ಅಂದರೆ ನಿನ್ನೆಯ ಬೆಲೆ ₹7,135 ಆಗಿದ್ದು ಇಂದು ಪ್ರತಿ ಗ್ರಾಂಗೆ ₹78 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 72 ಸಾವಿರದ 130 ರೂ. ಇದೆ. ಅಂದರೆ ನಿನ್ನೆಯ ಬೆಲೆ 71 ಸಾವಿರದ 350 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ 780 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 21 ಸಾವಿರದ 300 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 13 ಸಾವಿರದ 500 ರೂ. ಆಗಿದ್ದು ಇಂದು ₹7,800 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,815 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,617 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,260 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,815 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,617 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,213 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,830 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,632 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,225 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,815 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,617 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,213ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,815 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,617 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,213ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,815 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,617 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,213ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,815 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,617 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,213ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,815 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,617 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,213ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,820 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,622 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,217 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,820 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,622 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,217 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಬೆಳ್ಳಿ ಬೆಲೆಯೂ ಏರಿಕೆಯಾಗಿದೆ. ಪ್ರತಿ ಗ್ರಾಂ ಬೆಳ್ಳಿಗೆ ಇಂದು ₹100ಆಗಿದೆ. ಅಂದರೆ ಈ ಬೆಲೆ ನಿನ್ನೆ ₹99.80 ಆಗಿದ್ದು ಇಂದು ₹0.20 ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿಗೆ ಇಂದು ₹1,000 ಆಗಿದೆ. ಅಂದರೆ ಈ ಬೆಲೆ ನಿನ್ನೆ ₹998 ಆಗಿದ್ದು ಇಂದು ₹2 ಏರಿಕೆಯಾಗಿದೆ. 100 ಗ್ರಾಂ ಬೆಳ್ಳಿಗೆ ಇಂದು ₹10,000 ಆಗಿದೆ. ಅಂದರೆ ಈ ಬೆಲೆ ನಿನ್ನೆ ₹9,980 ಆಗಿದ್ದು ಇಂದು ₹20 ಏರಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,00,000ಆಗಿದೆ. ಅಂದರೆ ಈ ಬೆಲೆ ನಿನ್ನೆ ₹99,800ಆಗಿದ್ದು ಇಂದು ₹200 ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ವರದಿ ಪ್ರಕಾರ ಇಂದು ( ಏಪ್ರಿಲ್ 16) ಸ್ಪಾಟ್ ಚಿನ್ನದ ಬೆಲೆಯು ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ $3,270.12ರಷ್ಟು ವಹಿವಾಟು ನಡೆಸುತ್ತಿದೆ. ಅಮೆರಿಕದ ಫ್ಯೂಚರ್ ಗೋಲ್ಡ್ ದರ ಪ್ರತಿ ಔನ್ಸ್‌ಗೆ $3,286.30ರಷ್ಟು ವಹಿವಾಟು ನಡೆಸುತ್ತಿದೆ.
ಚಿನ್ನದ ಬೆಲೆ ಏರಿಕೆಗೆ ಕಾರಣ:
ಅಮೆರಿಕ-ಚೀನಾ ವ್ಯಾಪಾರ ಸಂಘರ್ಷ:
ಅಮೆರಿಕದ ಅಧ್ಯಕ್ಷ ಟ್ರಂಪ್ ಅವರು ಚೀನಾದಿಂದ ಆಮದು ಮಾಡುವ 145% ತೆರಿಗೆಗಳನ್ನು ಘೋಷಿಸಿದ ನಂತರ, ಚೀನಾ ತನ್ನ ವಿಮಾನಯಾನ ಕಂಪನಿಗಳಿಗೆ ಬೋಯಿಂಗ್ ವಿಮಾನಗಳ ಹೊಸ ಖರೀದಿಗಳನ್ನು ಸ್ಥಗಿತಗೊಳಿಸಲು ಸೂಚಿಸಿದೆ. ಇದರಿಂದ ಜಾಗತಿಕ ಆರ್ಥಿಕ ಸ್ಥಿತಿಗತಿಯ ಬಗ್ಗೆ ಆತಂಕ ಹೆಚ್ಚಿದ್ದು, ಹೂಡಿಕೆದಾರರು ಸುರಕ್ಷಿತ ಹೂಡಿಕೆ ಆಯ್ಕೆಯಾಗಿ ಬಂಗಾರವನ್ನು ಆಯ್ಕೆ ಮಾಡುತ್ತಿದ್ದಾರೆ.
ಅಮೆರಿಕದ ಡಾಲರ್ ಮೌಲ್ಯದ ಕುಸಿತ:
ಅಮೆರಿಕದ ಡಾಲರ್ ಮೌಲ್ಯವು ಇತ್ತೀಚೆಗೆ 0.4% ಇಳಿಕೆಯಾಗಿದ್ದು, ಅಂತರರಾಷ್ಟ್ರೀಯ ಹೂಡಿಕೆದಾರರಿಗೆ ಬಂಗಾರವನ್ನು ಹೆಚ್ಚು ಆಕರ್ಷಕವಾಗಿಸಿದೆ. ಇದು ಬಂಗಾರದ ಬೇಡಿಕೆಯನ್ನು ಹೆಚ್ಚಿಸಿ ಬೆಲೆಯ ಏರಿಕೆಗೆ ಕಾರಣವಾಗಿದೆ. ಇದಿಷ್ಟೇ ಅಲ್ಲ ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ಇಳಿಸಲು ಸಾಧ್ಯತೆ ಇರುವುದರಿಂದ, ಹೂಡಿಕೆದಾರರು ಬಂಗಾರವನ್ನು ಸುರಕ್ಷಿತ ಹೂಡಿಕೆ ಆಯ್ಕೆಯಾಗಿ ಪರಿಗಣಿಸುತ್ತಿದ್ದಾರೆ. ಇದು ಬಂಗಾರದ ಬೆಲೆಯ ಏರಿಕೆಗೆ ಮತ್ತೊಂದು ಕಾರಣವಾಗಿದೆ.
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು


Click it and Unblock the Notifications