ಕಲ್ಲಿದ್ದಲು ಗಣಿಗಾರಿಕೆಯಲ್ಲಿ ವಿದೇಶಿ ನೇರ ಹೂಡಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಗಣಿಗಾರಿಕೆಗೆ ಸಂಬಂಧಿಸಿದಂತೆ ಇರುವ ಕಾನೂನುಗಳನ್ನು ಸರಳಗೊಳಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ. ಈ ಉದ್ದೇಶಕ್ಕಾಗಿ ಕಾನೂನಿನ ತಿದ್ದುಪಡಿ ತರುವ ಸುಗ್ರಿವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
'' ಕಲ್ಲಿದ್ದಲು ವಲಯದಲ್ಲಿ ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುವ ಪ್ರಯತ್ನ ಇದಾಗಿದೆ. ಇಂಧನ ಆಮದು ಮಾಡಿಕೊಳ್ಳುವ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ'' ಎಂದು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಸಂಪುಟ ಸಭೆಯ ಬಳಿಕ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಕಾನೂನಿನ ತಿದ್ದುಪಡಿ ಸುಗ್ರಿವಾಜ್ಞೆಯಿಂದಾಗಿ ಸದ್ಯ ಕಾರ್ಯನಿರ್ವಹಿಸುತ್ತಿರುವ 46 ಕಬ್ಬಿಣ ಅದಿರು ಮತ್ತು ಇತರ ಗಣಿಗಳ ಹರಾಜು ಇದೇ ವರ್ಷ ಮಾರ್ಚ್ 31ರ ಒಳಗೆ ನಡೆಸಲು ಅವಕಾಶ ದೊರೆಯಲಿದೆ . ಇದೇ ಮೊದಲ ಬಾರಿಗೆ ಕಲ್ಲಿದ್ದಲು ಗಣಿಗಳ ಬ್ಲಾಕ್‌ಗಳನ್ನು ಜಾಗತಿಕ ಟೆಂಡರ್ ಮೂಲಕ ಹರಾಜು ಮಾಡಲಾಗುವುದು. ಇದರಿಂದ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್‌ನ (ಸಿಐಎಲ್) ಏಕಸ್ವಾಮ್ಯ ಕೊನೆಗೊಳ್ಳಲಿದ್ದು ಸ್ಪರ್ಧೆ ಹೆಚ್ಚಲಿದೆ ಎಂದಿದ್ದಾರೆ.
ಈಗಿರುವ ಗಣಿಯನ್ನು ಇತರ ಕಂಪನಿಯಿಂದ ಖರೀದಿಸಿದರೆ ಹೊಸದಾಗಿ ಗಣಿಗಾರಿಕೆ ಆರಂಭಿಸಲು ಖರೀದಿದಾರರು ಮತ್ತೆ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆಯಬೇಕಾಗಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications