ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆ, ಹಲವು ಸಮಸ್ಯೆಗಳಿಗೆ ಪರಿಹಾರವಾಗಿದೆ. ಕಾಂಗ್ರೆಸ್ ಸರ್ಕಾರದ (Congress) ಬಹುನಿರೀಕ್ಷೆಯ ಯೋಜನೆಯೆಂದರೆ ಅದು ಪಂಚ ಗ್ಯಾರಂಟಿ ಯೋಜನೆಗಳಲ್ಲಿ, ಗೃಹಲಕ್ಷ್ಮಿ ಯೋಜನೆ ಕೂಡಾ ಒಂದು. ಸದ್ಯ ಕೋಟಿಗಟ್ಟಲೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿಗಳಾಗಿದ್ದು, ಕೆಲವು ತಿಂಗಳ ಹಣ ಬಿಡುಗಡೆಯಾಗಿಲ್ಲ ಎಂಬ ಕೂಗು ಕೇಳಿಬರುತ್ತಿದೆ.

ಇನ್ನು ಗೃಹಲಕ್ಷ್ಮಿ ಯೋಜನೆ ಈ ಬಾರಿಯ ಚಳಿಗಾಲದ ಅಧೀವೇಶನದಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿಸಿತ್ತು. ಮೂರು ತಿಂಗಳಿಂದ ಹಣ ಬಂದಿಲ್ಲ ಎಂಬ ಆರೋಪದ ಬೆನ್ನಲ್ಲೇ, ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಸಿಹಿಸುದ್ದಿ ಕೊಟ್ಟಿದ್ದಾರೆ.
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್!
ಸದನದ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಮುಂದಿನ ವಾರ ಅಂದರೆ ಸೋಮವಾರದಿಂದ ಶನಿವಾರದ ಒಳಗಡೆ ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.
ಯಾವಾಗ ಬರುತ್ತೆ 24ನೇ ಕಂತಿನ ಹಣ?
ಬೆಳಗಾವಿಯಲ್ಲಿ ಪೋಲಿಯೋ ಅಭಿಯಾನದ ಕಾರ್ಯಕ್ರಮದ ನಂತರ ಮಾತನಾಡಿದ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇನ್ನೇನು ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಯಾಗಲಿದೆ, ಅದಕ್ಕಾಗಿ ಹಣಕಾಸು ಇಲಾಖೆ ಕೂಡಾ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ. ಅಲ್ಲದೇ ಇಂದಿನಿಂದ ಬರುವ ಶನಿವಾರದೊಳಗೆ 24ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಭರವಸೆ ನೀಡಿದ್ದಾರೆ.
ಮೃತಪಟ್ಟವರಿಗೂ ಗೃಹಲಕ್ಷ್ಮಿ ಹಣ!
ಯಾವುದೇ ಖಾತೆಯಾಗಲಿ ಮೃತಪಟ್ಟ ಬಳಿಕ ನಿಷ್ಕ್ರಿಯವಾಗುತ್ತದೆ. ಆದರೆ ಇದೀಗ ಗೃಹಲಕ್ಷ್ಮಿ ಯೋಜನೆಯ ಹಣ ಮೃತಪಟ್ಟವರ ಖಾತೆಗೂ ಸಂದಾಯ ಮಾಡುವ ಕುರಿತು ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಹಣ ಸಂದಾಯದ ಬಗ್ಗೆ ಚರ್ಚಿಸಲೆಂದರೇ, ಸಿಎಂ ನೇತೃತ್ವದಲ್ಲಿ ಎರಡೆರಡು ಬಾರಿ ಸಭೆ ನಡೆಸಿದ್ದೇವೆ. ಮೃತಪಟ್ಟವರ ಖಾತೆಗೆ ಹಣ ಜಮಾ ಆದರೆ ತಕ್ಷಣ ಗೊತ್ತಾಗಲ್ಲ. ಅದೇ ಕಾರಣದಿಂದ ಸಾಫ್ಟ್ ವೇರ್ ಕೂಡಾ ಅಭಿವೃದ್ಧಿ ಪಡಿಸುತ್ತಿದ್ದೇವೆ. ಇನ್ನು ಮರಣ ಪ್ರಮಾಣ ಪತ್ರವನ್ನು ಅಂಗನವಾಡಿ ಕಾರ್ಯಕರ್ತರು ಚೆಕ್ ಮಾಡುತ್ತಾರೆ ಎಂದು ಹೇಳಿದ್ದಾರೆ.
ಸಿಎಂ ಎಚ್ಚರಿಕೆ ಬೆನ್ನಲ್ಲೇ ದಿಢೀರ್ ಘೋಷಣೆ!
ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಇನ್ನೂ ಬಂದಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ರಾಜ್ಯ ಸರ್ಕಾರ ಕೂಡಾ ಭಾರೀ ತಲ್ಲಣಗೊಂಡಿತ್ತು. ಅಲ್ಲದೇ ಸದನದಲ್ಲೂ ಭಾರೀ ಸಂಚಲನ ಸೃಷ್ಟಿಸಿತ್ತು. ಆದರೆ ಕ್ಯಾಬಿನೆಟ್ ಸಭೆಯಲ್ಲಿ ಸಚಿವರ ವಿರುದ್ಧ ಸಿಎಂ ಗರಂ ಆಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಬಾಕಿ ಉಳಿದಿರುವ ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅದೇ ರೀತಿ ಇದೀಗ ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಮಾಹಿತಿ ನೀಡುವ ವೇಳೆ 24ನೇ ಕಂತಿನ ಹಣ ಈ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.


Click it and Unblock the Notifications