ಚಳಿ ಚಳಿ ಎಂದು ಹೇಳುವ ಸಮಯದಲ್ಲಿ ಮಳೆ ಮಳೆ ಅನ್ನುವಂತಾಗಿದೆ. ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ (Heavy Rain). ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ, ದಿತ್ವಾ ಚಂಡಮಾರುತದಿಂದಾಗಿ ಕರ್ನಾಟಕ, ಕೇರಳ, ತಮಿಳುನಾಡಿಗೂ (Karnataka, Kerala, Tamilnadu) ಮಳೆ ಪ್ರಭಾವ ಬೀರಿದೆ. ಇದೀಗ ಇಂದೂ ಕೂಡ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಿತ್ವಾ ಚಂಡಮಾರುತ ದುರ್ಬಲಗೊಂಡಿದ್ದು, ತಮಿಳುನಾಡು-ಪುದುಚೇರಿ ಕರಾವಳಿಯತ್ತ ಸಾಗುತ್ತಿದೆ. ಈ ಪರಿಣಾಮ ಬೆಂಗಳೂರು ಮತ್ತು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಮೂರು ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬಂಗಾಳ ಕೊಲ್ಲಿಯ ನೈಋತ್ಯ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಕರಾವಳಿಗಳಲ್ಲಿ ಉಂಟಾಗಿರುವ ದಿತ್ವಾ ಚಂಡಮಾರುತದಿಂದ ವಾಯುಭಾರ ಕುಸಿತ ಉಂಟಾಗಿದೆ. ದಕ್ಷಿಣ-ನೈಋತ್ಯ ದಿಕ್ಕಿಗೆ ಚಲಿಸಲಿದೆ. ಈ ಪರಿಣಾಮ ಬಳ್ಳಾರಿ, ವಿಜಯ ನಗರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಸೂಚನೆ ನೀಡಲಾಗಿದೆ.
ಡಿಸೆಂಬರ್ 6 ರಿಂದ 8 ರವರೆಗೆ ಮಳೆ!
ಡಿಸೆಂಬರ್ 6 ರಿಂದ 8 ರವರೆಗೆ ರಾಜ್ಯಾದ್ಯಂತ ಕರಾವಳಿ, ಉತ್ತರ ಒಳನಾಡು ಮತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು ಜಿಲ್ಲೆಗೂ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ತಮಿಳುನಾಡಿನಲ್ಲೂ ಭಾರೀ ಮಳೆ!
ಇಂದು ತಮಿಳುನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಈ ಹಿನ್ನೆಲೆ ಇಂದೂ ಕೂಡಾ ತಮಿಳುನಾಡಿನಲ್ಲಿ ಮಳೆ ಕಡಿಮೆಯಾಗುವಂತೆ ಕಾಣುತ್ತಿಲ್ಲ. ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಅದೇ ರೀತಿ ವಿಲ್ಲುಪುರಂ, ಕಡಲೂರು, ರಾಣಿಪೇಟ್, ತಿರುವಣ್ಣಾಮಲೈ, ಕಲ್ಲಕುರಿಚಿ, ಮೈಲಾಡುತುರೈ, ನಾಗಪಟ್ಟಿಣಂ, ತಂಜಾವೂರು, ತಿರುವರೂರು ಮತ್ತು ಪುದುಕೊಟ್ಟೈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ, ತಮಿಳುನಾಡಿನಲ್ಲೂ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುತ್ತಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು. ಎಲ್ಲಾದರು ಟ್ರಾವೆಲ್ ಪ್ಲಾನ್ ಮಾಡಿರುವವರು ಕೂಡಾ ಮುನ್ನೆಚ್ಚರಿಕೆಗಳನ್ನು ಗಮನಿಸಿಕೊಂಡು ಪ್ಲಾನ್ ಮಾಡಿದರೆ ಉತ್ತಮ.


Click it and Unblock the Notifications