ರಾಜ್ಯಗಳಿಗೆ ಪಾವತಿ ಮಾಡಬೇಕಿರುವ ಸರಕು ಮತ್ತು ಸೇವಾ ತೆರಿಗೆ (GST) ಪರಿಹಾರವನ್ನು ನೀಡಲು ಸಾಧ್ಯ ಆಗದಿರಬಹುದು ಎಂದು ಕೇಂದ್ರ ಸರ್ಕಾರವು ಸಂಸದೀಯ ಸಮಿತಿಗೆ ಹೇಳಿದೆ. ಹಣಕಾಸು ಸ್ಥಾಯಿ ಸಮಿತಿಯಲ್ಲಿ ಇರುವ ವಿರೋಧ ಪಕ್ಷದ ಸದಸ್ಯರು ಜುಲೈ 28ನೇ ತಾರೀಕಿನಂದು ಸಭೆಯಲ್ಲಿ ರಾಜ್ಯಗಳಿಗೆ ಪಾವತಿ ಮಾಡಬೇಕಿರುವ ಜಿಎಸ್ ಟಿ ಪರಿಹಾರದ ಬಗ್ಗೆ ಧ್ವನಿ ಎತ್ತಿದರು ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.
ಹಣಕಾಸು ಅಜಯ್ ಭೂಷಣ್ ಪಾಂಡೆ, ಕಾರ್ಖಾನೆ ಮತ್ತು ಆಂತರಿಕ ವ್ಯವಹಾರಗಳ ಉತ್ತೇಜನ ಇಲಾಖೆ (DPIIT) ಕಾರ್ಯದರ್ಶಿ ಗುರುಪ್ರಸಾದ್ ಮೋಹಪಾತ್ರ ಮತ್ತಿತರರು ಈ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿ ಆಗಿದೆ. ಈ ಸಮಿತಿಯ ಸಭೆಯಲ್ಲಿ ಭಾರತದ ಅಭಿವೃದ್ಧಿ ಆಗುತ್ತಿರುವ ಕಂಪೆನಿಗಳು ಹಾಗೂ ಆವಿಷ್ಕಾರಗಳಿಗೆ ಹಣಕಾಸು ನೆರವು ನೀಡುವ ಬಗ್ಗೆ ಚರ್ಚೆ ನಡೆದಿದೆ.
ಮುಂಬರುವ ದಿನಗಳಲ್ಲಿ ರಾಜ್ಯಗಳಿಗೆ ನೀಡಬೇಕಾಗಿರುವ ಜಿಎಸ್ ಟಿ ಪರಿಹಾರವನ್ನು ಪೂರ್ತಿಯಾಗಿ ಪಾವತಿಸಲು ಕೇಂದ್ರಕ್ಕೆ ಸಾಧ್ಯವಾಗದಿರಬಹುದು. ಕೊರೊನಾ ಬಿಕ್ಕಟ್ಟಿನಿಂದ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಆಗಿದೆ ಎಂದು ಸರ್ಕಾರದಿಂದ ಹೇಳಿರುವುದಾಗಿ ವರದಿ ಆಗಿದೆ. ಕೊರೊನಾದ ಕಾರಣಕ್ಕೇ ಜಿಎಸ್ ಟಿ ಸಂಗ್ರಹದಲ್ಲೂ ಇಳಿಕೆ ಆಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019- 20ನೇ ಸಾಲಿಗೆ ಕೇಂದ್ರ ಸರ್ಕಾರವು 1.65 ಲಕ್ಷ ಕೋಟಿ ರುಪಾಯಿಯನ್ನು ಜಿಎಸ್ ಟಿ ಪರಿಹಾರವಾಗಿ ಪಾವತಿಸಿದೆ ಎಂದು ಹಣಕಾಸು ಸಚಿವಾಲಯ ಜುಲೈ 27ರಂದು ತಿಳಿಸಿದೆ. ಹಣಕಾಸು ವರ್ಷಕ್ಕೆ ಒಟ್ಟು ಸೆಸ್ ಸಂಗ್ರಹ 95,444 ಕೋಟಿ ರುಪಾಯಿ ಆಗಿದೆ. ಸರ್ಕಾರವು 2020ರ ಏಪ್ರಿಲ್ ನಿಂದ ಜೂನ್ ವರೆಗೆ 1.85 ಲಕ್ಷ ಕೋಟಿ ಜಿಎಸ್ ಟಿ ಸಂಗ್ರಹಿಸಿದೆ. ಈ ಹಿಂದಿನ ವರ್ಷ ಇದೇ ಅವಧಿಗೆ 3.14 ಲಕ್ಷ ಕೋಟಿ ಸಂಗ್ರಹ ಆಗಿತ್ತು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications