ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಅತ್ಯಂತ ಮಹತ್ವಕಾಂಕ್ಷಿ ಯೋಜನೆಯಾಗಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕದ ಸರ್ಕಾರವು ಗ್ಯಾರಂಟಿ ಯೋಜನೆಯಾಗಿ ಇದನ್ನು ಪರಿಚಯಿಸಿತ್ತು. ಆದರೆ ಕಳೆದ ಕೆಲ ತಿಂಗಳಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಿರಲಿಲ್ಲ. ಆದರೆ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ಮನೆ ಒಡತಿಯರ ಬ್ಯಾಂಕ್ ಅಕೌಂಟ್‌ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಈ ಬಾರಿ ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ರಸ್ತೆ ಅಪಘಾತದಿಂದಾಗಿ ಚಿಕಿತ್ಸೆ ಹಾಗೂ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಗಿರುವುದು ನಿಜ . ಆದರೆ ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಅದಷ್ಟು ಬೇಗ ಹಣ ಸಂದಾಯ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಇದೇ ವೇಳೆ ವಿರೋಧ ಪಕ್ಷದವರವರ ಹೇಳಿಕೆ ವಿರುದ್ದ ಹರಿಹಾಯ್ದ ಅವರು, ವಿರೋಧ ಪಕ್ಷ ಸುಖಾ ಸುಮ್ಮನೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡಿಕೊಂಡು ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರು ಎಂದು ವ್ಯಂಗವಾಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ ದುಡ್ಡು ಬಂದಿದೆಯೋ ಇಲ್ಲವೋ ಚೆಕ್ ಮಾಡೋದು ಹೇಗೆ?
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಬಂದ ಕೂಡಲೇ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿದ ಮೊಬೈಲ್ ನಂಬರ್‌ಗೆ ಈ ಬಗ್ಗೆ ಸಂದೇಶ ಬರುತ್ತದೆ. ಮಾತ್ರವಲ್ಲದೇ ಇಲಾಖೆಯಿಂದಲೂ ಕೂಡ ಹಣ ಜಮೆಯಾಗಿದೆ ಎಂದು ಮೆಸೇಜ್ ಕಳುಹಿಸಲಾಗುತ್ತದೆ.
ಹೆಚ್ಚುತ್ತಲೇ ಇದೆ ಫಲಾನುಭವಿಗಳ ಸಂಖ್ಯೆ
ಗೃಹಲಕ್ಷ್ಮಿ ಯೋಜನೆ 2023ರ ಜುಲೈ 19ರಂದು ಪ್ರಾರಂಭವಾಗಿದ್ದು 2023ರ ಆಗಸ್ಟ್ 30ರಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗುತ್ತಿದೆ. ಈ ಯೋಜನೆಯು ಈಗಾಗಲೇ ಜನವರಿ 2025 ರವರೆಗೆ 1.28 ಕೋಟಿ ವ್ಯಕ್ತಿಗಳನ್ನು ನೋಂದಾಯಿಸಿಕೊಂಡಿದೆ, 2024-25ನೇ ಸಾಲಿನ ಪೂರ್ಣ 12 ತಿಂಗಳಿಗೆ ಈ ಯೋಜನೆಗೆ 28,604.40 ಕೋಟಿ ರೂ. ಮೀಸಲಿಡಲಾಗಿದೆ.
ಪ್ರಸ್ತುತ 2025 ಜನವರಿವರೆಗೆ 1.28 ಕೋಟಿ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ. 2024ರ ಜುಲೈ ಅಂತ್ಯದವರೆಗೆ 1.25 ಕೋಟಿ ಫಲಾನುಭವಿಗಳಿದ್ದರು. ಪ್ರತಿ ತಿಂಗಳೂ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಮಾಹಿತಿ ಪ್ರಕಾರ 22,63,894 ಪರಿಶಿಷ್ಟ ಜಾತಿ, 8,83,547 ಪರಿಶಿಷ್ಟ ಪಂಗಡದ ಫಲಾನುಭವಿಗಳಿದ್ದಾರೆ. 94 ಲಕ್ಷದಷ್ಟು ಫಲನುಭವಿಗಳು ಸಾಮಾನ್ಯ ಮತ್ತು ಇತರ ವರ್ಗಗಳಿಗೆ ಸೇರಿದವರಾಗಿದ್ದಾರೆ. ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಅತ್ಯಂತ ಮಹತ್ವಕಾಂಕ್ಷಿ ಯೋಜನೆಯಾಗಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕದ ಸರ್ಕಾರವು ಗ್ಯಾರಂಟಿ ಯೋಜನೆಯಾಗಿ ಇದನ್ನು ಪರಿಚಯಿಸಿತ್ತು. ಆದರೆ ಕಳೆದ ಕೆಲ ತಿಂಗಳಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಿರಲಿಲ್ಲ. ಆದರೆ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ಮನೆ ಒಡತಿಯರ ಬ್ಯಾಂಕ್ ಅಕೌಂಟ್‌ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಈ ಬಾರಿ ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ರಸ್ತೆ ಅಪಘಾತದಿಂದಾಗಿ ಚಿಕಿತ್ಸೆ ಹಾಗೂ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಗಿರುವುದು ನಿಜ . ಆದರೆ ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಅದಷ್ಟು ಬೇಗ ಹಣ ಸಂದಾಯ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಇದೇ ವೇಳೆ ವಿರೋಧ ಪಕ್ಷದವರವರ ಹೇಳಿಕೆ ವಿರುದ್ದ ಹರಿಹಾಯ್ದ ಅವರು, ವಿರೋಧ ಪಕ್ಷ ಸುಖಾ ಸುಮ್ಮನೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡಿಕೊಂಡು ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರು ಎಂದು ವ್ಯಂಗವಾಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ ದುಡ್ಡು ಬಂದಿದೆಯೋ ಇಲ್ಲವೋ ಚೆಕ್ ಮಾಡೋದು ಹೇಗೆ?
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಬಂದ ಕೂಡಲೇ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿದ ಮೊಬೈಲ್ ನಂಬರ್‌ಗೆ ಈ ಬಗ್ಗೆ ಸಂದೇಶ ಬರುತ್ತದೆ. ಮಾತ್ರವಲ್ಲದೇ ಇಲಾಖೆಯಿಂದಲೂ ಕೂಡ ಹಣ ಜಮೆಯಾಗಿದೆ ಎಂದು ಮೆಸೇಜ್ ಕಳುಹಿಸಲಾಗುತ್ತದೆ.
ಹೆಚ್ಚುತ್ತಲೇ ಇದೆ ಫಲಾನುಭವಿಗಳ ಸಂಖ್ಯೆ
ಗೃಹಲಕ್ಷ್ಮಿ ಯೋಜನೆ 2023ರ ಜುಲೈ 19ರಂದು ಪ್ರಾರಂಭವಾಗಿದ್ದು 2023ರ ಆಗಸ್ಟ್ 30ರಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗುತ್ತಿದೆ. ಈ ಯೋಜನೆಯು ಈಗಾಗಲೇ ಜನವರಿ 2025 ರವರೆಗೆ 1.28 ಕೋಟಿ ವ್ಯಕ್ತಿಗಳನ್ನು ನೋಂದಾಯಿಸಿಕೊಂಡಿದೆ, 2024-25ನೇ ಸಾಲಿನ ಪೂರ್ಣ 12 ತಿಂಗಳಿಗೆ ಈ ಯೋಜನೆಗೆ 28,604.40 ಕೋಟಿ ರೂ. ಮೀಸಲಿಡಲಾಗಿದೆ.
ಪ್ರಸ್ತುತ 2025 ಜನವರಿವರೆಗೆ 1.28 ಕೋಟಿ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ. 2024ರ ಜುಲೈ ಅಂತ್ಯದವರೆಗೆ 1.25 ಕೋಟಿ ಫಲಾನುಭವಿಗಳಿದ್ದರು. ಪ್ರತಿ ತಿಂಗಳೂ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಮಾಹಿತಿ ಪ್ರಕಾರ 22,63,894 ಪರಿಶಿಷ್ಟ ಜಾತಿ, 8,83,547 ಪರಿಶಿಷ್ಟ ಪಂಗಡದ ಫಲಾನುಭವಿಗಳಿದ್ದಾರೆ. 94 ಲಕ್ಷದಷ್ಟು ಫಲನುಭವಿಗಳು ಸಾಮಾನ್ಯ ಮತ್ತು ಇತರ ವರ್ಗಗಳಿಗೆ ಸೇರಿದವರಾಗಿದ್ದಾರೆ.

Click it and Unblock the Notifications