For Quick Alerts
ALLOW NOTIFICATIONS  
For Daily Alerts

ಮಕ್ಕಳ ಆರೋಗ್ಯ ಸಂರಕ್ಷಣೆಗೆ ಇಂದ್ರಧನುಷ್ ಯೋಜನೆ ವಿಸ್ತರಣೆ, ಕುಡಿಯುವ ನೀರು ಒದಗಿಸಲು 3.60 ಲಕ್ಷ ಕೋಟಿ ಅನುದಾನ

|

ಕೇಂದ್ರ ಬಜೆಟ್ 2020-21ರಲ್ಲಿ ಮಕ್ಕಳ ಆರೋಗ್ಯ ಸಂರಕ್ಷಣೆಗೆ ಇಂದ್ರಧನುಷ್ ಯೋಜನೆಯನ್ನು ವಿಸ್ತರಣೆಗೆ ಮುಂದಾಗಿದೆ.

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಮೂಲಕ ತಾಲ್ಕೂಕು ಮತ್ತು ಹೋಬಳಿ ಹಂತದ ಆಸ್ಪತ್ರೆಗಳಿಗೂ ಇಂದ್ರಧನುಷ್ ಯೋಜನೆಯ ಸೌಲಭ್ಯವನ್ನು ಒದಗಿಸಲು ಚಿಂತನೆ ನಡೆಸಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಆರೋಗ್ಯ ಕ್ಷೇತ್ರ ಸುಧಾರಣೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ.

ಮಕ್ಕಳ ಆರೋಗ್ಯ ಸಂರಕ್ಷಣೆಗೆ ಇಂದ್ರಧನುಷ್ ಯೋಜನೆ ವಿಸ್ತರಣೆ

ವೈದ್ಯಕೀಯ ಸಲಕರಣೆಗಳಿಂದ ಸಂಗ್ರಹಿಸುವ ತೆರಿಗೆಯನ್ನು ಗುರುತಿಸಲಾದ 112 ಜಿಲ್ಲೆಗಳಲ್ಲಿ ಆರೋಗ್ಯ ಸುಧಾರಿಸಲು ಬಳಸಲಾಗುವುದು. ಕ್ಷಯ ರೋಗ ನಿರ್ಮೂಲನೆ ಕ್ರಮ. 2025ರ ವೇಳೆ ಕ್ಷಯ ರೋಗ ನಿರ್ಮೂಲನೆಗೆ ಪಣ ತೊಟ್ಟಿದೆ. 2024ರ ಹೊತ್ತಿಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಜನ ಆರೋಗ್ಯ ವಿಸ್ತರಣೆ ಮಾಡಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.

ಇದೇ ವೇಳೆಯಲ್ಲಿ ಎಲ್ಲಾ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಜಲ ಜೀವನ್ ಮಿಷನ್ ಘೋಷಣೆ ಮಾಡಲಾಗಿದ್ದು, ಇದಕ್ಕಾಗಿ 3.60 ಲಕ್ಷ ಕೋಟಿ ಅನುದಾನ ನೀಡಲಾಗುವುದು. ಸ್ಥಳೀಯ ಕುಡಿಯುವ ನೀರು ಶುದ್ಧೀಕರಣ ಬಳಕೆ ಮತ್ತು ೧೦ ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿರುವ ನಗರಗಳಿಗೆ ಈ ಯೋಜನೆಯನ್ನು ಇದೇ ವರ್ಷ ಅನುಷ್ಟಾನಕ್ಕೆ ತರಲು ಸೂಚಿಸಲಾಗಿದೆ.

English summary

Govt To Extend Mission Indradhanush And 3.6 Crore Towards Piped Water

Govt ordered to expand mission indradhanush and 3.6 crore towards piped water supply to households
Story first published: Saturday, February 1, 2020, 12:31 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X