ರಾಜ್ಯದಲ್ಲಿ ಕಳೆದ ವಾರವಿಡೀ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ಮತ್ತೆ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಬರುವ ಕೆಲವು ದಿನಗಳವರೆಗೆ ಮಳೆ ಮುಂದುವರೆಯಲಿದೆ (Rain Alert) ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ, ಗಾಳಿ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಭಾರೀ ಮಳೆ!
ಬೆಳಗಾವಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಶಿವಮೊಗ್ಗ, ಬೀದರ್, ಮಂಡ್ಯ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಸೂಚನೆ ಹೊರಡಿಸಿದೆ. ಆದ್ದರಿಂದ ಈ ಜಿಲ್ಲೆಗಳಲ್ಲಿ ತಾಪಮಾನವೂ ಇಳಿಕೆಯಾಗುವ ನಿರೀಕ್ಷೆಯಿದೆ.
ಅಲ್ಲದೇ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಕನಿಷ್ಠ ತಾಪಮಾನ 17 ರಿಂದ 19 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಸೂಚನೆ ಹೊರಡಿಸಿದೆ.
ಬೆಂಗಳೂರಿನಲ್ಲೂ ಭಾರೀ ಮಳೆ!
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಗುರ ಮಳೆಯಾಗಬಹುದು ಎಂದು ಹೇಳಲಾಗಿದೆ. ಅಲ್ಲದೇ ಮುಂದಿನ ಕೆಲವು ದಿನಗಳವರೆಗೆ ಒಣಹವೆ ಇರಲಿದೆ ಎಂದು ಸೂಚನೆ ಹೊರಡಿಸಿದೆ.
ಕೇರಳ, ತಮಿಳುನಾಡಿನಲ್ಲೂ ಮಳೆ:
ಮುಂದಿನ ಒಂದು ವಾರದವರೆಗೆ ತಮಿಳುನಾಡಿನಲ್ಲಿ ಸಣ್ಣದಿಂದ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಕರಾವಳಿ ಹಾಗೂ ಆಂತರಿಕ ತಮಿಳುನಾಡಿನಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಚೆನ್ನೈ ಹವಾಮಾನ ಕೇಂದ್ರ ಮಾಹಿತಿ ನೀಡಿದೆ.
ಚೆನ್ನೈ ಹವಾಮಾನ ಕೇಂದ್ರವು ತನ್ನ ಮುಂದಿನ ವಾರದ ಹವಾಮಾನ ಮುನ್ಸೂಚನೆಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸೂಚನೆ ನೀಡಿದೆ. ಕೇರಳ ಕರಾವಳಿಯ ಮೇಲಿರುವ ವಾಯುಭಾರ ಕುಸಿತದ ಪರಿಣಾಮದಿಂದಾಗಿ, ಇಂದು ಕರಾವಳಿ ಮತ್ತು ಆಂತರಿಕ ತಮಿಳುನಾಡಿನಲ್ಲಿ ಗುಡುಗು ಸಹಿತ ಲಘು-ಸಾಧಾರಣ ಮಳೆಯಾಗಲಿದೆ. ನಾಳೆ, ದಕ್ಷಿಣ-ಉತ್ತರ ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್‌ನ ಕೆಲ ಭಾಗಗಳಲ್ಲಿ ಇದೇ ರೀತಿಯ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದ್ದು, ಆಗಸ್ಟ್ 8 ರಿಂದ 12 ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು-ನಾಳೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಲಘು ಮತ್ತು ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಬಹುದು ಎಂದು ಹೇಳಲಾಗಿದೆ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 24°C ಆಸುಪಾಸು ದಾಖಲಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಯಾರಾದರೂ, ಎಲ್ಲಿಗಾದರೂ ಹೋಗುವ ಪ್ಲಾನ್ ಮಾಡಿದ್ದರೆ ಮೊದಲೇ ಹವಾಮಾನ ಬದಲಾವಣೆಯನ್ನು ತಿಳಿದುಕೊಳ್ಳುವುದು ಸೂಕ್ತ. ಹೆಚ್ಚಿನವರು ವರ್ಷಾಂತ್ಯದಲ್ಲಿ, ಹೊಸ ವರ್ಷದಲ್ಲಿ ಟ್ರಿಪ್ ಪ್ಲಾನ್ ಮಾಡುತ್ತಾರೆ. ಈ ಸಂದರ್ಭದಲ್ಲಿ ಮಳೆಯಿಂದ ಸಿಕ್ಕಿಕೊಳ್ಳುವ ಬದಲು, ಮೊದಲೇ ಹವಾಮಾನ ಮುನ್ಸೂಚನೆ ತಿಳಿದರೆ ಉತ್ತಮ.


Click it and Unblock the Notifications