ಕರ್ನಾಟಕದಲ್ಲಿ ಕಳೆದೊಂದು ತಿಂಗಳಿಂದ ಬೇಸಿಗೆಯ ಅನುಭವ ನೀಡುತ್ತಿದ್ದ ಹವಾಮಾನ, ಇದೀಗ ಹಠಾತ್ ಮಳೆ ಬಂದಿದೆ. ಹವಾಮಾನ ಬೇಸಿಗೆಯ ಅನುಭವವನ್ನೇ ನೀಡುತ್ತಿದ್ದು, ಆದರೆ ಕೆಲವು ಭಾಗಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಉತ್ತರ ಒಳನಾಡು ಜಿಲ್ಲೆಗಳಾದ, ಬೆಳಗಾವಿ, ಧಾರವಾಡ, ವಿಜಯಪುರ, ಗದಗ, ಬಾಗಲಕೋಟೆ, ಹಾವೇರಿಯಲ್ಲಿ ಹಗುರದಿಂದ ಮಧ್ಯಮ ಅಥವಾ ಗುಡುಗು ಸಹಿತ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಿದ್ರೆ ಎಲ್ಲೆಲ್ಲಿ ಮಳೆ, ಬಿಸಿಲು ಹೆಚ್ಚಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ರಾಜ್ಯದಲ್ಲಿ ಇಂದು ಬಿಸಿಲ ಬೇಗೆಯೇ ಹೆಚ್ಚಾಗಲಿದ್ದು, ಕರಾವಳಿ ಕರ್ನಾಟಕ, ಮಲೆನಾಡು ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಮಧ್ಯಮ, ತುಂತುರು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕರಾವಳಿಯಲ್ಲಿ ಮಳೆಯಬ್ಬರ
ಕರಾವಳಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಮತ್ತು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ವಿಶೇಷವಾಘಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈ ಹವಾಮಾನ ಕಂಡು ಬರಲಿದೆ. ಮಳೆಯ ಜೊತೆಗೆ ಗರಿಷ್ಠ ತಾಪಮಾನ 32 ರಿಂದ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ತಂಪಾದ ಗಾಳಿ ಬೀಸುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಎಚ್ಚರಿಕೆ ಪ್ರಕಾರ ಕೆಲವು ಕಡೆಗಳಲ್ಲಿ ಗಾಳಿಯ ವೇಗ 30-40 ಕಿ.ಮೀ/ ಗಂಟೆಗೆ ಬೀಸಲಿದೆ ಎನ್ನಲಾಗಿದೆ.
ಇನ್ನು ಮಲೆನಾಡು ಭಾಗದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ. ಇಲ್ಲಿಯೂ ಗರಿಷ್ಠ ತಾಪಮಾನ 30-33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18-22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ವರದಿಯಾಗಿದೆ. ಅದೇ ರೀತಿ ದಕ್ಷಿಣ ಒಳನಾಡು ಜಿಲ್ಲೆಗಳಾದ ರಾಮನಗರ, ಮಂಡ್ಯ, ಬೆಂಗಳೂರು ಮುಂತಾದ ಪ್ರದೇಶಗಳಲ್ಲಿ ಮಳೆಯ ಸೂಚನೆಯಿದ್ದರೂ, ಬಹುತೇಕ ಶುಷ್ಕ ವಾತಾವರಣ ಇರಲಿದೆ.
ಮುಂದಿನ 4 ದಿನ ಮಳೆ ಸೂಚನೆ:
ಭಾರತೀಯ ಹವಾಮಾನ ಇಲಾಖೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ. ಆ ಪ್ರಕಾರ ರಾಜ್ಯದಲ್ಲಿ ಮಾರ್ಚ್ 21 ರವರೆಗೆ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದ್ದು, ಆ ಪರಿಣಾಮ ರಾಜ್ಯದಲ್ಲಿ ದಿಢೀರ್ ಮಳೆಯಾಗಿದೆ. ಆದ್ದರಿಂದ ಕರ್ನಾಟಕದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಅತ್ತ ಬೇಸಿಗೆ ಕಾಲದಲ್ಲೂ ಮಳೆ ಬರುವುದನ್ನು ನೋಡಿ ಜನರೇ ಆಶ್ಚರ್ಯಗೊಂಡಿದ್ದಾರೆ.


Click it and Unblock the Notifications