ಸರ್ಕಾರದ ಅತಿ ದೊಡ್ಡ ಆಸ್ತಿ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (BPCL) ಮತ್ತು ಶಿಪ್ಪಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (SCI ) ಷೇರುಗಳ ಮಾರಾಟಕ್ಕೆ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ(CCEA) ಅನುಮೋದನೆ ನೀಡಿದೆ.
ಬಿಪಿಸಿಎಲ್ ಹಾಗೂ ಎಸ್‌ಸಿಐ ಸೇರಿದಂತೆ ಸಾರ್ವಜನಿಕ ವಲಯದ ಐದು ಕಂಪನಿಗಳ ಷೇರು ಮಾರಾಟ ಮಾಡಲು ಕೇಂದ್ರ ಸರ್ಕಾರ ಬುಧವಾರ ತೀರ್ಮಾನಿಸಿದೆ.

ಬಿಪಿಸಿಎಲ್‌ನಲ್ಲಿ ಹೊಂದಿರುವ ಶೇಕಡಾ 53.29 ರಷ್ಟು ಷೇರುಗಳನ್ನು ಮಾರಾಟ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಷೇರು ಮಾರಾಟದ ಮೂಲಕ ಸರ್ಕಾರಿ ಸ್ವಾಮ್ಯದ ಈ ಎರಡು ಕಂಪನಿಗಳಿಂದ ನಿರ್ಗಮಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಜೊತೆಗೆ ಟಿಹೆಚ್‌ಡಿಸಿ ಇಂಡಿಯಾ ಮತ್ತು ಈಸ್ಟ್ ಎಲೆಕ್ಟ್ರಿಕ್ ಕಾರ್ಪೋರೇಷನ್ ಪಾಲನ್ನು ಸರ್ಕಾರಿ ಸ್ವಾಮ್ಯದ ಎನ್‌ಟಿಪಿಸಿಗೆ ನೀಡಲಿದೆ. ಸರ್ಕಾರದ ನಿರ್ವಹಣಾ ನಿಯಂತ್ರಣ ಉಳಿಸಿಕೊಂಡು ಆಯ್ದ ಕಂಪನಿಗಳ ಷೇರುಗಳ ಪಾಲನ್ನು ಶೇಕಡಾ 51ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸದ್ಯ ಬಿಪಿಸಿಎಲ್‌ನಲ್ಲಿ ಶೇಕಡಾ 53.29 ರಷ್ಟು ಮತ್ತು ಎಸ್‌ಸಿಐನಲ್ಲಿ ಶೇಕಡಾ 63.75 ರಷ್ಟು ಷೇರುಗಳನ್ನು ಸರ್ಕಾರ ಹೊಂದಿದೆ. ಈ ಎಲ್ಲಾ ಷೇರುಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಮೂಲಕ ಬೃಹತ್ ಖಾಸಗೀಕರಣಕ್ಕೆ ಒಪ್ಪಿಗೆ ನೀಡಿದೆ.
More From GoodReturns

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ನಿರ್ಧಾರದ ಮುನ್ನ ನಿಮ್ಮ ಹಣ ಸುರಕ್ಷಿತವೇ?

ಷೇರು ಮಾರುಕಟ್ಟೆ ಕುಸಿತದ ಭೀತಿ: ಹೂಡಿಕೆದಾರರೇ ಎಚ್ಚರವಿರಲಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?



Click it and Unblock the Notifications