ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ವರುಣನ ಅಬ್ಬರ ಜೋರಾಗಿಯೇ ಇದೆ. ಅತ್ತ ಕೆಲವು ರಾಜ್ಯದಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನೂ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರ ಸುರಕ್ಷತೆಯ (Tourists) ದೃಷ್ಟಿಯಿಂದ ಸರ್ಕಾರ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇನ್ನು ಕೇರಳದಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆಯ (IMD) ವರದಿಯಂತೆ ಮೂರು ಜಿಲ್ಲೆಗಳಿಗೆ ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಪರಿಣಾಮವಾಗಿ, ಕೇರಳದ ಕೆಲ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಇತರೆ ಶಿಕ್ಷಣ ಸಂಸ್ಥೆಗಳಿಗೆ ಬುಧವಾರ ರಜೆ ಘೋಷಣೆ (School Holiday) ಮಾಡಲಾಗಿದೆ.

ಇಡುಕ್ಕಿ, ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ, ಪ್ರವಾಸಿ ತಾಣಗಳನ್ನು ಮುಚ್ಚಲು ಮತ್ತು ಜನರಿಗೆ ಬೆಟ್ಟ ಪ್ರದೇಶಗಳಿಗೆ ಪ್ರಯಾಣಿಸದಂತೆಯೂ ಖಡಕ್ ಎಚ್ಚರಿಕೆ ನೀಡಲಾಗಿದೆ.
ಕಂದಾಯ ಇಲಾಖೆ, ಕೇರಳ ರಾಜ್ಯ ವಿದ್ಯುತ್ ಮಂಡಳಿ, ಪಂಚಾಯತ್‌ಗಳು ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಮಳೆಯಿಂದಾಗುವ ವಿಪತ್ತಿನಿಂದ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ಮುಂದಿನ ಸೂಚನೆ ಬರುವವರೆಗೂ ಗಣಿಗಾರಿಕೆ ಚಟುವಟಿಕೆಗಳನ್ನು ನಡೆಸದಂತೆ ಸೂಚನೆ ಹೊರಡಿಸಿದೆ.
ಇಡುಕ್ಕಿ ಜಿಲ್ಲೆಯ ಮುಲ್ಲಾಪೆರಿಯಾರ್ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಮಂಗಳವಾರ 138.50 ಅಡಿಗೆ ತಲುಪಿದ್ದು, ಅಣೆಕಟ್ಟಿನ ಗರಿಷ್ಠ ಮಟ್ಟ 142 ಅಡಿಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಪ್ರಸ್ತುತ ಅಣೆಕಟ್ಟಿಗೆ 7,086 ಕ್ಯೂಬಿಕ್ ಅಡಿ ನೀರು ಹರಿದು ಬರುತ್ತಿದ್ದು, 6,003 ಕ್ಯೂಬಿಕ್ ಅಡಿ ನೀರನ್ನು ಹೊರಕ್ಕೆ ಹರಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ..
ಕಳೆದ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಇಡುಕ್ಕಿಯ ಕುಮಿಲಿಯಲ್ಲಿ ಭೂಕುಸಿತ ಮತ್ತು ಆಕಸ್ಮಿಕ ಪ್ರವಾಹ ಉಂಟಾಗಿತ್ತು. ಈ ಪರಿಣಾಮ ಜಿಲ್ಲೆಯಲ್ಲಿ ವ್ಯಾಪಕ ಕೃಷಿ ಭೂಮಿಗೆ ಹಾನಿಯಾಗಿತ್ತು. ಅಕ್ಟೋಬರ್ ಮೊದಲ ವಾರದಲ್ಲಿ ಕೇರಳದಲ್ಲಿ ಈಶಾನ್ಯ ಮಾನ್ಸೂನ್ ಪ್ರಾರಂಭವಾದ ನಂತರ, ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಲ್ಲದೇ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ತಿರುವನಂತಪುರಂ, ಕಣ್ಣೂರು, ಕೋಝಿಕ್ಕೋಡ್ ಮತ್ತು ಇಡುಕ್ಕಿ ಜಿಲ್ಲೆಯ ಎತ್ತರದ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಇನ್ನೂ ಮುಂದುವರೆಯುವ ಸಾಧ್ಯತೆ ಇದೆ. ಆದ್ದರಿಂದ ಕೇರಳದ ಈ ಪ್ರದೇಶಗಳಲ್ಲಿ ಪ್ರವಾಸಿ ಕೇಂದ್ರಗಳನ್ನು ಮುಚ್ಚಲಾಗಿದ್ದು, ಮುಂದಿನ ಆದೇಶದವರೆಗೆ ತೆರೆಯದಂತೆ ಎಚ್ಚರಿಕೆ ನೀಡಲಾಗಿದೆ.


Click it and Unblock the Notifications