ಬೆಂಗಳೂರು, ಮೇ 18: ಮೇ 19 ರಿಂದ 21 ರ ವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಬೆಂಗಳೂರು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ಸ್ಥಳಗಳಲ್ಲಿ ಗರಿಷ್ಠ ತಾಪಮಾನ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಬಹುದು ಎಂದು ಆರೆಂಜ್ ಅಲರ್ಟ್ ನೀಡಿದೆ.
"ಕರ್ನಾಟಕದಲ್ಲಿ ಡಿಸೆಂಬರ್ 2023 ರಿಂದ ಈ ಏಪ್ರಿಲ್ ವರೆಗೆ ಯಾವುದೇ ಮಳೆಯಾಗಿಲ್ಲ. ಆದರೆ, ಮುಂದಿನ ಐದು ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಬೆಂಗಳೂರಿನ ಐಎಂಡಿ ವಿಜ್ಞಾನಿ ಮತ್ತು ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಹಳದಿ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮೇ 21 ರವರೆಗೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಮೇಲ್ಮೈ ಗಾಳಿಯೊಂದಿಗೆ 7 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಮತ್ತು ಕರಾವಳಿ ಕರ್ನಾಟಕದ 75% ಕ್ಕಿಂತ ಹೆಚ್ಚು ಮತ್ತು ಉತ್ತರ ಒಳನಾಡಿನ 25-50% ರಷ್ಟು ಮಳೆ ಬೀಳಲಿದೆ ಎಂದು ಎಂಎಂಡಿ ಹೇಳಿದೆ. ಮುಂಬರುವ ದಿನಗಳಲ್ಲಿ ಗರಿಷ್ಠ ನಿರೀಕ್ಷಿತ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ. ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವರುಣ ಕೃಪೆ ತೋರಬಹುದು ಎನ್ನಲಾಗಿದೆ.
ಆರ್‌ಸಿಬಿಗೆ ಮಳೆಯೇ ದೊಡ್ಡ ಸವಾಲು:
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಐಪಿಎಲ್ ಪ್ಲೇಆಫ್‌ಗೆ ನಾಲ್ಕನೇ ಮತ್ತು ಅಂತಿಮ ತಂಡವನ್ನು ನಿರ್ಧರಿಸುವ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ.
ಶನಿವಾರ ಬೆಂಗಳೂರಿಗೆ ತುಂತುರು ಮಳೆಯಾಗುವ ಮುನ್ಸೂಚನೆ ಇರುವುದರಿಂದ RCB ಯ ಹೋರಾಟವು ಚೆನ್ನೈ ಸೂಪರ್ ಕಿಂಗ್ಸ್ ಮಾತ್ರವಲ್ಲ, ಮಳೆ ದೇವರುಗಳೊಂದಿಗೆ ಕೂಡ ಇರುತ್ತದೆ. ಆರ್‌ಸಿಬಿ ಕನಿಷ್ಠ 18 ರನ್‌ಗಳಿಂದ ಗೆಲ್ಲಬೇಕು ಅಥವಾ ಇನ್ನೂ 11 ಎಸೆತಗಳು ಬಾಕಿ ಇರುವಂತೆಯೇ ಗುರಿ ಬೆನ್ನಟ್ಟಬೇಕು. ವಾಶ್‌ಔಟ್ ಎಂದರೆ ಸಿಎಸ್‌ಕೆ ಪ್ಲೇಆಫ್‌ಗೆ ಸಾಗಲಿದೆ ಎಂದರ್ಥ.


Click it and Unblock the Notifications