ಮಾರ್ಚ್ನಲ್ಲಿ ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ಸಾರ್ವಕಾಲಿಕ ಗರಿಷ್ಠ ಪ್ರಮಾಣಕ್ಕೆ ತಲುಪಿದೆ. 1.42 ಲಕ್ಷ ಕೋಟಿ ರೂಪಾಯಿಗಳಷ್ಟು ಜಿಎಸ್ಟಿ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ಶುಕ್ರವಾರ ತಿಳಿಸಿದೆ.
ಮಾರ್ಚ್ 2022 ರಲ್ಲಿ ಒಟ್ಟು ಜಿಎಸ್ಟಿ ಆದಾಯವು 1,42,095 ಕೋಟಿ ರೂಪಾಯಿಗಳನ್ನು ಸಂಗ್ರಹವಾಗಿದೆ. ಇದರಲ್ಲಿ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್ಟಿ) 25,830 ಕೋಟಿ ರೂಪಾಯಿಗಳು, ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಎಸ್ಜಿಎಸ್ಟಿ) 32,378 ಕೋಟಿ ರೂಪಾಯಿಗಳು, ಐಜಿಎಸ್ಟಿ 74,470 ಕೋಟಿ ರೂಪಾಯಿಗಳು (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ 39,131 ಕೋಟಿಗಳು ಸೇರಿದಂತೆ) 1,49 ಕೋಟಿ ರೂಪಾಯಿ ಆಗಿದೆ. (ಸರಕುಗಳ ಆಮದಿನ ಮೇಲೆ ಸಂಗ್ರಹಿಸಿದ ರೂ 981 ಕೋಟಿ ಸೇರಿದಂತೆ)
ಮಾರ್ಚ್ 2022 ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ಸಾರ್ವಕಾಲಿಕ ಗರಿಷ್ಠವಾಗಿದೆ. ಜನವರಿಯಲ್ಲಿ ಸಂಗ್ರಹಿಸಲಾದ 1,40,986 ಕೋಟಿ ರೂ.ಗಳ ಹಿಂದಿನ ದಾಖಲೆಯನ್ನು ಮಾರ್ಚ್ ತಿಂಗಳಿನಲ್ಲಿ ಸಂಗ್ರಹವಾದ ಜಿಎಸ್ಟಿ ಪ್ರಮಾಣವು ಮುರಿದಿದೆ.

"ಇನ್ವರ್ಟೆಡ್ ಡ್ಯೂಟಿ ರಚನೆಯನ್ನು ಸರಿಪಡಿಸಲು ಕೌನ್ಸಿಲ್ ಕೈಗೊಂಡ ವಿವಿಧ ದರಗಳ ತರ್ಕಬದ್ಧ ಕ್ರಮಗಳಿಂದಲೂ ಆದಾಯದಲ್ಲಿ ಸುಧಾರಣೆಯಾಗಿದೆ," ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಮಾರ್ಚ್ 2020 ರ ಆದಾಯಕ್ಕಿಂತ ಅರ್ಧಪಾಲು ಅಧಿಕ!
ಕಳೆದ ವರ್ಷ ಇದೇ ಸಂದರ್ಭದಲ್ಲಿ ಸಂಗ್ರಹವಾದ ಜಿಎಸ್ಟಿಗಿಂತ ಈ ವರ್ಷ ಸರಿ ಸುಮಾರು ಶೇಕಡ 15ರಷ್ಟು ಅಧಿಕವಾಗಿದೆ. ಮಾರ್ಚ್ 2020 ರಲ್ಲಿನ ಜಿಎಸ್ಟಿ ಆದಾಯಕ್ಕಿಂತ ಶೇಕಡ 46 ಹೆಚ್ಚಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಫೆಬ್ರವರಿಯಲ್ಲಿ ಜಿಎಸ್ಟಿ 1,33,026 ಕೋಟಿ ರೂಪಾಯಿ ಸಂಗ್ರಹವಾಗಿದೆ. ಒಟ್ಟು ಮಾರಾಟ ತೆರಿಗೆ ಸಂಗ್ರಹವು ಜನವರಿಯಲ್ಲಿ ನಿವ್ವಳವಾದ 1,40,986 ಕೋಟಿ ರೂಪಾಯಿಗಿಂತ ಕಡಿಮೆಯಾಗಿತ್ತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications