ಕೋವಿಡ್-19 ಸಾಂಕ್ರಾಮಿಕ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳ ನಡುವೆ ಮೇ ತಿಂಗಳಿನಲ್ಲಿ ಜಿಎಸ್‌ಟಿ ಆದಾಯ ಸಂಗ್ರಹವು 1 ಲಕ್ಷ ಕೋಟಿ ರೂಪಾಯಿ ದಾಟಿದೆ.
ಮೇ 2021 ರಲ್ಲಿ ಸಂಗ್ರಹಿಸಿದ ಒಟ್ಟು ಜಿಎಸ್‌ಟಿ ಆದಾಯ 1,02,709 ಕೋಟಿ ರೂ. ಆಗಿದ್ದು, ಇದರಲ್ಲಿ ಸಿಜಿಎಸ್‌ಟಿ 17,592 ಕೋಟಿ ರೂ., ಎಸ್‌ಜಿಎಸ್‌ಟಿ 22,653 ರೂ., ಐಜಿಎಸ್‌ಟಿ 53,199 ಕೋಟಿ ರೂ. (ಸರಕುಗಳ ಆಮದಿನಲ್ಲಿ ಸಂಗ್ರಹಿಸಿದ 26,002 ಕೋಟಿ ರೂ.) ಮತ್ತು ಸೆಸ್ ರೂ. 9,265 ಕೋಟಿ (ಸರಕುಗಳ ಆಮದಿಗೆ ಸಂಗ್ರಹಿಸಿದ 868 ಕೋಟಿ ರೂ. ಸೇರಿದಂತೆ) ರೂಪಾಯಿನಷ್ಟಿದೆ.

ಇನ್ನು ಈ ತಿಂಗಳಲ್ಲಿ ಸರ್ಕಾರವು ಸಿಜಿಎಸ್‌ಟಿಗೆ 15,014 ಕೋಟಿ ರೂ. ಮತ್ತು ಐಜಿಎಸ್‌ಟಿಯಿಂದ ಎಸ್‌ಜಿಎಸ್‌ಟಿಗೆ 11,653 ಕೋಟಿ ರೂ. ನೀಡಿದೆ.
ಕಳೆದ ವರ್ಷ ಇದೇ ತಿಂಗಳಲ್ಲಿ ಜಿಎಸ್‌ಟಿ ಆದಾಯಕ್ಕಿಂತ ಮೇ 2021 ರಲ್ಲಿ ಆದಾಯವು ಶೇಕಡಾ 65ರಷ್ಟು ಹೆಚ್ಚಾಗಿದೆ. ಮೇ ತಿಂಗಳಲ್ಲಿ, ಸರಕುಗಳ ಆಮದಿನಿಂದ ಬರುವ ಆದಾಯವು ಶೇಕಡಾ 56ರಷ್ಟು ಹೆಚ್ಚಾಗಿದೆ ಮತ್ತು ದೇಶೀಯ ವಹಿವಾಟಿನಿಂದ (ಸೇವೆಗಳ ಆಮದು ಸೇರಿದಂತೆ) ಆದಾಯವು ಕಳೆದ ವರ್ಷ ಇದೇ ವರ್ಷಕ್ಕಿಂತ ಶೇಕಡಾ 69ರಷ್ಟು ಹೆಚ್ಚಾಗಿದೆ.
ಜಿಎಸ್‌ಟಿ ವ್ಯವಸ್ಥೆಯನ್ನು ಪರಿಚಯಿಸಿದ ನಂತರ ಏಪ್ರಿಲ್‌ನಲ್ಲಿ ಅತಿ ಹೆಚ್ಚು ಆದಾಯ ಸಂಗ್ರಹವಾಗಿತ್ತು. ಆದರೆ ಕಳೆದ ತಿಂಗಳಿಗೆ ಹೋಲಿಸಿದರೆ ಆದಾಯ ಸಂಗ್ರಹವು ಇಳಿಕೆಯಾಗಿದ್ದರೂ, ಸತತ 8ನೇ ತಿಂಗಳು ಜಿಎಸ್‌ಟಿ ಆದಾಯ ಸಂಗ್ರಹವು 1 ಲಕ್ಷ ಕೋಟಿ ರೂಪಾಯಿ ದಾಟಿದೆ.


Click it and Unblock the Notifications