ಕಚ್ಚಾ ತೈಲ ಬೆಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಕುಸಿದಿದೆಯಲ್ಲಾ, ಇದೇ ಸಂದರ್ಭವನ್ನು ಬಳಸಿಕೊಂಡು ಪೆಟ್ರೋಲ್ ಮತ್ತು ಡೀಸೆಲ್ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಬಹುದು ಎಂಬ ಸುದ್ದಿ ಚಾಲ್ತಿಯಲ್ಲಿದೆ. ಕಂದ್ರ ಬಜೆಟ್ ನಲ್ಲಿ ಖೋತಾ ಸರಿದೂಗಿಸಲು ಮತ್ತು ಕೊರೊನಾದಿಂದ ಎದ್ದಿರುವ ಸಮಸ್ಯೆಗೆ ಹೆಚ್ಚುವರಿ ಖರ್ಚು ನಿಭಾಯಿಸುವುದಕ್ಕೆ ಈ ಹಣ ಬಳಸಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ವರದಿಯಲ್ಲಿ ಹೇಳಿದೆ.
ಒಂದು ಬ್ಯಾರೆಲ್ ಕಚ್ಚಾ ತೈಲ ಬೆಲೆ $ 30ಕ್ಕೆ ಇಳಿದಲ್ಲಿ ಈಗಿರುವುದಕ್ಕಿಂತ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಲೀಟರ್ ಗೆ 10-12 ರುಪಾಯಿ ಇಳಿಸಬಹುದು. ಆದರೆ ಅಬಕಾರಿ ಸುಂಕದ ದರ ಈ ಹಿಂದೆ ಇದ್ದ ಪ್ರಮಾಣದಲ್ಲೇ ಇರಬೇಕು. ಆದರೆ ಸರ್ಕಾರದ ಕಡೆಯಿಂದ ದರ ಇಳಿಕೆಗೆ ಮಿತಿ ಹಾಕಬಹುದು. ಪೆಟ್ರೋಲ್- ಡೀಸೆಲ್ ಮೇಲೆ ಮತ್ತೆ ಅಬಕಾರಿ ಸುಂಕ ಏರಿಸಬಹುದು.
ಕೇಂದ್ರ ಸರ್ಕಾರವು ಕಳೆದ ಶನಿವಾರವಷ್ಟೇ ಪೆಟ್ರೋಲ್- ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಗೆ 3 ರುಪಾಯಿಯಂತೆ ಏರಿಕೆ ಮಾಡಿತ್ತು. ಇದರಿಂದ ಸರ್ಕಾರಕ್ಕೆ ಒಂದು ವರ್ಷದಲ್ಲಿ ಹೆಚ್ಚುವರಿಯಾಗಿ 45 ಸಾವಿರ ಕೋಟಿ ರುಪಾಯಿ ಆದಾಯ ಹೆಚ್ಚಾಗಲಿದೆ.

"ಪೆಟ್ರೋಲ್ - ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 3 ರುಪಾಯಿಯಷ್ಟನ್ನು ಕೇಂದ್ರ ಸರ್ಕಾರ ಏರಿಸಿದೆ. ಆ ಕಾರಣಕ್ಕೆ ಪೆಟ್ರೋಲ್ ಸದ್ಯದ ಬೆಲೆಯಿಂದ ಗರಿಷ್ಠ 4.25, ಡೀಸೆಲ್ 3.75 ರುಪಾಯಿ ಇಳಿಕೆ ಆಗಬಹುದು. ಆದ್ದರಿಂದ ಸುಂಕವನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ರೀಟೇಲ್ ದರ ಇಳಿಕೆಗೆ ಮಿತಿ ಹಾಕಬಹುದು" ಎಂದು ವರದಿಯಲ್ಲಿ ಹೇಳಲಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ವಾರಾಂತ್ಯದಲ್ಲೂ ಚಿನ್ನದ ಬೆಲೆ ಭರ್ಜರಿ ಇಳಿಕೆ! ದಿಢೀರ್ 10,300 ರೂ. ಕುಸಿತ



Click it and Unblock the Notifications