ಚಿನ್ನದಂತೆ ಬೆಳ್ಳಿ ಮೇಲೆ ಹೂಡಿಕೆದಾರರ ಸಂಖ್ಯೆ ಹೆಚ್ಚಾಗಿದೆ. ಅದೇ ಕಾರಣದಿಂದ ಈ ಬಾರಿ ಬೆಳ್ಳಿ ದರ ಭಾರೀ ಏರಿಕೆ ಕಂಡಿದೆ. ಇದುವರೆಗೆ ಏರಿಕೆಯಾಗದ ಬೆಲೆಯಲ್ಲಿ ಈ ಬಾರಿ ಬೆಳ್ಳಿ ಬೆಲೆ ಏರಿಕೆ ಕಂಡಿದೆ. ಆದರೆ ದಾಖಲೆ ಬೆಲೆಯಲ್ಲಿ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ ಕಳೆದ ಮೂರು ದಿನಗಳಿಂದ ಇಳಿಕೆಯ ಹಾದಿ ಹಿಡಿದಿದೆ. ಇಂದು ಕೂಡಾ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ಬೆಲೆ (Silver Rate India) ಎಷ್ಟಿದೆ ಗೊತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ.

ಹೊಸ ವರ್ಷದ ಆರಂಭದ ದಿನ, ಜನವರಿ 1, 2026 ರಂದು, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಇಳಿಕೆಯಾಗಿದೆ. ಪ್ರತೀ ಕೆಜಿಗೆ ಇಂದು 2.35 ಲಕ್ಷ ರೂ. ತಲುಪಿದ್ದು, ₹578 (021%) ಇಳಿಕೆ ಕಂಡಿದೆ. ಹಾಗಿದ್ರೆ ದೇಶದ ಹಲವು ರಾಜ್ಯಗಳಲ್ಲಿ ಬೆಳ್ಳಿ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಡಿಸೆಂಬರ್ 31 ರಂದು ಬೆಳ್ಳಿ ಬೆಲೆ ಸ್ಥಿರವಾಗಿತ್ತು. ಆದರೆ ಹೊಸ ವರ್ಷದ ಆರಂಭದ ದಿನ, ಜನವರಿ 1 ರಂದು ಬೆಳ್ಳಿ ಬೆಲೆ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ. ಅದೇ ಪ್ರಕಾರ ಇಂದು 1 ಗ್ರಾಂ ಬೆಳ್ಳಿ ದರ 238 ರೂ. ಆಗಿದ್ದು, ನಿನ್ನೆ 239 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 1 ರೂ. ಇಳಿಕೆಯಾಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು ₹1,904 ರೂ. ಆಗಿದ್ದು, ನಿನ್ನೆ ₹1,912 ರೂ. ಇತ್ತು. ಒಟ್ಟು ಇಂದು ₹8 ರೂ. ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,380 ರೂ. ಆಗಿದ್ದು, ನಿನ್ನೆ ₹2,390 ರೂ. ಆಗಿತ್ತು. ಒಟ್ಟು ₹10 ರೂ. ಕುಸಿತ ಕಂಡಿದೆ. 100 ಗ್ರಾಂ ಬೆಳ್ಳಿ ಬೆಲೆ ಇಂದು ₹23,800 ರೂ. ಆಗಿದೆ. ನಿನ್ನೆ ₹23,900 ರೂ. ಇತ್ತು. ನಿನ್ನೆಗಿಂತ ಇಂದು ₹100 ರೂ. ಏರುಪೇರಾಗಿದೆ. 1000 ಗ್ರಾಂ ಬೆಳ್ಳಿ ದರ ಇಂದು ₹2,38,000 ರೂ. ಆಗಿದ್ದು, ನಿನ್ನೆ ₹2,39,000 ರೂ. ಇತ್ತು. ಒಟ್ಟು ₹1,000 ರೂ. ವ್ಯತ್ಯಾಸವಾಗಿದೆ.
ಬೆಂಗಳೂರಿನ ಬೆಳ್ಳಿ ದರ:
ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ನೋಡುವುದಾದ್ರೆ, 10 ಗ್ರಾಂ ಬೆಳ್ಳಿ ದರ 2,380 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 23,800 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆ 2,38,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 2,560 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 25,600 ರೂ. ಆಗಿದೆ. ಇನ್ನು 1 ಕೆಜಿ ಬೆಳ್ಳಿ ದರ ಇಂದು 2,56,000 ರೂ. ಆಗಿದೆ. ನಿನ್ನೆಗಿಂತ ಇಂದು ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ
ಮುಂಬೈ ಬೆಳ್ಳಿ ಬೆಲೆ:
ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,380 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 23,800 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆ 2,38,000 ರೂ. ಆಗಿದೆ. ಪ್ರತೀ ಗ್ರಾಂ ನಲ್ಲಿ 1 ರೂ. ಇಳಿಕೆ ಕಂಡಿದೆ
ಹೈದರಾಬಾದ್ ಬೆಳ್ಳಿ ಬೆಲೆ:
ಹೈದರಾಬಾದ್‌ನಲ್ಲಿ, ಚೆನ್ನೈನಂತೆ ಹತ್ತು ಗ್ರಾಂ ಬೆಳ್ಳಿ ಬೆಲೆ 2,560 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 25,600 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 2,56,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲೂ ಇಂದು ಬೆಳ್ಳಿ ದರ ಇಳಿಕೆ ಕಂಡಿದೆ. ಅದೇ ಪ್ರಕಾರ 10 ಗ್ರಾಂ ಬೆಳ್ಳಿ ದರ 2,380 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 23,800 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆ 2,38,000 ರೂ. ಆಗಿದೆ. ಪ್ರತೀ ಗ್ರಾಂ ನಲ್ಲಿ 1 ರೂ. ಕುಸಿತವಾಗಿದೆ.
MCX ಬೆಳ್ಳಿ ದರ:
ಭಾರತದ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ (MCX) 2026 ರ ಆರಂಭದ ದಿನವೇ ಬೆಳ್ಳಿ ದರದಲ್ಲಿ 578 (021%) ನಷ್ಟದೊಂದಿಗೆ, 2,35,000 ಕ್ಕೆ ತಲುಪಿದೆ..
(ಈ ವಿಶ್ಲೇಷಣೆ ಮತ್ತು ಮಾಹಿತಿ ಕೇವಲ ವೈಯಕ್ತಿಕ ವಿಶ್ಲೇಷಕರು ಅಥವಾ ಸಂಸ್ಥೆಗಳ ಅಭಿಪ್ರಾಯವಾಗಿದೆ ಮತ್ತು Goodreturns.in ಅಥವಾ Greynium Information Technologies Private Limited ನ ಅಭಿಪ್ರಾಯವನ್ನು ಹೇಳಲಾಗುವುದಿಲ್ಲ. ನಾವು ಯಾವುದೇ ಮಾಹಿತಿಯ ನಿಖರತೆ, ಪೂರ್ಣತೆ ಅಥವಾ ವಿಶ್ವಾಸಾರ್ಹತೆ ಬಗ್ಗೆ ಗ್ಯಾರಂಟಿ ನೀಡುವುದಿಲ್ಲ, ಒಪ್ಪಿಕೊಳ್ಳುವುದಿಲ್ಲ ಅಥವಾ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ನಾವು ಯಾವುದೇ ಹೂಡಿಕೆ ಸಲಹೆ ನೀಡುವುದಿಲ್ಲ ಅಥವಾ ಷೇರುಗಳ ಖರೀದಿ ಅಥವಾ ಮಾರಾಟ ಮಾಡುವ ಬಗ್ಗೆ ಒತ್ತಾಯಿಸುವುದಿಲ್ಲ. ಎಲ್ಲಾ ಮಾಹಿತಿಯನ್ನು ಕೇವಲ ಶಿಕ್ಷಣ ಮತ್ತು ಮಾಹಿತಿ ಉದ್ದೇಶಕ್ಕಾಗಿ ಮಾತ್ರ ಒದಗಿಸಲಾಗಿದೆ. ಯಾವುದೇ ಹೂಡಿಕೆ ನಿರ್ಧಾರ ತೆಗೆದುಕೊಳ್ಳುವ ಮೊದಲು, ಒಬ್ಬ ಅರ್ಹ ಹಣಕಾಸು ಸಲಹೆಗಾರರಿಂದ ಸಲಹೆ ಪಡೆದರೆ ಉತ್ತಮ).
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications