ಜಾಗತಿಕ ಮಾರುಕಟ್ಟೆಯಲ್ಲಿ ಹಾಗೂ ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಏಪ್ರಿಲ್ 5ರಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಆದರೆ ಏಪ್ರಿಲ್ 6ರಂದು ಜಾಗತಿಕ ಮಾರುಕಟ್ಟೆ ಹಾಗೂ ಭಾರತದ ಮಾರುಕಟ್ಟೆ ಎರಡರಲ್ಲೂ ಚಿನ್ನದ ದರವು ಇಳಿಕೆಯಾಗಿದೆ. ಭಾರತೀಯ ಮಾರುಕಟ್ಟೆಯು ಇಂದು ನಿನ್ನೆಗೆ ಹೋಲಿಸಿದಾಗ ಕೊಂಚ ಇಳಿಕೆಯಾಗಿದೆ. ಪ್ರಮುಖವಾಗಿ ನಿನ್ನೆ 5 ಕಾರಣಗಳಿಂದಾಗಿ ಚಿನ್ನ ಹಾಗೂ ಬೆಳ್ಳಿ ದರವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.
ನಿನ್ನೆ ಮಲ್ಟಿ ಕಮೋಡಿಟಿ ಎಕ್ಸ್‌ಚೇಂಜ್‌ನಲ್ಲಿ (ಎಂಸಿಎಕ್ಸ್) 10 ಗ್ರಾಂ ಚಿನ್ನದ ಬೆಲೆಯು ಸಾರ್ವಕಾಲಿಕ ಏರಿಕೆ ಕಂಡಿದ್ದು, 61,145 ರೂಪಾಯಿಗೆ ತಲುಪಿದೆ. ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವು 13ನೇ ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ. ಇನ್ನೊಂದೆಡೆ ಬೆಳ್ಳಿ ದರವು ಕೂಡಾ ಏರಿಕೆ ಕಂಡಿದೆ. ಬೆಳ್ಳಿ ದರವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 12 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದ್ದರೆ, ಎಂಸಿಎಕ್ಸ್‌ನಲ್ಲಿ 22 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಜನವರಿ 6ರಂದು ಈ ಸಮಯದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಕುಗ್ಗಿದ್ದು 60747.00 ರೂಪಾಯಿ ಆಗಿದೆ. ಬೆಳ್ಳಿ ಏರಿಕೆಯಾಗ್ಗಿದ್ದು 74626.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.11ರಷ್ಟು ಇಳಿದಿದ್ದು 2,018.28 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.08ರಷ್ಟು ಕುಸಿತ ಕಂಡಿದ್ದು 24.92 ಯುಎಸ್ ಡಾಲರ್ ಆಗಿದೆ.
ಅಬಕಾರಿ ಸುಂಕ, ಉತ್ಪಾದನಾ ವೆಚ್ಚಗಳು ಮತ್ತು ರಾಜ್ಯ ತೆರಿಗೆಗಳಂತಹ ನಿರ್ದಿಷ್ಟ ಅಂಶಗಳ ಆಧಾರದ ಮೇಲೆ, ರಾಷ್ಟ್ರದ ವಿವಿಧ ಪ್ರದೇಶಗಳಿಗೆ ಚಿನ್ನದ ಬೆಲೆ ಬೇರೆ ಬೇರೆ ರೀತಿಯಾಗಿರುತ್ತದೆ. ಮಂಗಳೂರಿನಲ್ಲಿರುವ ಚಿನ್ನದ ದರಕ್ಕೂ ಚೆನ್ನೈನಲ್ಲಿರುವ ಚಿನ್ನದ ದರಕ್ಕೂ ವ್ಯತ್ಯಾಸ ಇರುತ್ತದೆ. ಬೆಳ್ಳಿ ದರವು ಕೂಡಾ ಈ ರೀತಿಯೇ ಆಗಿದೆ. ಪ್ರದೇಶಕ್ಕೆ ಅನುಗುಣವಾಗಿ ಅಲ್ಲಿನ ತೆರಿಗೆಗಳ ಆಧಾರದಲ್ಲಿ ಚಿನ್ನದ ಬೆಲೆಯು ನಿರ್ಧಾರವಾಗುತ್ತದೆ. ಭಾರತದಲ್ಲಿ ಚಿನ್ನದ ದರ ಎಷ್ಟಿದೆ ಎಂಬ ಬಗ್ಗೆ ಈ ಕೆಳಗೆ ಮಾಹಿತಿ ನೀಡಲಾಗಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ ನೋಡಿ?
10 ದಿನದಲ್ಲಿ 4 ದಿನ ಚಿನ್ನದ ಬೆಲೆಯು ಏರಿಕೆಯಾಗಿದೆ. ಏಪ್ರಿಲ್ ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 350 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 55,900 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 380 ರೂಪಾಯಿ ಕುಗ್ಗಿದ್ದು ಪ್ರಸ್ತುತ 60,980 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 600 ರೂಪಾಯಿ ಇಳಿಕೆಯಾಗ್ಗಿದ್ದು ಪ್ರಸ್ತುತ 76,490 ರೂಪಾಯಿ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,950 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 61,030 ರೂಪಾಯಿ (-380 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (-380 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 56,050 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 61,130 ರೂಪಾಯಿ (-380 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,900 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 60,980 ರೂಪಾಯಿ (-380 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,950 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 61,030 ರೂಪಾಯಿ (-380 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,950 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 61,030 ರೂಪಾಯಿ (-380 ರೂಪಾಯಿ)


Click it and Unblock the Notifications