India Gold Price: ಚಿನ್ನಪ್ರಿಯರಿಗೆ ನಿರಾಸೆಯ ತುತ್ತು..24K, 22K, 18K ಬಂಗಾರದ ಬೆಲೆ ಇಂದೂ ಏರಿಕೆ! ಎಷ್ಟಾಗಿದೆ ಬೆಲೆ ನೋಡಿ

ಜೂನ್ 3 ಚಿನ್ನದ ಬೆಲೆ, ಭಾರತದಲ್ಲಿ: ಜೂನ್ ಮೊದಲ ವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಎನ್ನುವುದೇ ಕಂಡಿಲ್ಲ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಂದೂ ಇಳಿಕೆಯಾಗಿಲ್ಲ. ಮದುವೆ ಸಮಾರಂಭಗಳ ಸೀಸನ್ ಮುಗಿದ ಬೆನ್ನಲ್ಲೇ ಬೆಲೆ ಬಿರುಗಾಳಿ ಶುರುವಾಗಿದೆ. ಇನ್ನೇನು ವರಮಹಾಲಕ್ಷ್ಮಿ ಹಬ್ಬಕ್ಕೆ ಎರಡು ತಿಂಗಳಿರುವಾಗಲೇ, ಚಿನ್ನದ ಬೆಲೆ ಗಗನಕ್ಕೇರುತ್ತಿದೆ.

India Gold Price: ಚಿನ್ನಪ್ರಿಯರಿಗೆ ನಿರಾಸೆಯ ತುತ್ತು..!

ಈಗಾಗಲೇ 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆಯು, ₹9,91,700 ಆಗಿದೆ. ಈ ಬೆಲೆ ಹತ್ತು ಲಕ್ಷ ರೂಪಾಯಿಯ ಸಮೀಪದಲ್ಲೇ ಇದೆ. ಈ ಬೆಲೆ ಕಂಡು ಚಿನ್ನಪ್ರಿಯರು ನಿದ್ದೆಗೆಡುವಂತಾಗಿದೆ. ನುಂಗಲಾರದ ಬಿಸಿ ತುಪ್ಪವಾಗಿರುವ ಚಿನ್ನ ಕಣ್ಣೀರು ತರಿಸುತ್ತಿದೆ. ಮೇ ತಿಂಗಳಿನಲ್ಲಿ ದಾಖಲೆ ಪ್ರಮಾಣದ ಇಳಿಕೆ ಹಾಗೂ ಏರಿಕೆಯನ್ನೇ ನೋಡಿದ್ದ ಬಂಗಾರದ ಬೆಲೆ, ಜೂನ್ ಆರಂಭದಲ್ಲೇ ಬಿರುಗಾಳಿ ತರಿಸಿದೆ.

ಈಗಾಗಲೇ ಚಿನ್ನದ ಬೆಲೆ ದಾಖಲೆಯ ಮಟ್ಟಕ್ಕೆ ತಲುಪಿದೆ. ಬಂಗಾರ ಅಂಬರದಲ್ಲಿರುವುದನ್ನು ಕಣ್ಣೆತ್ತಿ ನೋಡುವ ಸಂದರ್ಭ ಬಂದೊದಗಿದೆ. ಚಿನ್ನ ಕೊಳ್ಳುವುದಕ್ಕಿಂತ ಚಿನ್ನದ ಮೇಲಿನ ಆಸೆಯೇ ಬಿಟ್ಟುಬಿಡಬೇಕು ಎನಿಸುವಂತಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್‌ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.

ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ:

1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹9,917 ಆಗಿದೆ. ನಿನ್ನೆ ಇದರ ಬೆಲೆ ₹9,906 ಆಗಿದ್ದು ನಿನ್ನೆಗಿಂತ ಇಂದು, ₹11 ಏರಿಕೆಯಾಗಿದೆ.

10 ಗ್ರಾಂ ಚಿನ್ನ: 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹99,170 ಆಗಿದೆ. ನಿನ್ನೆ ಇದರ ಬೆಲೆ ₹99,060 ಆಗಿದ್ದು ನಿನ್ನೆಗಿಂತ ಇಂದು, ₹110 ಏರಿಕೆಯಾಗಿದೆ.

100 ಗ್ರಾಂ ಚಿನ್ನ: 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,91,700 ಆಗಿದೆ. ನಿನ್ನೆ ಇದರ ಬೆಲೆ ₹9,90,600 ಆಗಿದ್ದು ನಿನ್ನೆಗಿಂತ ಇಂದು, ₹1,100 ಏರಿಕೆಯಾಗಿದೆ.

ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ:

1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು, ₹9,090 ಆಗಿದೆ. ನಿನ್ನೆ ಇದರ ಬೆಲೆ ₹9,080 ಆಗಿದ್ದು ನಿನ್ನೆಗಿಂತ ಇಂದು, ₹10 ಏರಿಕೆಯಾಗಿದೆ.

10 ಗ್ರಾಂ ಚಿನ್ನ: 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹90,900 ಆಗಿದೆ. ನಿನ್ನೆ ಇದರ ಬೆಲೆ ₹90,800 ಆಗಿದ್ದು ನಿನ್ನೆಗಿಂತ ಇಂದು, ₹100 ಏರಿಕೆಯಾಗಿದೆ.

100 ಗ್ರಾಂ ಚಿನ್ನ: 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹9,09,000 ಆಗಿದೆ. ನಿನ್ನೆ ಇದರ ಬೆಲೆ ₹9,08,000 ಆಗಿದ್ದು ನಿನ್ನೆಗಿಂತ ಇಂದು ₹1,000 ಏರಿಕೆಯಾಗಿದೆ.

ಭಾರತದಲ್ಲಿ 18 ಕ್ಯಾರಟ್ ಚಿನ್ನದ ಬೆಲೆ:

1 ಗ್ರಾಂ ಚಿನ್ನ: ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹7,438 ಆಗಿದೆ. ನಿನ್ನೆ ಇದರ ಬೆಲೆ ₹7,430 ಆಗಿದ್ದು ನಿನ್ನೆಗಿಂತ ಇಂದು, ₹8 ಏರಿಕೆಯಾಗಿದೆ.

10 ಗ್ರಾಂ ಚಿನ್ನ: 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು, ₹74,380 ಆಗಿದೆ. ನಿನ್ನೆ ಇದರ ಬೆಲೆ ₹74,300 ಆಗಿದ್ದು ನಿನ್ನೆಗಿಂತ ಇಂದು, ₹80 ಏರಿಕೆಯಾಗಿದೆ.

100 ಗ್ರಾಂ ಚಿನ್ನ: 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆಯು, ₹7,43,800 ಆಗಿದೆ. ನಿನ್ನೆ ಇದರ ಬೆಲೆ ₹7,43,000 ಆಗಿದ್ದು ನಿನ್ನೆಗಿಂತ ಇಂದು, ₹800 ಏರಿಕೆಯಾಗಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,917 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,090 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,480 ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,917 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,090 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,438 ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,932 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,105 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,450 ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,917 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,090 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,438 ಆಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,917 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,090 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,438 ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,917 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,090 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,438 ಆಗಿದೆ.

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,917 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,090 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,438 ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,917 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,090 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,438 ಆಗಿದೆ.

ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,922 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,095 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,442 ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,922 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,095 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,442 ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ಬೆಲೆ:

ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಏರಿಕೆಯನ್ನು ನೋಡಬಹುದಾಗಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆ ₹102 ಇದೆ. ನಿನ್ನೆ ಈ ಬೆಲೆ ₹100.10 ಆಗಿದ್ದು, ಇಂದು ₹1.90 ಏರಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು ₹1,020 ಆಗಿದೆ. ಇದರ ಬೆಲೆ ನಿನ್ನೆ ₹1,001 ಆಗಿದ್ದು, ಇಂದು ₹19 ಏರಿಕೆಯಾಗಿದೆ. ನೂರು ಗ್ರಾಂ ಬೆಳ್ಳಿ ಬೆಲೆ ಇಂದು ₹10,200 ಆಗಿದ್ದು, ನಿನ್ನೆ ಈ ಬೆಲೆ ₹10,010 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹190 ಏರಿಕೆಯಾಗಿದೆ. ಹಾಗೆಯೇ ಇಂದು ಒಂದು ಕೆ.ಜಿ ಬೆಳ್ಳಿ ಬೆಲೆ ₹1,02,000 ಆಗಿದೆ, ನಿನ್ನೆ ಈ ಬೆಲೆ ₹1,00,100 ಆಗಿದ್ದು, ನಿನ್ನೆಗಿಂತ ಇಂದಿಗೆ ₹1,900 ಏರಿಕೆಯಾಗಿದೆ.

ಸ್ಪಾಟ್ ಗೋಲ್ಡ್ ವಿವರ:

ರಾಯಿಟರ್ಸ್ ನೀಡಿರುವ ವರದಿ ಪ್ರಕಾರ, ಜೂನ್ 4ರಂದು 06:09 ವೇಳೆಗೆ, ಸ್ಪಾಟ್ ಚಿನ್ನದ ಬೆಲೆಯು ಪ್ರತಿ ಔನ್ಸ್‌ಗೆ $3,351.49 ರಷ್ಟು ಸ್ಥಿರವಾಗಿದೆ. ಜೊತೆಗೆ ಅಮೆರಿಕಾದ ಫ್ಯೂಚರ್ ಪ್ರತಿ ಔನ್ಸ್‌ಗೆ $3,375 ದರದಲ್ಲಿ ಸ್ಥಿರವಾಯಿತು.. ಈ ಸ್ಥಿತಿಗತಿಯು ಚಿನ್ನದ ಮೌಲ್ಯದಲ್ಲಿ ಬೃಹತ್ ಏರಿಕೆ ಅಥವಾ ಇಳಿಕೆ ಆಗದ ರೀತಿಯಲ್ಲಿ, ಹೂಡಿಕೆದಾರರು ಇನ್ನೂ ನಿರೀಕ್ಷೆಯಲ್ಲಿರುವುದನ್ನು ಸೂಚಿಸುತ್ತದೆ.

ಹೂಡಿಕೆಯ ಸಾಧನವಾಗಿರುವ ಚಿನ್ನ:

ಹೂಡಿಕೆಯ ಸಾಧನವಾಗಿರುವ ಚಿನ್ನವು ಭಾರತದಲ್ಲಿ ಹಲವು ರೀತಿಯ ಮಹತ್ವದ ಸ್ಥಾನ ಪಡೆದುಕೊಂಡಿದೆ. ಮಹಿಳೆಯರಿಗೆ ಒಡವೆ ರೂಪದಲ್ಲಿ ಇದು ಖುಷಿ ನೀಡುತ್ತದೆ. ಹಾಗೆಯೇ ಪ್ರತಿಷ್ಠೆಯ ಸಂಕೇತವಾಗಿ ಗೌರವ ತಂದುಕೊಡುತ್ತದೆ. ಇನ್ನು ಕಷ್ಟ ಅಂತ ಬಂದಾಗ ಆರ್ಥಿಕ ಸಹಾಯ ಮಾಡುವ ಮಿತ್ರನಾಗಿರುತ್ತದೆ. ಹೂಡಿಕೆಯ ರೂಪದಲ್ಲಿ ನೋಡುವುದಾದರೆ, ಚಿನ್ನವು ಭವಿಷ್ಯದ ದೊಡ್ಡ ಸಂಪತ್ತಾಗಿ ಪಾತ್ರ ನಿರ್ವಹಿಸುತ್ತದೆ. ಒಂದೇ ಲೋಹ ಹಲವು ರೀತಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಹೀಗಾಗಿಯೇ ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವದ ಸ್ಥಾನವಿದೆ. ಚಿನ್ನವನ್ನು ಪೂಜೆ-ಪುನಸ್ಕಾರ, ಮದುವೆ-ಸಮಾರಂಭಗಳಲ್ಲಿ ಇರಿಸದೇ ಏನೂ ನೆರವೇರುವುದಿಲ್ಲ. ಅದರಲ್ಲೂ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮೆಚ್ಚು. ಏನು ಕೊಟ್ಟರೂ ಮನಸೋಲದ ನಾರಿಯರಿಗೆ ಚಿನ್ನವೇ ದೊಡ್ಡ ಮಟ್ಟದ ಉಡುಗೊರೆ. ಅವರಿಗೆ ಚಿನ್ನವೇ ಭೂಷಣ.

ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?

ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.

ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+