ರಾಜ್ಯದಲ್ಲಿ ಚಳಿಗಾಲ ಶುರುವಾಗುವ ಸಮಯದಲ್ಲಿ ವರುಣಾರ್ಭಟ ಜೋರಾಗಿದೆ. ಮೊಂಥಾ ಚಂಡಮಾರುತದ (Cyclone Montha) ಎಫೆಕ್ಟ್ ಇದೀಗ ಕರ್ನಾಟಕಕ್ಕೂ ತಟ್ಟಿದ್ದು, ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ. ಇದೀಗ ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಸೈಕ್ಲೋನ್ ಮೊಂಥಾದ ಪರಿಣಾಮದಿಂದಾಗಿ ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ (Rain Alert) ಘೋಷಿಸಲಾಗಿದೆ. ಅಲ್ಲದೇ ಈ ಜಿಲ್ಲೆಗಳ ಜನರಿಗೆ ಮುನ್ನೆಚ್ಚರಿಕೆಯನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು ಎಂದು ಸೂಚನೆ ನೀಡಲಾಗಿದೆ.
ಇನ್ನು ದಕ್ಷಿಣ ಒಳನಾಡು ಕರ್ನಾಟಕದ ಜಿಲ್ಲೆಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು ಕರ್ನಾಟಕದ (ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಕೊಡಗು) ಜಿಲ್ಲೆಗಳಲ್ಲಿ ಹಲಕೆಯಿಂದ ಮಧ್ಯಮ ಮಳೆಯೊಂದಿಗೆ ಕೆಲವೆಡೆ ಗುಡುಗು ಸಹಿತ ತೀವ್ರ ಮಳೆಯಾಗಬಹುದು.
ಹವಾಮಾನ ಬದಲಾವಣೆಗೆ ಕಾರಣವೇನು?
ಇತ್ತೀಚೆಗೆ ರಾಜ್ಯದಲ್ಲಿ ಕೆಲದಿನಗಳಿಂದ ಭಾರೀ ಮಳೆಯಾಗುತ್ತಿದೆ. ಆದ್ದರಿಂದ ಈ ಮಳೆಗೆ ಮುಖ್ಯ ಕಾರಣ ಮೊಂಥಾ ಚಂಡಮಾರುತ ಎನ್ನಲಾಗಿದೆ. ಇದು ಆರಂಭದಲ್ಲಿ ದಕ್ಷಿಣ ಭಾರತದ ಕರಾವಳಿಯತ್ತ ಚಲಿಸುತ್ತದೆ. ಈ ಪರಿಣಾಮ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆ ಬೀಳುತ್ತಿದೆ. ಹವಾಮಾನ ವರದಿ ಪ್ರಕಾರ, ಈ ಮಳೆ ಅಕ್ಟೋಬರ್ 31 ರವರೆಗೆ ಇರಲಿದ್ದು, ಆ ನಂತರದಲ್ಲಿ ಕಡಿಮೆಯಾಗುವ ಸಾಧ್ಯತೆ ಇದೆ.
ಅಕ್ಟೋಬರ್ 31 ರ ನಂತರ ಬಹುತೇಕ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ರೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ದಿನ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪರಿಣಾಮಗಳು:
ಬೆಂಗಳೂರಿನಂತಹ ಮಹಾನಗರಗಳಲ್ಲಿ ಚೂರು ಮಳೆ ಬಂದರೆ ಸಾಕು ರಸ್ತೆಗಳೆಲ್ಲಾ ಜಲಾವೃತವಾಗುತ್ತದೆ. ಈ ಪರಿಣಾಮ ಟ್ರಾಫಿಕ್ ಸಮಸ್ಯೆ, ಪವರ್ ಕಟ್, ನೀರಿನ ಸಮಸ್ಯೆ ಹೀಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಅಲ್ಲದೇ ವ್ಯಾಪಾರಕ್ಕೂ ಮಳೆ ಅಡ್ಡಿಯಾಗಲಿದ್ದು, ತರಕಾರಿ, ಬೆಳೆ ಹಾನಿಯಂತಹ ಸಮಸ್ಯೆ ಉದ್ಭವಿಸಬಹುದು. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೊತೆಗೆ ಗಾಳಿಯ ವೇಗವೂ ಹೆಚ್ಚಿರಲಿದೆ. ಗಂಟೆಗೆ 40 ರಿಂ 50 ಕಿ.ಮೀವರೆಗೆ ಇರಬಹುದು ಎಂದು ಅಂದಾಜಿಸಲಾಗಿದ್ದು, ಈ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.


Click it and Unblock the Notifications