ರಾಜ್ಯದಲ್ಲಿ ಕಳೆದೊಂದು ವಾರದಿಂದ ಹಲವು ಕಡೆ ಮಳೆಯಾಗಿದೆ (Rain). ನೈಋತ್ಯ ಮಾನ್ಸೂನ್ ಹಿಂದೆ ಸುರಿಯುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಈ ತಿಂಗಳ ಅಂತ್ಯದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ನೀಡಿದೆ. ಮಳೆ ಅಲರ್ಟ್ (Rain Alert) ನೀಡಿರುವ ಹಿನ್ನೆಲೆ ಸಾರ್ವಜನಿಕರು ಜಾಗೃತೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ. ಹಾಗಿದ್ರೆ ಬೆಂಗಳೂರಿನಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ? (Bengaluru Weather) ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಕಳೆದೆರಡು ದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಈ ಬದಲಾವಣೆಯು ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಆರಂಭವನ್ನು ಸೂಚಿಸುತ್ತದೆ. ಇನ್ನು ಬೆಂಗಳೂರಿನಲ್ಲಿ ಮುಂಬರುವ ವಾರದಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಅದೇ ರೀತಿ ನಗರದ ಹಲವು ಭಾಗಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಅಕ್ಟೋಬರ್ 15 ರಿಂದ 20 ರವರೆಗೆ, ಮೋಡ ಕವಿದ ವಾತಾವರಣವಿದ್ದು, ಸಾಮಾನ್ಯ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೇರೆ ಜಿಲ್ಲೆಗಳಲ್ಲಿ ಹೇಗಿದೆ ಹವಾಮಾನ?
ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಈ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ತಲುಪಬಹುದು. ಇದೇ ರೀತಿ ಕೊಡಗು, ಕೋಲಾರ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲೂ ಮಳೆ ಸುರಿಯುವ ನಿರೀಕ್ಷೆಯಿದೆ.
ಮೇ 16ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ. ಅಲ್ಲದೇ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ತಾಪಮಾನ:
ಹಗಲಿನಲ್ಲಿ ಗರಿಷ್ಠ ತಾಪಮಾನವು ಸುಮಾರು 30 ಡಿಗ್ರಿ ಸೆಲ್ಸಿಯಸ್ ಇದ್ದರೆ, ರಾತ್ರಿಯ ಕನಿಷ್ಠ ತಾಪಮಾನವು 20 ರಿಂದ 21 ಡಿಗ್ರಿ ಸೆಲ್ಸಿಯಸ್ ಗೆ ಇಳಿಯುತ್ತದೆ. ಸಂಜೆ ವೇಳೆಗೆ ತಾಪಮಾನದಲ್ಲಿ ಇಳಿಕೆ ಕಂಡುಬರುವುದರಿಂದ ವಾತಾವರಣ ಕೂಡಾ ತಂಪಾಗಿರಲಿದೆ.
ಪ್ರಯಾಣಿಕರಿಗೆ ಸಲಹೆ
ಸಂಜೆ ವೇಳೆಗೆ ಮಳೆ ಹೆಚ್ಚಾಗಿ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಗೆ, ವಾಹನ ಚಾಲಕರಿಗೆ ಸಂಚಾರ ದಟ್ಟಣೆ ಬಗ್ಗೆ ಸಲಹೆ ನೀಡಲಾಗಿದೆ. ಮಳೆ ಬರುವ ಕಾರಣ ಆದಷ್ಟು ಬೇಗನೆ ಟ್ರಾವೆಲಿಂಗ್ ಪ್ಲಾನ್ ಮಾಡಿದರೆ ಒಳ್ಳೆಯದು ಎನ್ನಲಾಗಿದೆ. ಅಲ್ಲಲ್ಲಿ ರಸ್ತೆಯಲ್ಲಿ ಗುಂಡಿಗಳು ಇರುವುದರಿಂದ ಆದಷ್ಟು ನಿಧಾನವಾಗಿ, ಜಾಗರೂಕತೆಯಿಂದ ಪ್ರಯಾಣ ಮಾಡಿ ಎಂದು ಸಲಹೆ ನೀಡಲಾಗಿದೆ.


Click it and Unblock the Notifications