Gold Price: ಮತ್ತೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ ಯಥಾಸ್ಥಿತಿ.. 22k ಗೋಲ್ಡ್ ಎಷ್ಟು?

Gold Price: ಚಿನ್ನದ ಬೆಲೆ ಇಂದು ಏರಿಕೆ ಕಂಡಿದೆ.ನಿನ್ನೇ ತಟಸ್ಥ ಸ್ಥಿತಿಯಲ್ಲಿ ಇದ್ದ ಬಂಗಾರ ದಿಡೀರನೆ ಏರಿಕೆಯಾಗಿದೆ.ಬೆಳ್ಳಿಯ ಬೆಲೆ ಯಥಾಸ್ಥಿತಿಯಲ್ಲಿ ಇದ್ದು, ಯಾವುದೇ ಬದಲಾವಣೆಯಾಗಿಲ್ಲ ಹಾಗಿದ್ರೆ ಚಿನ್ನದ ಮಾರುಕಟ್ಟೆಯಲ್ಲಿ ಬುಧವಾರ( ಜ. 8) ಚಿನ್ನದ ಬೆಲೆ ಎಷ್ಟಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು? ಎಂಬ ಹೆಚ್ಚಿನ ವಿವರ ಇಲ್ಲಿದೆ ನೋಡಿ

ಹೌದು,ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ಏರಿಕೆಯಾಗಿರುವುದರಿಂದ ಆಭರಣ ಪ್ರಿಯರಿಗೆ ನಿರಾಸೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ ಕ್ಕೆ 72,250 ರೂಪಾಯಿ ಇದೆ. ಅಪರಂಜಿ 24 ಕ್ಯಾರಟ್​ನ ಚಿನ್ನದ ಬೆಲೆ 78,820 ರೂಪಾಯಿ ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಬಂಗಾರದ ಬೆಲೆ ಇಂದು ಏರಿಕೆ ಕಂಡಿದೆ.

 Gold Price: ಮತ್ತೆ ಚಿನ್ನದ ಬೆಲೆ ಏರಿಕೆ;22k ಗೋಲ್ಡ್ ಎಷ್ಟು?

ಭಾರತದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ?

ಇಂದು ಭಾರತದಲ್ಲಿ ಚಿನ್ನದ ದರ ಇಂದು ಕಡಿಮೆಯಾಗಿದೆ. ಪ್ರಸ್ತುತ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,225 ರೂಪಾಯಿ ಇದೆ. ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 7,882ರೂ ವ್ಯಾಪಾರವಿದೆ. 22 ಕ್ಯಾರೆಟ್‌ನ 10 ಗ್ರಾಂಗೆ ಚಿನ್ನಕ್ಕೆ 72,250 ಇಂದು ರೂಪಾಯಿ ವಾಹಿವಾಟುವಿದೆ. 10 ಗ್ರಾಂ ನ 24 ಕ್ಯಾರಟ್‌ ಅಪರಂಜಿ ಚಿನ್ನದ ಬೆಲೆ 78,820 ರೂ ಇದೆ.

ಇಂದು 100 ಗ್ರಾಂ 22 ಕ್ಯಾರೆಟ್‌ನ ಚಿನ್ನದ ಬೆಲೆ 7,22,500ರೂ ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 7,88,200 ರೂ.ಗಳ ವಹಿವಾಟುವಿದೆ.ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ರೆ ಅಪರಂಜಿ ಚಿನ್ನದಲ್ಲಿ 1,100 ಏರಿಕೆ ಕಂಡಿದೆ. 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 59,120 ರೂ ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡಿದೆ.

ಇಂದಿನ ಬೆಳ್ಳಿಯ ಬೆಲೆ ಭಾರತದಲ್ಲಿ ಎಷ್ಟಿದೆ?

ಬೆಳ್ಳಿಯ ಬೆಲೆಯಲ್ಲಿ ಇಂದು ಭಾರತದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. ಬೆಳ್ಳಿಯ ಬೆಲೆ ಈಗ ಪ್ರತಿ ಕಿಲೋಗ್ರಾಂಗೆ 92,500 ರೂಪಾಯಿಗಳ ವಹಿವಾಟುವಿದೆ.ಒಂದು ಗ್ರಾಂ ಗೆ ಬೆಳ್ಳಿಗೆ 92.50 ರೂಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 925 ರೂಪಾಯಿಯಾಗಿದೆ. 100 ಗ್ರಾಂ ಬೆಳ್ಳಿ 9,250ರೂ ಗಳು ಇದೆ. ಇಂದು ಬೆಳ್ಳಿಯ ಬೆಲೆಯಲ್ಲಿ ಇಂದು ಯಾವುದೇ ವ್ಯತ್ಯಾಸವಿಲ್ಲ.

MCXನಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಹೇಗಿದೆ?

ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಫೆಬ್ರವರಿ 5, 2025 ರ ವಿತರಣೆಯ ಚಿನ್ನದ ಭವಿಷ್ಯ ನೋಡೋದಾದ್ರೆ, 10 ಗ್ರಾಂ ಚಿನ್ನಕ್ಕೆ 0.21%ನಷ್ಟು ಇಳಿಕೆಯಾಗಿ 77,155ರೂ. ಆಗಿದೆ. ಅದೇ ರೀತಿ, ಮಾರ್ಚ್ 5, 2025ರ ಬೆಳ್ಳಿ ಭವಿಷ್ಯವು 0.04%ನಷ್ಟು ಇಳಿಕೆಯಾಗಿ 89,188 ರೂಪಾಯಿ ವಹಿವಾಟು ನಡೆಸುತ್ತಿದೆ. ಜಾಗತಿಕ ಬೇಡಿಕೆ, ಬಡ್ಡಿ ದರಗಳು, ಕರೆನ್ಸಿ ವಿನಿಮಯ ದರಗಳು, ಸರ್ಕಾರಿ ನೀತಿಗಳು ಮತ್ತು ಜಾಗತಿಕ ಘಟನೆಗಳಂತಹ ದೇಶೀಯ ಮತ್ತು ಅಂತರರಾಷ್ಟ್ರೀಯ ಎರಡೂ ಅಸ್ಥಿರಗಳಿಂದ ಚಿನ್ನದ ಬೆಲೆಗಳು ಹೆಚ್ಚು ಪರಿಣಾಮ ಬೀರಬಹುದು.

ಸ್ಪಾಟ್ ಗೋಲ್ಡ್ ರೇಟ್ ?

ರಾಯಿಟರ್ಸ್ ವರದಿ ಪ್ರಕಾರ ಸ್ಪಾಟ್ ಚಿನ್ನವು 02:07ಗೆ ಪ್ರತಿ ಔನ್ಸ್‌ಗೆ $2,648.76 ಕ್ಕೆ ಶೇ.0.5 ರಷ್ಟು ಏರಿಕೆಯಾಯಿತು, ನಂತರ ಗೋಲ್ಡ್ ಸೇಷನ್ ನಲ್ಲಿ ಶೇ.1 ರಷ್ಟು ಏರಿಕೆಯಾಯಿತು. ಯುಎಸ್ ಚಿನ್ನದ ಮೌಲ್ಯವು ಶೇ.0.7% ಹೆಚ್ಚಿನ $2,665.40 ತಲುಪಿದೆ.

ಚಿನ್ನದ ಬೆಲೆ ಇಳಿಕೆಗೆ ಕಾರಣವೇನು?

ಚಿನ್ನದ ಬೆಲೆಗಳು ಜಾಗತಿಕ ಮಟ್ಟದಲ್ಲಿ ಇನ್ನೂ ಸಹ ರಾಜಕೀಯ ಅಶಾಂತಿ ವಾತಾವರಣ ಮುಂದುವರೆದಿದೆ. ಇದ್ರ ಜೊತೆಗೆ ಯುಎಸ್‌ ಫೆಡರಲ್ ರಿಸರ್ವ್ 25 ಬಿಪಿಎಸ್‌ನಷ್ಟು ಬಡ್ಡಿ ದರ ತಗ್ಗಿಸಿದ ಬಳಿಕ ಹೂಡಿಕೆದಾರರ ಗಮನ ಮತ್ತು ಹೂಡಿಕೆಯ ಆಯ್ಕೆಯು ಸಹ ಬದಲಾಗಿದೆ. ವಿಪರೀತ ಹಣದುಬ್ಬರ ಏರಿಕೆಗೊಳ್ಳುತ್ತಿರುವುದು ಸಹ ಚಿನ್ನದ ಬೆಲೆ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ರೂಪಾಯಿ ದುರ್ಬಲಗೊಂಡು ಡಾಲರ್ ಬಲಗೊಂಡಿರುವುದು ಹಳದಿ ಲೋಹದ ಬೆಲೆ ಮೇಲೆ ನಕಾರಾತ್ಕಕ ಪರಿಣಾಮ ಬೀರುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆ ಸ್ಥಿರವಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕಡಿಯಾಗಿದ್ದು, ಇದೂ ಕೂಡ ಬೆಲೆ ಇಳಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ

ಭಾರತದ ವಿವಿಧ ನಗರಗಳಲ್ಲಿರುವ ಚಿನ್ನದ ಬೆಲೆ

ಕ್ರಮ
ಸಂಖ್ಯೆ
ನಗರಗಳು22 ಕ್ಯಾರೆಟ್24 ಕ್ಯಾರೆಟ್
1ಬೆಂಗಳೂರುರೂ.7,225ರೂ.7,882
2ಚೆನ್ನೈರೂ.7,225ರೂ.7,882
3ಮುಂಬೈರೂ.7,225ರೂ.7,882
4ದೆಹಲಿರೂ.7,240ರೂ.7,897
5ಕೋಲ್ಕತ್ತಾರೂ.7,225ರೂ.7,882

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

ಬೆಂಗಳೂರು: 9,250 ರೂ

ಚೆನ್ನೈ: 10,000 ರೂ

ಮುಂಬೈ: 9,150 ರೂ

ದೆಹಲಿ: 9,250 ರೂ

ಕೋಲ್ಕತಾ: 9,250

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+