ಈಗಾಲೇ ಚಳಿಗಾಲ ಶುರುವಾಗಿದೆ, ಆದ್ರೆ ಇದರ ಮಧ್ಯೆ ಮಳೆರಾಯನ ಆರ್ಭಟ ಮಾತ್ರ ನಿತ್ತಿಲ್ಲ. ಕೆಲವು ದಿನಗಳ ಹಿಂದೆ ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿತ್ತು. ಆದ್ರೆ ಮತ್ತೆ ಮೊಡಕವಿದ ವಾತವರಣ ಶುರುವಾಗಿದ್ದು, ಬೆಂಳೂರಿನಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆಯನ್ನ ನೀಡಿದೆ. ಈಗಾಗಲೇ ತಮಿಳುನಾಡಿನ ಕೆಲವೆಡೆ ಮಳೆ ಆರ್ಭಟ ಮುಂದುವರೆದಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲೂ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ತಿಳಿಸಿದೆ. ಅಲ್ಲದೆ ಇತ್ತ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಡಿಸೆಂಬರ್ 13ರಂದು ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಸಿಲಿಕಾಣ್ ಸಿಟಿ ಬೆಂಗಳೂರಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ಇನ್ನು ತಮಿಳುನಾಡಿನ ಚೆನ್ನೈನಲ್ಲಿ ನಿರಂತರ ಮಳೆಯಾಗಿತ್ತಿರುವ ಹಿನ್ನೆಲೆ ಆ ಪ್ರದೇಶಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಕೆಲವು ದಿನಗಳು ದಕ್ಷೀಣಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗ್ತಿದೆ.
ಹಾಗೆ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ಚೆನ್ನೈನಲ್ಲಿ ಗುರುವಾರ ಸಾಧರಣದಿಂದ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಇನ್ನು ಇದರ ಮಧ್ಯೆ ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಮಳೆರಾಯನ ಆರ್ಭಟ ಹೆಚ್ಚಾಗಿದ್ದು, ಜನ ಪರದಾಡುವಂತಾಗಿದೆ. ಅಲ್ಲದೆ ಪುದುಚೆರಿಯಲ್ಲಿ ಬುಧವಾರ ಸುರಿದ ಮಳೆಗೆ ಸಂಪೂರ್ಣ ರಸ್ತೆ, ಹಾಗು ಹಲವು ಪ್ರದೇಗಳು ಜಲಾವೃತವಾಗಿದ್ದು, ಜನರು ರಸ್ತೆ ದಾಟಲು ಪರದಾಡುವಂತಾಯಿತು.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು ಮತ್ತು ಶ್ರೀಲಂಕ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಿತ್ತಿದ್ದು, ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನ ನೀಡಿದೆ. ಹೀಗಾಗಿ ಮುಂದಿನ ಕೆಲವು ದಿನಗಳವರೆಗೆ ಕರ್ನಾಟಕ ಸೇರಿದಂತೆ ತಮಿಳುನಾಡು, ಪುದುಚೆರಿಯ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾಣ ಇಲಾಖೆ ತಿಳಿಸಿದೆ.
ಹೌದು ಬಂಗಾಳಕೊಲ್ಲಿಯಲ್ಲಿ ವಾಯುಭಾರಕುಸಿತದಿಂದಾಗಿ ಕರ್ನಾಟಕದಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಡಿಸೆಂಬರ್ 13 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ ಮತ್ತು ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇದರ ಮಧ್ಯೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಡಿಸೆಂಬರ್ 14 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಕುರಿತು IMD ವಿಜ್ಞಾನಿ ಜಿಎಸ್ ಪಾಟೀಲ್ ಅವರು ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿದ್ದು, ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದಿಂದ ಉಂಟಾಗುವ ತೇವಾಂಶದಿಂದ ಕೂಡಿದ ಗಾಳಿ ಕರ್ನಾಟಕದಾದ್ಯಂತ ಮಳೆಯನ್ನು ಉಂಟುಮಾಡುತ್ತಿದೆ. ಹೀಗಾಗಿ ನಾವು ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯನ್ನು ನಿರೀಕ್ಷಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಈಗಾಗಲೇ ದಕ್ಷಿಣ ಕನ್ನಡ, ದಾವಣಗೆರೆ, ಗದಗ, ಕಲಬುರಗಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಮುಂದಿನ ಎರಡು ದಿನಗಳಲ್ಲಿ ಕರಾವಳಿ, ದಕ್ಷಿಣ ಮತ್ತು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಸ್ಥಿರವಾದ ಮಳೆಯಾಗುವ ಮುನ್ಸೂಚನೆ ಇದೆ.
ಹಾಗೆ ಇತ್ತ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ಮತ್ತು ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದ್ದು, 4-6 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿದೆ. ಚಿಕ್ಕಮಗಳೂರಿನಲ್ಲಿ ಕನಿಷ್ಠ ತಾಪಮಾನ 13.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.


Click it and Unblock the Notifications