ಕರ್ನಾಟಕದಲ್ಲಿ ಕರ್ನಾಟಕ ಮಿಲ್ಕ್ ಫೆಡ್ರೇಷನ್ ಲಿಮಿಟೆಡ್ ನಂದಿನಿ ಹಾಲಿನ ದರವನ್ನು ಸತತ ಏರಿಸುತ್ತಿರಬೇಕಾದರೆ ಅತ್ತ ದೇಶದ ನಂಬರ್ ಒನ್ ಮಿಲ್ಕ್ ಬ್ರಾಂಡ್ ಅಮೂಲ್ ಹಾಲಿನ ದರದಲ್ಲಿ ಲೀಟರ್‌ಗೆ ಒಂದು ರೂಪಾಯಿ ದರ ಕಡಿತ ಮಾಡುವ ಮೂಲಕ ಗ್ರಾಹಕರಿಗೆ ಗುಡ್‌ನ್ಯೂಸ್ ಮಾಡಿದೆ.
ಹೌದು.. ದೇಶದ ಪ್ರಮುಖ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಾದ ಅಮುಲ್ ಮತ್ತು ಮದರ್ ಡೈರಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ ಒಂದು ರೂಪಾಯಿ ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ದರ ದೇಶದಾದ್ಯಂತ ಅನ್ವಯವಾಗಲಿದೆ.

ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್ (GCMMF) ನ ಮ್ಯಾನೇಜಿಂಗ್ ಡೈರೆಕ್ಟರ್ ಜಯೇನ್ ಮೆಹ್ತಾ ಅವರು ಘೋಷಿಸಿದಂತೆ, ಅಮುಲ್ ತನ್ನ 1 ಲೀಟರ್ ಗೋಲ್ಡ್, ತಾಜಾ ಮತ್ತು ಟೀ ಸ್ಪೆಷಲ್ ಹಾಲಿನ ಪ್ಯಾಕ್‌ಗಳ ಬೆಲೆಯನ್ನು 1 ರೂಪಾಯಿ ಕಡಿತಗೊಳಿಸಿದೆ. ಈ ಬೆಲೆ ಕಡಿತವು ಕೇವಲ 1 ಲೀಟರ್ ಪ್ಯಾಕ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಈ ಹಿಂದೆ ಜೂನ್ 2024 ರಲ್ಲಿ ಅಮುಲ್ ಹಾಲಿನ ಬೆಲೆಯನ್ನು ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿತ್ತು.
ಬೆಲೆ ಕಡಿತದ ವಿವರಗಳು: ಅಮುಲ್ ತನ್ನ 1 ಲೀಟರ್ ಗೋಲ್ಡ್ ಹಾಲಿನ ಪ್ಯಾಕ್‌ನ ಬೆಲೆಯನ್ನು 66 ರೂಪಾಯಿಯಿಂದ 65 ರೂಪಾಯಿಗೆ ಕಡಿಮೆ ಮಾಡಿದೆ. ಅದೇ ರೀತಿಯಾಗಿ, 1 ಲೀಟರ್ ತಾಜಾ ಹಾಲಿನ ಬೆಲೆ 54 ರೂಪಾಯಿಯಿಂದ 53 ರೂಪಾಯಿಗೆ ಮತ್ತು ಟೀ ಸ್ಪೆಷಲ್ ಹಾಲಿನ ಬೆಲೆ 62 ರೂಪಾಯಿಯಿಂದ 61 ರೂಪಾಯಿಗೆ ಕಡಿಮೆಯಾಗಿದೆ.
ಈಗಿನ ಬೆಲೆ ಕಡಿತದಿಂದ ಗ್ರಾಹಕರಿಗೆ ಸ್ವಲ್ಪ ಮಟ್ಟಿನ ರಿಯಾಯಿತಿ ದೊರೆತಿದ್ದರೂ, ಹಾಲಿನ ಬೆಲೆಗಳು ಭವಿಷ್ಯದಲ್ಲಿ ಮತ್ತೆ ಏರಬಹುದು ಎಂಬ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಹಾಲಿನ ಉತ್ಪಾದನೆ, ಬೇಡಿಕೆ ಮತ್ತು ಮಾರುಕಟ್ಟೆ ಪರಿಸ್ಥಿತಿಗಳಂತಹ ಅಂಶಗಳು ಹಾಲಿನ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ.
ನಂದಿನಿ ಹಾಲಿನ ಬೆಲೆ ಏರಿಕೆಯಾಗಲಿದೆಯೇ?
ಕರ್ನಾಟಕದಲ್ಲಿ ನಂದಿನಿ ಹಾಲಿನ ದರವನ್ನು ಕೆಎಂಎಫ್ ಕಳೆದ ವರ್ಷ ಆಗಸ್ಟ್ನಲ್ಲಿ ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಿತ್ತು. ಬೆಲೆ ಏರಿಕೆ ನಂತರ ಒಂದು ಲೀಟರ್ ಟೋನ್ಡ್ ಹಾಲಿಗೆ 42 ರೂ., ಹೋಮೋಜೆನೈಸ್ಡ್ ಹಾಲಿಗೆ 43 ರೂ., ಪಾಶ್ಚರೀಕರಿಸಿದ ಹಾಲಿಗೆ 46 ರೂ. ಮತ್ತು ಶುಭಂ ವಿಶೇಷ ಹಾಲಿಗೆ 48 ರೂ. ದರ ನಿಗದಿಯಾಗಿತ್ತು. ಸದ್ಯ ಇದೇ ದರದಲ್ಲಿ ನಂದಿನಿ ಬ್ರ್ಯಾಂಡ್ ಹಾಲು ಮಾರಾಟ ಮಾಡಲಾಗುತ್ತಿದೆ.ಆರು ತಿಂಗಳ ಹಿಂದಷ್ಟೇ ಕರ್ನಾಟಕದಲ್ಲಿ ನಂದಿನಿ ಹಾಲಿನ ಪ್ರಮಾಣ ಮತ್ತು ದರ ಏರಿಕೆಯಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಗೆ ಕೆಎಂಎಫ್ ಮುಂದಾಗಿದ್ದು ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 5 ರೂ. ಏರಿಸುವ ಕುರಿತು ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಎಲ್. ಭೀಮಾನಾಯ್ಕ ಅವರು ಹೇಳಿದ್ದರು. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವನೆ ಹೋಗಿದ್ದು, ಸರ್ಕಾರದ ಹಂತದಲ್ಲಿ ದರ ಏರಿಕೆ ಕುರಿತಾಗಿ ತೀರ್ಮಾನ ಕೈಗೊಳ್ಳಬೇಕು ಎನ್ನುವ ಅಭಿಪ್ರಾಯವನ್ನು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಈ ಹಿಂದೆ ಹೇಳಿದ್ದರು. ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷದಲ್ಲಿ ರೈತರಿಗೆ ಕನಿಷ್ಠ 5 ರೂ.ನಷ್ಟು ಹಾಲಿನ ದರ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ನೀಡಲಿದ್ದಾರೆ. ಸಿಎಂ ಶೀಘ್ರದಲ್ಲೇ ರಾಜ್ಯದ ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು, ಹಾಲು ಉತ್ಪಾದಕ ರೈತರಹಿತ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಇತ್ತೀಚೆಗೆ ಹೇಳಿದ್ದರು.
ಇತ್ತೀಚಿನ ದಿನಗಳಲ್ಲಿ ಹಲವು ಸಂಸ್ಥೆಗಳು ಹಾಲಿನ ದರವನ್ನು ಹೆಚ್ಚಿಸಿವೆ. ಬೆಲೆಗಳನ್ನು ಕಡಿಮೆ ಮಾಡುವ ಅಮುಲ್‌ನ ಕ್ರಮವು ಬೆಲೆ ಇಳಿಕೆಯನ್ನು ಪರಿಗಣಿಸಲು ಇತರ ಸಂಸ್ಥೆಗಳ ಮೇಲೆ ಒತ್ತಡ ಹೇರುವ ನಿರೀಕ್ಷೆಯಿದೆ. ಈ ನಡೆಯ ಹಿಂದಿನ ಕಾರಣಗಳನ್ನು ಅಮುಲ್ ಹೇಳಿಲ್ಲ. ಆದರೆ, ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಪೈಪೋಟಿಯನ್ನು ಗಮನದಲ್ಲಿಟ್ಟುಕೊಂಡು ಗ್ರಾಹಕರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದು ತಜ್ಞರ ಲೆಕ್ಕಾಚಾರ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications