ಕಳೆದ ನಾಲ್ಕೈದು ದಿನಗಳ ಹಿಂದೆ ಬೆಲೆಯಲ್ಲಿ ಭಾರಿ ಜಿಗಿತ ಕಂಡಿದ್ದ ಚಿನ್ನ, ಇಂದು ಸ್ವಲ್ಪ ನಿರಾಳದ ಸುದ್ದಿ ನೀಡಿದೆ ಅದೇನೆಂದರೆ ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ವಲ್ಪ ಕುಸಿತ ಕಂಡಿದೆ. ಬೆಲೆಯಲ್ಲಿ ಹೆಚ್ಚಾಗಿ ಇಳಿಕೆಯಾಗದಿದ್ದರೂ, ಏರಿಕೆಯಾಗಿಲ್ಲ ಎಂಬ ಸಮಾಧಾನವಂತೂ ಇದೆ. ಏಕೆಂದರೆ ಚಿನ್ನದ ಬೆಲೆ ಏರಿಕೆಯಾದರೆ ಗಗನ ನೋಡುತ್ತದೆ. ಇಳಿಕೆಯಾದರೆ ಕೊಂಚವೇ ಪ್ರಮಾಣದಲ್ಲಿ ಇಳಿಕೆಯಾಗುತ್ತದೆ. ಒಂದು ವೇಳೆ ಹೆಚ್ಚಾಗಿ ಬೆಲೆ ಇಳಿಕೆಯಾಗದಿದ್ದರೂ, ಏರಿಕೆಯಾಗಿಲ್ಲ ಎಂಬ ನಿರಾಳವೂ ಇರುತ್ತದೆ. ಏಕೆಂದರೆ ಭಾರತೀಯರು ಅತಿ ಹೆಚ್ಚು ನಂಬಿಕೆಯಿಂದ ಮಾಡುವ ಹೂಡಿಕೆ ಚಿನ್ನವೇ ಆಗಿರುತ್ತದೆ. ಹೀಗಾಗಿ ಭಾರತದಲ್ಲಿ ಚಿನ್ನಕ್ಕೆ ಹೆಚ್ಚು ಡಿಮ್ಯಾಂಡ್ ಇದೆ.

ಹೌದು, ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವೆಂದರೆ ಭಾರತೀಯರಿಗೆ ಅಚ್ಚು ಮೆಚ್ಚು. ಒಂದು ಹಂತದಲ್ಲಿ ದೊಡ್ಡ ಮಟ್ಟದ ಸಂಪತ್ತು ಎಂತಲೂ ಹೇಳಬಹುದು. ದೊಡ್ಡ ಮಟ್ಟದ ಹೂಡಿಕೆ ಸಾಧನವಾಗಿರುವ ಚಿನ್ನ, ಭಾರತದಲ್ಲಿ ಪ್ರತಿಷ್ಠೆಯ ಸಂಕೇತವೂ ಹೌದು. ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ. ಮೊದಲು ಚಿನ್ನದ ಬೆಲೆಯಲ್ಲಿನ ಬದಲಾವಣೆ ಬಗ್ಗೆ ತಿಳಿದು, ನಂತರ ಈ ಏರಿಳಿತಗಳಿಗೆ ಕಾರಣ ಏನೆಂದು ಓದಿರಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,002 ಆಗಿದೆ. ನಿನ್ನೆ ಇದರ ಬೆಲೆ ₹9,005 ಆಗಿದ್ದು ನಿನ್ನೆಗಿಂತ ಇಂದು, ₹3 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹90,020 ಆಗಿದೆ. ನಿನ್ನೆಯ ಬೆಲೆ ₹90,050 ಆಗಿದ್ದು ನಿನ್ನೆಗಿಂತ ಇಂದಿಗೆ ₹30 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,00,200 ಆಗಿದೆ. ನಿನ್ನೆಯ ಬೆಲೆ ₹9,00,500 ಆಗಿದ್ದು ನಿನ್ನೆಗಿಂತ ಇಂದು ₹300 ಇಳಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,821 ಆಗಿದೆ. ನಿನ್ನೆ ಇದರ ಬೆಲೆ ₹9,824 ಆಗಿದ್ದು ನಿನ್ನೆಗಿಂತ ಇಂದು, ₹3 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹98,210 ಆಗಿದೆ. ನಿನ್ನೆಯ ಬೆಲೆ ₹98,240 ಆಗಿದ್ದು ನಿನ್ನೆಗಿಂತ ಇಂದಿಗೆ ₹30 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,82,100 ಆಗಿದೆ. ನಿನ್ನೆಯ ಬೆಲೆ ₹9,82,400 ಆಗಿದ್ದು ನಿನ್ನೆಗಿಂತ ಇಂದು ₹300 ಇಳಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,366 ಆಗಿದೆ. ನಿನ್ನೆ ಇದರ ಬೆಲೆ ₹7,368 ಆಗಿದ್ದು ನಿನ್ನೆಗಿಂತ ಇಂದು, 2 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹73,660 ಆಗಿದೆ. ನಿನ್ನೆಯ ಬೆಲೆ ₹73,680 ಆಗಿದ್ದು ನಿನ್ನೆಗಿಂತ ಇಂದಿಗೆ 20 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹7,36,600 ರೂ. ಆಗಿದೆ. ನಿನ್ನೆಯ ಬೆಲೆ ₹7,36,800 ಆಗಿದ್ದು ನಿನ್ನೆಗಿಂತ ಇಂದು 200 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,002 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,821 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,460 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,002 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,821 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,366 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,017 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,831 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,378 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,002 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,821 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,366 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,002 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,821 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,366 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,002 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,821 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,366 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,002 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,821 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,366 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,002 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,821 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,366 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,007 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,826 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,370 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,007 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,826 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,370 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹100.90 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ ₹1,009 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹10,090 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹1,00,900 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications