Gold Price On Bengaluru: ಸುಗ್ಗಿ ಹಬ್ಬ ಸಂಕ್ರಾಂತಿಗೆ ಒಂದೇ ದಿನ ಬಾಕಿ ಉಳಿದಿದೆ. ಬಹುತೇಕರು ಚಿನ್ನದ ಖರೀದಿಗೆ ಪ್ಲ್ಯಾನ್ ಮಾಡಿದ್ದಾರೆ. ಅಂಥವರಿಗೆ ನಿಜಕ್ಕೂ ಇದು ಶಾಕಿಂಗ್ ಸುದ್ದಿ. ಹೌದು, ಸಂಕ್ರಾಂತಿ ಶುಭ ಸಂದರ್ಭದಲ್ಲೇ ಬಂಗಾರ ಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಚಿನ್ನದ ಬೆಲೆ ಇಂದು ದಿಢೀರನೆ ಹೆಚ್ಚಳ ಕಂಡಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡಿದೆ. ಇದು ಸಂಕ್ರಾಂತಿ ವೇಳೆಗೆ ಬೆಂಗಳೂರಿಗರಿಗೆ ನಿರಾಸೆ ಉಂಟುಮಾಡಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಹೆಚ್ಚಳವಾಗಿದೆ. ಹಾಗಿದ್ರೆ, ಬೆಂಗಳೂರಿನಲ್ಲಿ ಭಾನುವಾರ (ಜ.12) ಚಿನ್ನದ ಬೆಲೆ ಎಷ್ಟಿದೆ? ಒಂದು ಕಿಲೋ ಬೆಳ್ಳಿ ದರ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ.
ಹೌದು, ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ಏರಿಕೆಯಾಗಿರುವುದರಿಂದ ಆಭರಣ ಪ್ರಿಯರಿಗೆ ನಿರಾಸೆಯಾಗಿದೆ. ಬೆಂಗಳೂರಿನಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ ಕ್ಕೆ 73,000 ರೂಪಾಯಿ ಇದೆ. ಅಪರಂಜಿ 24 ಕ್ಯಾರಟ್ನ ಚಿನ್ನದ ಬೆಲೆ 79,640ರೂಪಾಯಿ ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಬಂಗಾರದ ಬೆಲೆ ಇಂದು ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ?
ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. ಪ್ರಸ್ತುತ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,300 ರೂಪಾಯಿ ಇದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 7,964 ರೂ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 73,000 ಇಂದು ರೂಪಾಯಿ ವಾಹಿವಾಟುವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 79,640 ರೂ ಇದೆ.
ಇಂದು 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,30,000ರೂ ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ7,96,400ರೂ.ಗಳ ವಹಿವಾಟುವಿದೆ.18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 59,730ರೂ ಇದೆ.
ಇಂದಿನ ಬೆಳ್ಳಿಯ ಬೆಲೆ ಬೆಂಗಳೂರಿನಲ್ಲಿ ಎಷ್ಟಿದೆ?
ಬೆಳ್ಳಿಯ ಬೆಲೆ ಈಗ ಪ್ರತಿ ಕಿಲೋಗ್ರಾಂಗೆ 93,500 ರೂಪಾಯಿಗಳ ವಹಿವಾಟುವಿದೆ.ಒಂದು ಗ್ರಾಂ ಗೆ ಬೆಳ್ಳಿಗೆ 93.50 ರೂಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 935 ರೂಪಾಯಿಯಾಗಿದೆ. 100 ಗ್ರಾಂ ಬೆಳ್ಳಿ 9,350 ರೂ ಗಳು ಇದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಕಂಡಿದೆ.
MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?
ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ ಶೇ.0.03ನಷ್ಟು ಇಳಿಕೆಯಾಗಿ 78,400ರೂ. ಜಾಗತಿಕ ಬೇಡಿಕೆ, ಬಡ್ಡಿ ದರಗಳು, ಕರೆನ್ಸಿ ವಿನಿಮಯ ದರಗಳು, ಸರ್ಕಾರಿ ನೀತಿಗಳು ಮತ್ತು ಜಾಗತಿಕ ಘಟನೆಗಳಂತಹ ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು.
ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು ಶೇ.0.04ನಷ್ಟು ಇಳಿಕೆಯಾಗಿ 92,466 ರೂಪಾಯಿ ವಹಿವಾಟು ನಡೆಸುತ್ತಿದೆ. ಜಾಗತಿಕ ಬೇಡಿಕೆ, ಬಡ್ಡಿ ದರಗಳು, ಕರೆನ್ಸಿ ವಿನಿಮಯ ದರಗಳು, ಸರ್ಕಾರಿ ನೀತಿಗಳು ಮತ್ತು ಜಾಗತಿಕ ಘಟನೆಗಳಂತಹ ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಬೆಲೆಗಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು.
ಸ್ಪಾಟ್ ಗೋಲ್ಡ್ ರೇಟ್ ?
ಸ್ಪಾಟ್ ಚಿನ್ನದ ಬೆಲೆ ಏರಿಕೆಯಾಗುವ ನಿರೀಕ್ಷೆ ಇದೆ. ಯುಎಸ್ ಡಾಲರ್ ಏರಿಕೆಯಿಂದಾಗಿ ಇದು ಸ್ಪಾಟ್ ಚಿನ್ನದ ಮೇಲೆ ಹೆಚ್ಚು ಪ್ರಭಾವ ಬೀರಲಿದೆ. ಇನ್ನು ವರದಿ ಪ್ರಕಾರ ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ 2,689.90 ಡಾಲರ್‌ನಲ್ಲಿ ಸ್ಥಿರವಾಗಿದೆ. ಇತ್ತ ಸ್ಪಾಟ್ ಬೆಳ್ಳಿ ಪ್ರತಿ ಔನ್ಸ್‌ಗೆ ಶೇ.0.93 ಏರಿಕೆಯಾಗಿ 30.41 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪ್ಲಾಟಿನಮ್ ಬೆಲೆಯು ಪ್ರತಿ ಔನ್ಸ್‌ಗೆ ಶೇ.0.21ರಷ್ಟು ಇಳಿಕೆಯಾಗಿ 959.25 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಪಲ್ಲಾಡಿಯಂ ಬೆಲೆಯು ಪ್ರತಿ ಔನ್ಸ್‌ಗೆ ಶೇ.2.15 ರಷ್ಟು ಏರಿಕೆಯಾಗಿ 948.50 ಡಾಲರ್ ತಲುಪಿದೆ.
ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ
| ನಗರ | 22ಕ್ಯಾರೆಟ್ | 24K ಕ್ಯಾರೆಟ್ |
| ಬೆಂಗಳೂರು | 7,300 | 7,964 |
| ಚೆನ್ನೈ | 7,300 | 7,964 |
| ಮುಂಬೈ | 7,300 | 7,964 |
| ದೆಹಲಿ | 7,315 | 7,980 |
| ಕೋಲ್ಕತಾ | 7,300 | 7,964 |
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
| ಬೆಂಗಳೂರು | 9,350 ರೂ |
| ಚೆನ್ನೈ | 10,100 ರೂ |
| ಮುಂಬೈ | 9,350 ರೂ |
| ದೆಹಲಿ | 9,350 ರೂ |
| ಕೋಲ್ಕತಾ | 9,350 ರೂ |


Click it and Unblock the Notifications