ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್ ಮಂಗಳವಾರ 50ನೇ ಕೌನ್ಸಿಲ್ ಸಭೆಯನ್ನು ನಡೆಸಿದೆ. ಈ ಸಭೆಯಲ್ಲಿ ಸಿನಿಮಾ ಹಾಲ್‌ಗಳಲ್ಲಿ ಲಭ್ಯವಾಗುವ ಆಹಾರ ಪದಾರ್ಥಗಳ ಮೇಲಿನ ಹಾಗೂ ಕೆಲವು ಔಷಧಿಗಳ ಮೇಲಿನ ಜಿಎಸ್‌ಟಿಯನ್ನು ಕಡಿತಗೊಳಸಲು ಒಪ್ಪಿಗೆ ಸೂಚಿಸಲಾಗಿದೆ. ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಈ ಸಿನಿಮಾ ಹಾಲ್‌ಗಳಲ್ಲಿ ಲಭಿಸುವ ಆಹಾರ ಪಾನೀಯಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸಲು ಮನವಿ ಮಾಡಿತ್ತು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಜಿಎಸ್‌ಟಿ ಸಭೆಯು ನಡೆದಿದ್ದು, ರಾಜ್ಯಗಳ ಹಣಕಾಸು ಸಚಿವರುಗಳು ಹಾಜರಿದ್ದರು. ಈ ಕೌನ್ಸಿಲ್ ಸಿನಿಮಾ ಹಾಲ್‌ಗಳಲ್ಲಿ ಮಾರಾಟ ಮಾಡಲಾಗುವ ಆಹಾರಗಳ ಮೇಲಿನ ಜಿಎಸ್‌ಟಿಯನ್ನು ಶೇಕಡ 18ರಿಂದ ಶೇಕಡ 5ಕ್ಕೆ ಇಳಿಕೆ ಮಾಡುವ ನಿರ್ಧಾರವನ್ನು ಕೈಗೊಂಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ, "ಸಿನಿಮಾ ಹಾಲ್‌ಗಳಲ್ಲಿ ಸೇವನೆ ಮಾಡಲಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ಜಿಎಸ್‌ಟಿ ಇನ್ನು ಮುಂದೆ ಶೇಕಡ 18 ಅಲ್ಲ, ಶೇಕಡ 5 ಆಗಿರಲಿದೆ ಎಂದು ಇಂದು ಜಿಎಸ್‌ಟಿ ಕೌನ್ಸಿಲ್ ಸ್ಪಷ್ಟಪಡಿಸಿದೆ," ಎಂದು ಮಾಹಿತಿ ನೀಡಿದ್ದಾರೆ.
ಅಗತ್ಯ ಔಷಧಿಗಳ ಮೇಲಿನ ಜಿಎಸ್‌ಟಿ?
ಇನ್ನು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಉತ್ತರಿಸುತ್ತಾ ಪಶ್ಚಿಮ ಬಂಗಾಳ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ, "ಕ್ಯಾನ್ಸರ್ ಔಷಧಿ ಡಿನುಟುಕ್ಸಿಮಾಬ್ ಆಮದು ಮೇಲಿನ ಜಿಎಸ್‌ಟಿಯನ್ನು ವಿನಾಯಿತಿ ಮಾಡಲು ಕೌನ್ಸಿಲ್ ಒಪ್ಪಿಕೊಂಡಿದೆ. ಇನ್ನು ವಿಶೇಷ ವೈದ್ಯಕೀಯ ಉದ್ದೇಶಗಳಿಗಾಗಿ ಕೆಲವು ಆಹಾರವನ್ನು ಆಮದು ಮಾಡಲಾಗುತ್ತದೆ, ಕೆಲವು ವಿರಳ ಕಾಯಿಲೆಗಳಿಗೆ ಇದನ್ನು ಬಳಸಲಾಗುತ್ತದೆ. ಅಂತಹ ಆಮದುಗಳ ಮೇಲಿನ ಜಿಎಸ್‌ಟಿಯನ್ನು ಕೂಡಾ ವಿನಾಯಿತಿ ಮಾಡಲಾಗಿದೆ," ಎಂದು ತಿಳಿಸಿದ್ದಾರೆ.
ಆನ್‌ಲೈನ್ ಗೇಮಿಂಗ್ ಮೇಲೆ ಜಿಎಸ್‌ಟಿ
ಇನ್ನು ಆನ್‌ಲೈನ್ ಗೇಮಿಂಗ್, ಕ್ಯಾಸಿನೋ, ಕುದುರೆ ರೇಸಿಂಗ್ ಮೇಲೆ ಜಿಎಸ್‌ಟಿಯನ್ನು ವಿಧಿಸಲಾಗುತ್ತದೆ ಎಂಬ ಮಾಹಿತಿಯನ್ನು ಕೂಡಾ ಪಶ್ಚಿಮ ಬಂಗಾಳ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ನೀಡಿದ್ದಾರೆ. ಇನ್ನು ಮುಂದೆ ಆನ್‌ಲೈನ್ ಗೇಮಿಂಗ್, ಕ್ಯಾಸಿನೋ, ಕುದುರೆ ರೇಸಿಂಗ್‌ಗೆ ಶೇಕಡ 28ರಷ್ಟು ಜಿಎಸ್‌ಟಿಯನ್ನು ವಿಧಿಸಲಾಗುತ್ತದೆ. ಒಟ್ಟು ಮೊತ್ತದ ಮೇಲೆ ಈ ಜಿಎಸ್‌ಟಿ ವಿಧಿಸಲಾಗುತ್ತದೆ.
"ಈ ಆನ್‌ಲೈನ್ ಗೇಮ್‌ಗಳಿಗೆ ಕೌಶಲ್ಯದ ಅಗತ್ಯವಿದೆಯೇ ಅಥವಾ ಚಾನ್ಸ್ ಆಧಾರದಲ್ಲಿ ಇದೆಯೇ ಎಂಬುವುದರ ಆಧಾರವನ್ನು ನಾವು ಪರಿಗಣನೆಗೆ ತೆಗೆದುಕೊಂಡಿಲ್ಲ. ಎಲ್ಲ ಆನ್‌ಲೈನ್ ಗೇಮಿಂಗ್ ಕಂಪನಿಗಳ ಮೇಲೆ ತೆರಿಗೆ ವಿಧಿಸಲಾಗುವುದು," ಎಂದು ಮಹಾರಾಷ್ಟ್ರ ರಾಜ್ಯದ ಸಚಿವ ಸುಧೀರ್ ಮುಂಗಂತಿವಾರ್ ಹೇಳಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್‌ನ ಸಿಇಒ ರೋಲಾಂಡ್ ಲ್ಯಾಂಡರ್ಸ್, "ಅಂದರೆ ನಿವ್ವಳ ಆದಾಯ ಅಥವಾ ಒಟ್ಟು ಗಳಿಕೆಯ ಹಣದ ಮೇಲೆ ಜಿಎಸ್‌ಟಿಯನ್ನು ವಿಧಿಸಲಾಗುತ್ತದೆ. ಜಿಎಸ್‌ಟಿ ಕೌನ್ಸಿಲ್ ಕೈಗೊಂಡಿರುವ ಈ ನಿರ್ಧಾರವು ಅಸಂವಿಧಾನಿಕ, ಅತಿರೇಕದ್ದು ಎಂದು ನಾವು ನಂಬುತ್ತೇವೆ," ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವುದು ದುಬಾರಿ ಯಾವುದು ಅಗ್ಗವಾಗುವ ನಿರೀಕ್ಷೆಯಿತ್ತು?
ನಿರೀಕ್ಷೆಯಂತೆಯೇ ಕೆಲವು ಅಗತ್ಯ ಔಷಧಿಗಳ ಆಮದು ಮೇಲಿನ ಜಿಎಸ್‌ಟಿ ಹಾಗೂ ಸಿನಿಮಾ ಹಾಲ್‌ಗಳಲ್ಲಿ ಮಾರಾಟ ಮಾಡಲಾಗುವ ಆಹಾರ ಹಾಗೂ ಪಾನೀಯಗಳ ಮೇಲಿನ ಜಿಎಸ್‌ಟಿಯನ್ನು ಕಡಿತ ಮಾಡಲಾಗಿದೆ. ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಸಿನಿಮಾ ಹಾಲ್‌ಗಳಲ್ಲಿ ಮಾರಾಟ ಮಾಡಲಾಗುವ ಆಹಾರ ಹಾಗೂ ಪಾನೀಯಗಳ ಮೇಲಿನ ಜಿಎಸ್‌ಟಿಯನ್ನು ಶೇಕಡ 18ರಿಂದ ಶೇಕಡ 5ಕ್ಕೆ ಇಳಿಕೆ ಮಾಡುವಂತೆ ಮನವಿ ಮಾಡಿತ್ತು. ಫಿಟ್‌ಮೆಂಟ್ ಕಮೀಟಿಯು ಔಷಧಿಗಳ ಜಿಎಸ್‌ಟಿಯನ್ನು ಕಡಿತ ಮಾಡುವಂತೆ ಸಲಹೆ ನೀಡಿತ್ತು.
ಆನ್‌ಲೈನ್ ಗೇಮಿಂಗ್, ಕುದುರೆ ರೇಸಿಂಗ್, ಕ್ಯಾಸಿನೋ ಮೇಲಿನ ತೆರಿಗೆಯನ್ನು ಏರಿಕೆ ಮಾಡಲು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ನೇತೃತ್ವದ ಸಮಿತಿಯು ಸಲಹೆ ನೀಡಿತ್ತು. ಶೇಕಡ 28ರಷ್ಟು ಜಿಎಸ್‌ಟಿ ವಿಧಿಸಲು ತಿಳಿಸಿತ್ತು. ಈ ನಡುವೆ ಗೋವಾ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸುವಂತೆ ಸಲಹೆ ನೀಡಿತ್ತು.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಫೊರೆಕ್ಸ್ ಮಿತಿ: ಇಂದಿನ ಮಾರುಕಟ್ಟೆ ಕುಸಿತಕ್ಕೆ ಕಾರಣವೇ?



Click it and Unblock the Notifications