ಬೆಂಗಳೂರು, ಮೇ 8: ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರಿಗೆ ಬುಧವಾರ ಹಳದಿ ಅಲರ್ಟ್ ಘೋಷಿಸಿದ್ದು, ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಳದಿ ಅಲರ್ಟ್ ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಸೂಚಿಸುತ್ತದೆ. ಮಳೆಯ ಜೊತೆಗೆ ಬಿರುಗಾಳಿ ಸಹಿತ ಗಾಳಿ ಬೀಸಬಹುದು ಎಂದು ಭವಿಷ್ಯ ನುಡಿದಿದೆ.
ಮಳೆ ಕಾಣದ ಏಪ್ರಿಲ್ ನಂತರ, ಐಎಂಡಿ ಬೆಂಗಳೂರು ವಿಭಾಗವು ಮೇ ತಿಂಗಳಲ್ಲಿ ನಗರವು ಸಾಮಾನ್ಯ ಮಳೆಯನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೇ ತಿಂಗಳಲ್ಲಿ 128.7 ಮಿಮೀ ಮಳೆಯಾಗುತ್ತದೆ.

ಮುಂದಿನ ಎರಡು ದಿನಗಳಲ್ಲಿ ಗುಡುಗು ಸಹಿತ ಮಿಂಚು, ಬಿರುಗಾಳಿ ಸಹಿತ ಸಂಜೆ ಅಥವಾ ರಾತ್ರಿ ವೇಳೆಗೆ ಮಾತ್ರ ಮಳೆಯಾಗಲಿದೆ ಎಂದು ಮುನ್ಸೂಚನೆ ತಿಳಿಸಿದೆ. ಮುಂದಿನ ಎರಡು ದಿನಗಳಲ್ಲಿ ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ.
ಮೇ ತಿಂಗಳ ಆರಂಭದಿಂದ ನಗರದಲ್ಲಿ ಮಳೆಯಾಗುತ್ತಿದೆ. ಪರಿಣಾಮವಾಗಿ, ತಾಪಮಾನವು ಗಮನಾರ್ಹವಾಗಿ ಕಡಿಮೆಯಾಗಿದೆ. ತಿಂಗಳ ಆರಂಭದಲ್ಲಿ 38 ಡಿಗ್ರಿ ಸೆಲ್ಸಿಯಸ್‌ನಿಂದ ಮಂಗಳವಾರ 33.8 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ, ಇದು ತೀವ್ರ ಇಳಿಕೆಯಾಗಿದೆ. ಮಂಗಳವಾರ ನಗರವು ಕನಿಷ್ಠ ಒಂದು ತಿಂಗಳಲ್ಲಿ ಕಂಡ ಅತ್ಯಂತ ತಂಪಾದ ದಿನವಾಗಿದೆ.
ಹಲವು ಜಿಲ್ಲೆಗಳಲ್ಲಿ ಮಳೆ:
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 8ರಂದು ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಲ್ಲೆಗಳಲ್ಲಿ ಗಂಟೆಗೆ ಭಾರೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರೀ ಮಳೆ ಬೀಳಲಿದೆ.
ಇದರೊಂದಿಗೆ ಮಂಗಳೂರು, ಉಡುಪಿ, ಬೆಂಗಳೂರು ಗ್ರಾಮಾಂತರ,ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಇದೇ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ತುಮಕೂರು, ಬೀದರ್ ಕಲಬುರಗಿ, ರಾಯಚೂರು, ಯಾದಗಿರಿ, ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಂಭವವಿದೆ. ಇದೇ ಹವಾಮಾನ ಮುಂದಿನ ಎರಡು ದಿನ ಮುಂದುವರಿಯಲಿದೆ. ತಾಪಮಾನದಲ್ಲಿ ದೊಡ್ಡಮಟ್ಟದ ಬದಲಾವಣೆಗಳು ಇರುವುದಿಲ್ಲ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.


Click it and Unblock the Notifications