ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮಧ್ಯಮ ಮಳೆಯಾಗುತ್ತಿದೆ (Rain Alert). ಅದರಲ್ಲೂ ಬೆಂಗಳೂರಿನಲ್ಲಿ ನವೆಂಬರ್ 5, 6 ರಂದು ರಾತ್ರಿ ಆದ್ರೆ ಸಾಕು ಮಧ್ಯಮದಲ್ಲಿ ವರುಣನ ಆಗಮನವಾಗುತ್ತದೆ. ಇದೀಗ ಇಂದೂ (ನ.07) ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗಿದ್ರೆ ಯಾವೆಲ್ಲಾ ಜಿಲ್ಲೆಗಳಿಗೆ ಇಂದು ಅಲರ್ಟ್ ಘೋಷಣೆಯಾಗಿದೆ ಅನ್ನೋದನ್ನ ಈ ಲೇಖನದಲ್ಲಿ ನೋಡೋಣ.

ಈ ವಾರವಿಡೀ ಭಾರತದಲ್ಲಿ ಮಿಶ್ರ ವಾತಾವರಣ ಕಂಡುಬಂದಿದೆ. ಅದರಲ್ಲೂ ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಳೆ ಮುಂದುವರೆಯಲಿದೆ ಮತ್ತು ಇತರ ರಾಜ್ಯಗಳಲ್ಲಿ ಮಳೆ ಸ್ವಲ್ಪ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಐಎಂಡಿ ಸೂಚನೆ ಪ್ರಕಾರ, ದಕ್ಷಿಣದ ಮೂರು ರಾಜ್ಯಗಳ ಜೊತೆಗೆ ಕರ್ನಾಟಕದ ಹಲವು ಸ್ಥಳಗಳಲ್ಲಿ ಭಾರೀ ಗುಡುಗು ಸಹಿತ ಮಳೆ, ಬಿರುಗಾಳಿ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಅದರಲ್ಲೂ ರಾಜ್ಯದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆ ಜೊತೆಗೆ ಗುಡುಗು ಸಹ ಇರಲಿದೆ ಎಂದು ಹೇಳಲಾಗಿದೆ.
ಅಲ್ಲದೇ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮೈಸೂರು, ಶಿವಮೊಗ್ಗ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆ ಬೀಳಬಹುದು ಎನ್ನಲಾಗಿದೆ. ಅಲ್ಲದೇ ಈ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ದೇಶದ ಹಲವು ಭಾಗಗಳಲ್ಲಿ ಇಂದು ಭಾರೀ ಮಳೆ ಜೊತೆಗೆ ಹಿಮಪಾತದ ಎಚ್ಚರಿಕೆ ನೀಡಲಾಗಿದೆ. ಅದರಲ್ಲೂ ಉತ್ತರ ಭಾರತದ ಬಯಲು ಪ್ರದೇಶಗಳಲ್ಲಿ ಹಿಮಪಾತದ ಜೊತೆಗೆ ಚಳಿ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದೇಶಾದ್ಯಂತ ಈಗಾಗಲೇ ಚಳಿ ಶುರುವಾಗಿದೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದರೆ, ಇನ್ನು ಕೆಲವು ಕಡೆ ಹಿಮಪಾತದ ಎಚ್ಚರಿಕೆ ನೀಡಲಾಗಿದೆ.
ಅಲ್ಲದೇ ಇಂದು ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ, ದೆಹಲಿ-ಎನ್‌ಸಿಆರ್, ಬಿಹಾರ, ಪಂಜಾಬ್ ಮತ್ತು ಮಧ್ಯಪ್ರದೇಶದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವು ಕಡೆ ಗುಡುಗು ಸಹಿತ ಸಣ್ಣ ಪ್ರಮಾಣದಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಂತಹ ಪರ್ವತ ರಾಜ್ಯಗಳಲ್ಲಿ ಹಿಮಪಾತ ಮತ್ತು ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಭಾರತ ಮತ್ತು ಈಶಾನ್ಯದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಆದ್ದರಿಂದ ಎಲ್ಲಾದರೂ ಹೋಗುವ ಮುನ್ನ ಹವಾಮಾನ ಪರಿಸ್ಥಿತಿಯನ್ನು ಸರಿಯಾಗಿ ನೋಡಿಕೊಂಡು ಪ್ಲಾನ್ ಮಾಡಿದರೆ ಉತ್ತಮ. ಕೆಲವು ರಾಜ್ಯಗಳಲ್ಲಿ ಈಗಾಗಲೇ ಹಿಮಪಾತದ ಎಚ್ಚರಿಕೆಯನ್ನೂ ನೀಡಲಾಗಿದೆ.


Click it and Unblock the Notifications