ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಮಹಿಳೆಯರಿಗೆ ಚಿನ್ನದ ಬೆಲೆ ಇಂದು ಕೂಡ ಖುಷಿ ನೀಡಲಿಲ್ಲ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಕೂಡ ಚಿನ್ನದ ಬೆಲೆ ಏರಿಕೆ ಕಂಡಿದೆ. ಇಂದು ಭಾರತೀಯ ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಬೆಲೆ ಬಿರುಗಾಳಿಯಂತೆಯೇ ವೇಗವಾಗಿ ಏರಿಕೆಯಾಗಿದ್ದು, ಖರೀದಿದಾರರಲ್ಲಿ ಆತಂಕದ ಮೋಡ ಕವಿದಂತಾಗಿದೆ. 22 ಕ್ಯಾರೆಟ್, 24 ಕ್ಯಾರೆಟ್ ಮತ್ತು 18 ಕ್ಯಾರೆಟ್ ಬಂಗಾರದ ದರಗಳಲ್ಲಿ ನಿರಂತರ ಹೆಚ್ಚಳ ಕಂಡುಬಂದಿರುವುದು, ವಿಶೇಷವಾಗಿ ಹೂಡಿಕೆದಾರರಿಗೆ ಇದು ಬಂಗಾರದ ಸಮಯವೇ ಎಂಬ ದ್ವಂದ್ವವನ್ನು ಹುಟ್ಟಿಸಿದೆ.

ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು. ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ, ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ. ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ, ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,770 ಇದೆ. ಅಂದರೆ ನಿನ್ನೆ ₹8,745 ಆಗಿದ್ದು ಇಂದು ₹25 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 87 ಸಾವಿರದ 700ರೂ. ಇದೆ. ಅಂದರೆ ನಿನ್ನೆ 87 ಸಾವಿರದ 450 ರೂ. ಆಗಿದ್ದು ಇಂದು ₹250 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 8 ಲಕ್ಷದ 77 ಸಾವಿರ ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 74 ಸಾವಿರದ 500 ರೂ. ಆಗಿದ್ದು ಇಂದು ₹2,500ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,567 ಇದೆ. ಅಂದರೆ ನಿನ್ನೆ ₹9,540 ಆಗಿದ್ದು ಇಂದು ₹27 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 93 ಸಾವಿರದ 380 ರೂ. ಇದೆ. ಅಂದರೆ ನಿನ್ನೆ 95ಸಾವಿರದ 670 ರೂ. ಆಗಿದ್ದು ಇಂದು ₹270 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 56 ಸಾವಿರದ 700 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 54 ಸಾವಿರ ರೂ. ಆಗಿದ್ದು ಇಂದು ₹2,700 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,176 ಇದೆ. ಅಂದರೆ ನಿನ್ನೆಯ ಬೆಲೆ ₹7,155 ಆಗಿದ್ದು ಇಂದು ಪ್ರತಿ ಗ್ರಾಂಗೆ ₹21 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 71 ಸಾವಿರದ 760 ರೂ. ಇದೆ. ಅಂದರೆ ನಿನ್ನೆಯ ಬೆಲೆ 71 ಸಾವಿರದ 550 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹210 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 17 ಸಾವಿರದ 600 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 15 ಸಾವಿರದ 500 ರೂ. ಆಗಿದ್ದು ಇಂದು ₹2,100 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,567 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,260 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,567 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,176 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,785 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,582 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,188ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,567ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,176 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,567ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,176 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,567ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,176 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,567ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,176 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,770ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,567ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,176 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,775 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,570 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,180ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,775 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,570 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,180ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಬೆಳ್ಳಿ ಬೆಲೆಯೂ ಏರಿಕೆಯಾಗಿದೆ. ಪ್ರತಿ ಗ್ರಾಂ ಬೆಳ್ಳಿಗೆ ಇಂದು ₹100ಆಗಿದೆ. ಅಂದರೆ ಈ ಬೆಲೆ ನಿನ್ನೆ ₹97.10ಆಗಿದ್ದು ಇಂದು ₹2.90ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿಗೆ ಇಂದು ₹1,000ಆಗಿದೆ. ಅಂದರೆ ಈ ಬೆಲೆ ನಿನ್ನೆ ₹971 ಆಗಿದ್ದು ಇಂದು ₹29 ಏರಿಕೆಯಾಗಿದೆ. 100 ಗ್ರಾಂ ಬೆಳ್ಳಿಗೆ ಇಂದು ₹10,000ಆಗಿದೆ. ಅಂದರೆ ಈ ಬೆಲೆ ನಿನ್ನೆ ₹9,710 ಆಗಿದ್ದು ಇಂದು ₹290ಏರಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,00,000ಆಗಿದೆ. ಅಂದರೆ ಈ ಬೆಲೆ ನಿನ್ನೆ ₹97,100ಆಗಿದ್ದು ಇಂದು ₹2,900 ಏರಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ಏಪ್ರಿಲ್ 11 ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಚಿನ್ನದ ದರ ಬೆಳಿಗ್ಗೆ 3:50 (GMT) ರ ಸಮಯಕ್ಕೆ 1.4% ಏರಿಕೆ ಆಗಿ ಪ್ರತಿ ಔನ್ಸ್‌ಗೆ $3,217.78 ಆಗಿತ್ತು. ನ್ನದ ಬೆಲೆ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರತಿ ಔನ್ಸ್‌ಗೆ $3,200 ಗಡಿ ದಾಟಿದೆ. ಶುಕ್ರವಾರ ಈ ಮಹತ್ವದ ಗರಿಷ್ಠ ಮಟ್ಟ ತಲುಪಲು ಕಾರಣವಾಗಿದ್ದು, ಅಮೆರಿಕ ಡಾಲರ್ ಮೌಲ್ಯ ಕುಸಿತ ಮತ್ತು ಚುರುಕಾಗುತ್ತಿರುವ ವ್ಯಾಪಾರ ಯುದ್ಧ. ಈ ಅನಿಶ್ಚಿತ ಪರಿಸ್ಥಿತಿಯಲ್ಲಿ ಹೂಡಿಕೆದಾರರು ಭದ್ರತಾ ಹೂಡಿಕೆಗಳಾದ ಚಿನ್ನದತ್ತ ಓಡಿದ್ದಾರೆ. ಇದು ಚಿನ್ನದ ಮೇಲಿನ ವಿಶ್ವಮಟ್ಟದ ಭರವಸೆಯನ್ನೂ ತೋರಿಸುತ್ತದೆ, ವಿಶೇಷವಾಗಿ ಭೀತಿಯ ಪರಿಸ್ಥಿತಿಗಳಲ್ಲೂ ಅದು ಸುರಕ್ಷಿತ ಹೂಡಿಕೆ ಆಯ್ಕೆ ಎಂಬುದನ್ನು ಪುಷ್ಟಿಸುತ್ತದೆ.
ಮದುವೆ ಸೀಸನ್‌ಗೆ ಚಿನ್ನ ಖರೀದಿ ಯೋಜಿಸುತ್ತಿದ್ದ ಕುಟುಂಬಗಳು ಹಿಂದಕ್ಕೆ ಜಾರುವ ಸ್ಥಿತಿ ಎದುರಾಗಿದೆ. ಇದರೊಂದಿಗೆ, ಬಂಗಾರ ಹೂಡಿಕೆಗೆ ಇದು ಸರಿಯಾದ ಸಮಯವೇ ಎಂಬ ಪ್ರಶ್ನೆ ಇನ್ನಷ್ಟು ಗಂಭೀರವಾಗಿ ಎದುರಾಗುತ್ತಿದೆ. ಇಂಧನ ದರ, ಡಾಲರ್-ರೂಪಾಯಿ ವಿನಿಮಯ ಮೌಲ್ಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯ ಚಲನೆಗಳು ಈ ದರ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಹೀಗಾಗಿ, ಚಿನ್ನದ ಖರೀದಿಗೆ ಮೊದಲು ನಿಖರ ಮಾಹಿತಿ ಪಡೆದು, ಸಮಗ್ರ ಹೂಡಿಕೆ ಯೋಚನೆಯೊಂದಿಗೆ ಮುಂದಾಗುವುದು ಸೂಕ್ತ.
ಟ್ರಂಪ್ ಅವರ ಈ ತೀರ್ಮಾನದಿಂದ ತಕ್ಷಣವೇ ಏಷ್ಯಾದ ಷೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಪ್ರತಿಕ್ರಿಯೆ ಕಂಡುಬಂದಿತು. ಇದರಿಂದ ಹೂಡಿಕೆದಾರರಲ್ಲಿ ಭೀತಿಯಿಂದಾಗಿ ಉಂಟಾಗಿದ್ದ ಒತ್ತಡ ಕಡಿಮೆಯಾಯಿತು.ಈ ನಿರ್ಧಾರವು ಜಾಗತಿಕ ಆರ್ಥಿಕ ಸ್ಥಿತಿಗೆ ತಾತ್ಕಾಲಿಕ ಉಸಿರಾಟ ನೀಡಿದರೂ, ಮುಂದಿನ ದಿನಗಳಲ್ಲಿ ಟ್ರಂಪ್ ಆಡಳಿತದ ವ್ಯಾಪಾರ ನೀತಿ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರ ಬಗ್ಗೆ ಇನ್ನೂ ಅನಿಶ್ಚಿತತೆ ಇದೆ.
ಒಟ್ಟಿನಲ್ಲಿ, ಅಮೆರಿಕಾ-ಚೀನಾ ಸಂಘರ್ಷ, ಯುದ್ಧದ ಭೀತಿ, ರೂಪಾಯಿಯ ಮೌಲ್ಯ ಕುಸಿತ, ಜಾಗತಿಕ ಬ್ಯಾಂಕುಗಳ ಬಂಗಾರದ ಸಂಗ್ರಹ, ಹಾಗೂ ದೇಶೀಯ ಮದುವೆ ಅವಧಿಯ ಬೇಡಿಕೆಸೇರಿ ಎಲ್ಲ ಅಂಶಗಳ ಸಮೂಹ ಪರಿಣಾಮವಾಗಿ ಚಿನ್ನದ ದರ ಜಿಗಿತ ಕಂಡಿದೆ. ಹೀಗಾಗಿ ಹೂಡಿಕೆದಾರರು ಶೇರು ಮಾರುಕಟ್ಟೆ ಅಥವಾ ಕ್ರಿಪ್ಟೋ ಮಾರುಕಟ್ಟೆಯ ಬದಲು ಚಿನ್ನವನ್ನು ಭದ್ರ ಹೂಡಿಕೆ ಮಾಧ್ಯಮವೆಂದು ಆಯ್ಕೆ ಮಾಡುತ್ತಿದ್ದಾರೆ.


Click it and Unblock the Notifications