ಹೆಚ್‌ಡಿಎಫ್‌ಸಿ ಬ್ಯಾಂಕಿನ ಗ್ರಾಹಕರು ಕಳೆದೆರಡು ದಿನಗಳಿಂದ ಬ್ಯಾಂಕ್ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಇದಕ್ಕೆ ಕಾರಣ ನೆಟ್‌ಬ್ಯಾಂಕಿಂಗ್‌ನಲ್ಲಿ ಆಗಿರುವ ತಾಂತ್ರಿಕ ತೊಂದರೆ. 2 ದಿನಗಳಿಂದ ನೆಟ್ ಬ್ಯಾಂಕಿಂಗ್‌ನಲ್ಲಿ ವ್ಯವಹಾರ ನಡೆಸುವವರು ಎಷ್ಟೇ ಪ್ರಯತ್ನಿಸಿದರೂ ಬ್ಯಾಂಕಿಂಗ್ ವ್ಯವಹಾರ ನಡೆಸಲು ಆಗುತ್ತಿಲ್ಲ.
ಸತತ 2 ದಿನಗಳಿಂದ ಹೆಚ್‌ಡಿಎಫ್‌ಸಿ ಬ್ಯಾಂಕ್ ಗ್ರಾಹಕರು ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್‌ನಲ್ಲಿ ತಾಂತ್ರಿಕ ದೋಷವನ್ನು ಎದುರಿಸುತ್ತಿದ್ದಾರೆ. ಸತತ 2 ದಿನಗಳು ಪದೇ ಪದೇ ಲಾಗಿನ್ ಸಮಸ್ಯೆಗಳನ್ನು ಎದುರಿಸಿದಾಗ ಬ್ಯಾಂಕ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬ್ಯಾಂಕ್‌ನ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡುತ್ತಿದ್ದಾರೆ.

''ತಾಂತ್ರಿಕ ದೋಷದಿಂದಾಗಿ ನಮ್ಮ ಕೆಲವು ಗ್ರಾಹಕರು ನೆಟ್‌ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಆ್ಯಪ್‌ನಲ್ಲಿ ಲಾಗಿನ್ ಸಮಸ್ಯೆ ಎದುರಿಸುತ್ತಿದ್ದಾರೆ. ನಮ್ಮ ತಜ್ಞರು ಈ ದೋಷವನ್ನು ಪರಿಹರಿಸಲು ಹೆಚ್ಚಿನ ಆದ್ಯತೆಯೊಂದಿಗೆ ಕೆಲಸ ಮಾಡುತ್ತಿದ್ದಾರೆ. ಮತ್ತು ಶೀಘ್ರದಲ್ಲೇ ಸೇವೆಗಳನ್ನು ಪುನಃ ಸ್ಥಾಪಿಸಲು ನಮಗೆ ಸಾಧ್ಯವಾಗುತ್ತದೆ ಎಂದು ನಮಗೆ ವಿಶ್ವಾಸವಿದೆ'' ಎಂದು ಹೆಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.

ಹೆಚ್‌ಡಿಎಫ್‌ಸಿ ಬ್ಯಾಂಕ್ ಈ ಮೇಲಿನ ರೀತಿಯಲ್ಲಿ ಟ್ವೀಟ್ ಮಾಡುತ್ತಿದ್ದಂತೆ ಗ್ರಾಹಕರು ಮತ್ತಷ್ಟು ಸಿಟ್ಟಾಗಿ ಬ್ಯಾಂಕ್ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರಕ್ಕೆ ಪ್ರೋತ್ಸಾಹಿಸುತ್ತಿರುವ ಈ ಕಾಲದಲ್ಲಿ ನಿಮಗೆ ತಾಂತ್ರಿಕ ದೋಷವನ್ನು ಪರಿಹರಿಸಲು ಇನ್ನೂ ಎಷ್ಟು ಗಂಟೆ ಸಮಯ ಬೇಕಾಗಿದೆ. ಈ ರೀತಿಯ ತೊಂದರೆಗಳಿಂದಾಗಿಯೇ ಆನ್‌ಲೈನ್ ಬ್ಯಾಂಕಿಂಗ್‌ನಲ್ಲಿ ಸಂಪೂರ್ಣ ವಿಶ್ವಾಸವಿಡಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಹಕರು ಅಸಮಾಧಾನ ಹೊರಹಾಕಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications