ರಾಜ್ಯ ಸರ್ಕಾರ ಕ್ರೀಡಾ ಪಟುಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಈ ಮೂಲಕ ತಮ್ಮ ಸರ್ಕಾರ ಕ್ರೀಡಾ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಸೂಚಿಸಿದಂತಿದೆ. ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾ ಪಟುಗಳಿಗೆ ಸಿಎಂ ಬಂಪರ್ ಆಫರ್ ಘೋಷಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 06 ಕೋಟಿ ರೂಪಾಯಿ, ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 04 ಕೋಟಿ ರೂಪಾಯಿ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂಪಾಯಿ. ಪ್ರೋತ್ಸಾಹಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಏಷಿಯನ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯವನ್ನು ಒಳಗೊಂಡ ಕ್ರೀಡಾ ನಗರವನ್ನು (Sports City) ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 04 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು ಎಂದಿದ್ದಾರೆ.

ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14 ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ ಯೋಜಿಸಲಾಗುವುದು.
ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ನಿರ್ಮಿಸಲಾಗುವುದು. ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ 10 ಕೋಟಿ ರೂ. ಒದಗಿಸಲಾಗುವುದು ಎಂದಿದ್ದಾರೆ.
ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ರೈಫಲ್ ಶೂಟಿಂಗ್ ಅಸೋಸಿಯೇಷನ್, ಹಾಕಿ ಕರ್ನಾಟಕ, ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್, ಆರ್ಚರಿ ಅಸೋಸಿಯೇಷನ್, ಅಥ್ಲೆಟಿಕ್ ಅಸೋಸಿಯೇಷನ್, ಕಯಾಕಿಂಗ್ ಮತ್ತು ಕೆನೋಯಿಂಗ್ ಅಕಾಡೆಮಿ, ಸೈಕ್ಲಿಂಗ್ ಅಕಾಡೆಮಿ ವಿಜಯಪುರ ಹಾಗೂ ಫೆನ್ಸಿಂಗ್ ಅಸೋಸಿಯೇಷನ್ ಗಳಿಗೆ ಒಟ್ಟಾರೆ 12 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications