For Quick Alerts
ALLOW NOTIFICATIONS  
For Daily Alerts

ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದೀರಾ? ಹಾಗಿದ್ರೆ ಈ ಬ್ಯಾಂಕ್‌ನಲ್ಲಿ ನಿಮಗೆ ಹೆಚ್ಚುವರಿ ಬಡ್ಡಿ ಸಿಗಲಿದೆ!

|

ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಎರಡನೇ ಅಲೆಯನ್ನು ತಗ್ಗಿಸಲು ವ್ಯಾಕ್ಸಿನೇಷನ್ ಕಾರ್ಯಕ್ರಮ ಭರದಿಂದ ಸಾಗಿದೆ. ಹೆಚ್ಚಿನ ಕೋವಿಡ್‌-19 ವ್ಯಾಕ್ಸಿನೇಷನ್‌ ಅನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೆಲವು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಗ್ರಾಹಕರಿಗೆ ನಿಶ್ಚಿತ ಠೇವಣಿಗಳ ಮೇಲೆ ಹೆಚ್ಚಿನ ಬಡ್ಡಿದರಗಳನ್ನು ಘೋಷಿಸಿವೆ.

JIO vs Airtel vs VI: ವೇಗದ 3 ಜಿಬಿ ಡೇಟಾ ನೀಡುವ ಪ್ರಿಪೇಯ್ಡ್‌ ಯೋಜನೆಗಳುJIO vs Airtel vs VI: ವೇಗದ 3 ಜಿಬಿ ಡೇಟಾ ನೀಡುವ ಪ್ರಿಪೇಯ್ಡ್‌ ಯೋಜನೆಗಳು

ಹೌದು, ಕೆಲವು ಸರ್ಕಾರಿ ಬ್ಯಾಂಕ್‌ಗಳು ಒಂದು ಸೀಮಿತ ಅವಧಿಗೆ ಠೇವಣಿಗಳ ಮೇಲೆ ಹೆಚ್ಚುವರಿ ಬಡ್ಡಿ ನೀಡುತ್ತಿವೆ. ಕೋವಿಡ್ ಲಸಿಕೆಯ ಕನಿಷ್ಠ ಒಂದು ಡೋಸ್ ಪಡೆದ ಅರ್ಜಿದಾರರಿಗೆ 999 ದಿನಗಳ ನಿಶ್ಚಿತ ಠೇವಣಿಗಳ ಮೇಲೆ 30 ಬೇಸಿಸ್ ಪಾಯಿಂಟ್‌ ಅಥವಾ ಶೇಕಡಾ 0.30ರಷ್ಟು ಹೆಚ್ಚುವರಿ ಬಡ್ಡಿಯನ್ನು ನೀಡುವುದಾಗಿ ಯುಕೋ(UCO) ಬ್ಯಾಂಕ್ ತಿಳಿಸಿದೆ.

ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಈ ಬ್ಯಾಂಕ್‌ನಲ್ಲಿ ಹೆಚ್ಚುವರಿ ಬಡ್ಡಿ

''ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಉತ್ತೇಜಿಸಲು ನಾವು ಸಣ್ಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಸೆಪ್ಟೆಂಬರ್ 30ರವರೆಗೆ ನಾವು UCOVAXI-999 ಎಂಬ ನಿಶ್ಚಿತ ಅವಧಿಯ ಠೇವಣಿಗೆ ಹೆಚ್ಚುವರಿ ಬಡ್ಡಿ ನೀಡುತ್ತಿದ್ದೇವೆ'' ಎಂದು ಬ್ಯಾಂಕ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾ ಇತ್ತೀಚೆಗೆ ಇಮ್ಯೂನ್ ಇಂಡಿಯಾ ಠೇವಣಿ ಯೋಜನೆಯನ್ನು ಪ್ರಾರಂಭಿಸಿದ್ದು, ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ನಿಗದಿತ ದರಕ್ಕಿಂತ ಹೆಚ್ಚುವರಿ 25 ಬೇಸಿಸ್ ಪಾಯಿಂಟ್‌ಗಳ ಬಡ್ಡಿದರವನ್ನು ನೀಡಲು ಪ್ರಾರಂಭಿಸಿದೆ. ಈ ಠೇವಣಿ ಯೋಜನೆಯು 1,111 ದಿನಗಳ ಅವಧಿಯನ್ನು ಹೊಂದಿದೆ ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿತ್ತು.

ದೇಶದಲ್ಲಿ ನೀಡಲಾಗುವ ಕೋವಿಡ್-19 ಲಸಿಕೆ ಪ್ರಮಾಣಗಳ ಒಟ್ಟು ಸಂಖ್ಯೆ 23.59 ಕೋಟಿ ಮೀರಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

English summary

Central Bank of India: Higher Interest Rates For Bank Customers With At Least 1 Vaccine Dose

In a bid to encourage more COVID-19 vaccination, some state-owned lenders have announced higher interest rates on deposits, but for a limited period.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X