ವಿಶೇಷ ಹೆಚ್ಚುವರಿ ಅಬಕಾರಿ ಸುಂಕದ ಮಿತಿಯನ್ನು ಕೇಂದ್ರ ಸರ್ಕಾರವು ಹೆಚ್ಚಳ ಮಾಡಿದೆ. ಈ ನಡೆಯ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ಕ್ರಮವಾಗಿ 18 ಮತ್ತು 12 ರುಪಾಯಿ ಏರಿಕೆ ಮಾಡಿದೆ ಎಂದು ಸಿಎನ್ ಬಿಸಿ- ಟಿವಿ 18 ವರದಿ ಮಾಡಿದೆ.
ಸದ್ಯಕ್ಕೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಮಿತಿ 10 ರುಪಾಯಿ ಮತ್ತು ಡೀಸೆಲ್ ಮೇಲಿನ ಮಿತಿ 4 ರುಪಾಯಿ ಇದೆ. ಈಗ ಮಿತಿ ಹೆಚ್ಚಳ ಮಾಡಿರುವುದರಿಂದ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಿಸಲು ಸರ್ಕಾರಕ್ಕೆ ಅನುಕೂಲವಾಗಿದೆ. ಮಾರ್ಚ್ 14ನೇ ತಾರೀಕು ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಲೀಟರ್ ಗೆ ತಲಾ 3 ರುಪಾಯಿ ಏರಿಸಿತ್ತು.
ಇನ್ನು ರಸ್ತೆ ಮತ್ತು ಮೂಲಸೌಕರ್ಯ ಸೆಸ್ ಅಂತ ಹೆಚ್ಚುವರಿಯಾಗಿ ಪ್ರತಿ ಲೀಟರ್ ಗೆ 1 ರುಪಾಯಿ ಹಾಕಲಾಗಿದೆ. ಮಾರ್ಚ್ 14ನೇ ತಾರೀಕು ಮಾಡಿದ ಅಬಕಾರಿ ಸುಂಕದಿಂದ 2 ಸಾವಿರ ಕೋಟಿ ರುಪಾಯಿ ಸಂಗ್ರಹಿಸಲು ನೆರವಾಗುತ್ತದೆ ಎಂದು ವರದಿ ಆಗಿತ್ತು. ಕಚ್ಚಾ ತೈಲ ಬೆಲೆ ಏರಿಕೆ ಆಗಿದ್ದರ ಅನುಕೂಲವನ್ನು ವರ್ಷದ ಮೊದಲ ತ್ರೈಮಾಸಿಕದಲ್ಲಿ ಗ್ರಾಹಕರಿಗೆ ವರ್ಗಾಯಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರವು ಆದಾಯ ಹೆಚ್ಚಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಅಬಕಾರಿ ಸುಂಕ ಹೆಚ್ಚಳ ಮಾಡಿತ್ತು.

ಅಬಕಾರಿ ಸುಂಕ ಹೆಚ್ಚಳ ಮಾಡುವುದು ಮಾಮೂಲು ಪ್ರಕ್ರಿಯೆ. ಹೀಗೆ ಮಾಡಿದಾಗ ಪೆಟ್ರೋಲ್- ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತದೆ. ಆದರೆ ಅದರಲ್ಲಿ ಬಹುತೇಕ ಕುಸಿಯುವ ದರದೊಂದಿಗೆ ಹೊಂದಾಣಿಕೆ ಮಾಡಲಾಗುತ್ತದೆ. ಏಕೆಂದರೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆ ಆಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications