ಜಿಎಸ್ ಟಿ ಸಮಿತಿಯ 38ನೇ ಸಭೆಯು ಬುಧವಾರ ನಡೆಯುತ್ತಿದ್ದು, ಲಾಟರಿ ಟಿಕೆಟ್ ಗೆ ಏಕರೂಪದ ದರ ವಿಧಿಸುವ ವಿಚಾರವಾಗಿ ಇದೇ ಮೊದಲ ಬಾರಿಗೆ ಮತದಾನ ನಡೆಯಿತು. ಎಲ್ಲ ರಾಜ್ಯದಿಂದಲೂ ಒಂದೇ ಅಭಿಪ್ರಾಯ ಬಂದಿತು. ಈ ಬಗ್ಗೆ ರಾಜಸ್ಥಾನದ ಸಚಿವರಾದ ಶಾಂತಿ ಧರೀವಾಲ್ ಮಾಹಿತಿ ನೀಡಿದ್ದಾಗಿ ಐಎಎನ್ ಎಸ್ ವರದಿ ಮಾಡಿದೆ. ಏಕರೂಪದ ದರವು ಮಾರ್ಚ್ 1, 2020ರಿಂದ ಜಾರಿಗೆ ಬರಲಿದೆ ಎಂದು ವರದಿಗಳು ತಿಳಿಸಿವೆ.
38ನೇ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಿದ್ದು, ನವದೆಹಲಿಯಲ್ಲಿ ಬುಧವಾರ ಸಂಜೆಯು ಸಭೆ ನಡೆಯುತ್ತಿದೆ. ಸದ್ಯಕ್ಕೆ ರಾಜ್ಯ ಸರ್ಕಾರಗಳಿಂದ ನಡೆಯುವ ಲಾಟರಿ ಟಿಕೆಟ್ ಗಳಿಗೆ 12 ಪರ್ಸೆಂಟ್ ಜಿಎಸ್ ಟಿ ವಿಧಿಸಲಾಗುತ್ತಿದೆ. ಇದೇ ಲಾಟರಿ ಟಿಕೆಟ್ ಗಳನ್ನು ಅಧಿಕೃತ ಮಾರಾಟಗಾರರ ಮೂಲಕ ಇತರ ರಾಜ್ಯಗಳಲ್ಲಿ ಮಾರಲು 28% ದರ ವಿಧಿಸಲಾಗುತ್ತಿದೆ.

ಜಿಎಸ್ ಟಿ ಸಂಗ್ರಹದಲ್ಲಿ ಇಳಿಕೆ ಆಗುತ್ತಿರುವುದರಿಂದ ದರದಲ್ಲಿ ಏರಿಕೆ ಮಾಡಬಹುದು ಎಂಬ ವದಂತಿಯನ್ನು ಸಚಿವೆ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಜಿಎಸ್ ಟಿ ದರ ಏರಿಕೆ ಮಾಡುವ ನಿರ್ಧಾರದ ಪರವಾಗಿ ಯಾವ ರಾಜ್ಯ ಸರ್ಕಾರವೂ ಇಲ್ಲ ಎಂದು ಮೂಲಗಳು ತಿಳಿಸಿವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications