ಹೆದ್ದಾರಿಗಳ ಟೋಲ್‌ಗಳಲ್ಲಿ ಆಗುತ್ತಿದ್ದ ವಿಳಂಭವನ್ನು ತಪ್ಪಿಸಲು ಡಿಸೆಂಬರ್ 15ರಿಂದ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ್ದ ಸರ್ಕಾರ ಈ ಅನುಷ್ಟಾನವನ್ನು ಸ್ವಲ್ಪ ದಿನದ ಮಟ್ಟಿಗೆ ಮುಂದೂಡಿದೆ. ಡಿಸೆಂಬರ್ 15ರಿಂದ ಫಾಸ್ಟ್‌ಟ್ಯಾಗ್ ಇಲ್ಲದೆ ಟೋಲ್ ಪ್ರವೇಶಿಸುವ ವಾಹನಗಳಿಗೆ ಶುಲ್ಕ ವಿಧಿಸಲಾಗುವುದು ಎಂದು ತಿಳಿಸಿತ್ತು. ಆದರೆ ಇದೀಗ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಲು 45ದಿನಗಳ ಕಾಲಾವಕಾಶ ಕೋರಿದೆ.
2019 ಡಿಸೆಂಬರ್ 1 ರಿಂದ ಖಾಸಗಿ ಮತ್ತು ವಾಣಿಜ್ಯ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದರು. ಎಲ್ಲಾ ಟೋಲ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಮೂಲಕವೇ ಟೋಲ್ ಸ್ವೀಕರಿಸಬೇಕು ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆನಂತರ ಈ ಅವಧಿಯನ್ನು ಡಿಸೆಂಬರ್ 15ಕ್ಕೆ ವಿಸ್ತರಿಸಲಾಗಿತ್ತು. ಇದೀಗ ಡೆಡ್‌ಲೈನ್‌ಗೆ 1 ದಿನ ಇರುವಂತೆ (ಡಿಸೆಂಬರ್ 15) ಕೇಂದ್ರ ಸರ್ಕಾರ ಮತ್ತೆ ಅವಧಿಯನ್ನು ಮುಂದೂಡಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ರಸ್ತೆ ಸಾರಿಗೆ ಮತ್ತು ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ಎಲ್ಲಾ ಪಥಗಳನ್ನು ಫಾಸ್ಟ್‌ಟ್ಯಾಗ್ ಲೇನ್‌ಗಳಾಗಿ ಪರಿವರ್ತಿಸಲು 45 ದಿನಗಳ ವಿಸ್ತರಣೆಯನ್ನು ಕೋರಿದೆ. ಈಗಾಗಲೇ ದೇಶದ 75ರಷ್ಟು ಟೋಲ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಲಭ್ಯವಿದ್ದು, ಇನ್ನು 25 ಪರ್ಸೆಂಟ್‌ನಷ್ಟು ಫಾಸ್ಟ್‌ಟ್ಯಾಗ್ ಲೇನ್‌ಗಳನ್ನು ಪರಿವರ್ತಿಸಬೇಕಾಗಿದೆ. ಇನ್ನು ಡಿಸೆಂಬರ್ 15ರವರೆಗೆ ಉಚಿತವಾಗಿ ಫಾಸ್ಟ್‌ಟ್ಯಾಗ್ ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಈ ಹಿಂದಿನ ಘೋಷಣೆಯ ನಂತರ ಪೂರೈಕೆಯಲ್ಲಿ ಕೊರತೆಯಾಗಿದೆ.
''ಫಾಸ್ಟ್ ಟ್ಯಾಗ್‌ನಲ್ಲಿ ಬಳಸಲಾಗಿರುವ ಚಿಪ್ ಅನ್ನು ಆಮದು ಮಾಡಿಕೊಳ್ಳಲು ಇನ್ನೂ 6 ವಾರಗಳು ಬೇಕಾಗಿರುವುದರಿಂದ ಎಲ್ಲಾ ತಯಾರಕರ ಒಟ್ಟು ಉತ್ಪಾದನಾ ಸಾಮರ್ಥ್ಯವು ದಿನಕ್ಕೆ 30 ರಿಂದ 50 ಸಾವಿರ ವ್ಯಾಪ್ತಿಯಲ್ಲಿದೆ'' ಎಂದು ಎನ್‌ಹೆಚ್‌ಐ ಪತ್ರದಲ್ಲಿ ಬರೆದಿದೆ.
ಫಾಸ್ಟ್‌ಟ್ಯಾಗ್ ಅವಧಿ ಮತ್ತೆ ಮುಂದೂಡಿಕೆ ಆಗಿರುವುದರಿಂದ ಫಾಸ್ಟ್‌ಟ್ಯಾಗ್ ಖರೀದಿಸದ ವಾಹನ ಮಾಲೀಕರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications