ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಪರಿಷ್ಕೃತ ಮಾರ್ಗಸೂಚಿ ದರ ಸರಾಸರಿ ಶೇ.25 ರಿಂದ ಶೇ.30 ರಷ್ಟು ಹೆಚ್ಚಳ ಕಾಣಲಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 1 ರಿಂದ ಹೊಸ ಆಸ್ತಿ ನೋಂದಣಿಗೆ ಹೊಸ ಮಾರ್ಗಸೂಚಿ ದರ ಜಾರಿ ಆಗುತ್ತದೆ. ಇದು ಜಾರಿ ಆದ್ದಲ್ಲಿ ರಿಯಲ್ ಎಸ್ಟೇಟ್ ವಲಯದಲ್ಲೂ ಬದಲಾವಣೆ ಸಾಧ್ಯತೆಯಿದೆ.
ನಾವು ಪ್ರಸ್ತುತ ಬೆಂಗಳೂರಿನಲ್ಲಿ ಭೂಮಿಯ ಬೆಲೆಯನ್ನು ಪರಿಶೀಲನೆ ಮಾಡಿದಾಗ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭೂಮಿ ಬೆಲೆಯು ದುಬಾರಿಯಾಗಿಯೇ ಉಳಿದಿದೆ. ಬೇರೆ ಬೇರೆ ಪ್ರದೇಶಗಳಲ್ಲಿ ದರವು ಬೇರೆ ಬೇರೆ ರೀತಿಯಾಗಿದೆ. ಈಗಾಗಲೆ ಬೆಂಗಳೂರಿನಲ್ಲಿ ಆಸ್ತಿ ಖರೀದಿ ಅತೀ ಕಷ್ಟವಾಗಿದೆ. ಈ ನಡುವೆ ಈಗ ಆಸ್ತಿ ಮೌಲ್ಯ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಇನ್ನುಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಕಂದಾಯ ಇಲಾಖೆಯಡಿ ಬರುವ ನೋಂದಣಿ ಹಾಗೂ ಮುದ್ರಾಂಕ ಇಲಾಖೆ ಹೊಸ ಮಾರ್ಗಸೂಚಿ ದರವನ್ನು ಜಾರಿ ಮಾಡಲಿದೆ. ಇದರಿಂದಾಗಿ ಸಾಮಾನ್ಯವಾಗಿಯೇ ಆಸ್ತಿ ಬೆಲೆಯು ಕೂಡಾ ಹೆಚ್ಚಳವಾಗಿದೆ. ಇದು ರಿಯಲ್ ಎಸ್ಟೇಟ್ ವಲಯದ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ.
ಬೆಂಗಳೂರಿನಲ್ಲಿ ಕನಿಷ್ಠ ಶೇಕಡ 10 ರಷ್ಟು ದರ ಏರಿಕೆ ಮಾಡಲಾಗುತ್ತಿದೆ. ಆದರೆ ಉಳಿದ ಭಾಗಗಳಲ್ಲಿ ಈ ದರ ಬೇರೆ ಬೇರೆ ರೀತಿ ಹೆಚ್ಚಳವಾಗಲಿದೆ. ಮಾರ್ಗಸೂಚಿ ದರಕ್ಕಿಂತ ಮಾರುಕಟ್ಟೆ ದರ 200 ಪಟ್ಟು ಹೆಚ್ಚಿರುವ ಪ್ರದೇಶಗಳಲ್ಲಿ ಪರಿಷ್ಕೃತ ದರವು ಶೇಕಡ 20 ರಿಂದ ಶೇಕಡ 25 ರಷ್ಟು ಹೆಚ್ಚಾಗಲಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾರುಕಟ್ಟೆ ದರ ಮಾರ್ಗಸೂಚಿ ದರಕ್ಕಿಂತ 500 ಪಟ್ಟು ಅಧಿಕವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ಇದ್ದರೆ, ಮಾರುಕಟ್ಟೆ ದರ 10 ಕೋಟಿಗೂ ಹೆಚ್ಚಾಗಿದೆ. ಇಂತಹ ಪ್ರದೇಶಗಳಲ್ಲಿ ನೂತನ ಮಾರ್ಗಸೂಚಿಯಿಂದಾಗಿ ದರವು ಶೇಕಡ 50 ರಷ್ಟು ಏರಿಕೆಯಾಗಲಿದೆ.
ಇನ್ನು ಬೆಂಗಳೂರು ಹೊರತುಪಡಿಸಿ ಮಂಗಳೂರು, ಕಲಬುರಗಿ, ಮೈಸೂರು, ಬಳ್ಳಾರಿ, ತುಮಕೂರು, ಶಿವಮೊಗ್ಗ, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ಪ್ರಮುಖ ನಗರಗಳಲ್ಲೂ ಹೊಸ ಮಾರ್ಗಸೂಚಿ ದರ ಜಾರಿಯಾಗಲಿದೆ. ಇಲ್ಲಿಯೂ ಈ ವರ್ಷದಲ್ಲೇ ಮಾರ್ಗಸೂಚಿ ಜಾರಿಗೆ ಬರಲಿದೆ.


Click it and Unblock the Notifications