Heavy Rain: ಇನ್ನೂ ನಿಲ್ಲದ ಮಳೆಯಬ್ಬರ! ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಚಳಿಗಾಲ (Winter Season) ಬಂದರೂ ಮಳೆರಾಯನ ಆರ್ಭಟ ಮಾತ್ರ ನಿಲ್ಲುವಂತೆ ಕಾಣುತ್ತಿಲ್ಲ. ದೇಶದಲ್ಲಿ ಈಗಾಗಲೇ ಚಳಿಗಾಲ ಶುರುವಾಗಿದೆ. ಚಳಿ ಕೂಡಾ ವಿಪರೀತವಾಗಿದೆ. ಆದ್ರೆ ಈ ಮಧ್ಯೆ ಮಳೆರಾಯನ ಆರ್ಭಟವೂ ರಾಜ್ಯದ ಹಲವೆಡೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ IMD) ಮುನ್ಸೂಚನೆ ಪ್ರಕಾರ, ಮುಂಬರುವ ದಿನಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

Rain Alert: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಹಾಗಿದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗಬಹುದು. ಹವಾಮಾನ ಇಲಾಖೆಯ ವರದಿ ಈ ಬಗ್ಗೆ ಏನು ಹೇಳುತ್ತೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಎಲ್ಲೆಲ್ಲಾ ಮಳೆ?
ಹವಾಮಾನ ಇಲಾಖೆಯ ವರದಿ ಪ್ರಕಾರ, ಕರಾವಳಿ ಪ್ರದೇಶಗಳಲ್ಲಿ ಇಂದು ವರುಣಾರ್ಭಟ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಗಾಳಿಯ ವೇಗ ಜೋರಾಗಿರಲಿದ್ದು, ಹಗುರವಾದ ಮಳೆ ಕೂಡಾ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಈ ವಾರ ತಾಪಮಾನ 2 ರಿಂ 4 ಡಿಗ್ರಿ ಸೆಲ್ಸಿಯಸ್‌ ಅಂದರೆ ಕಡಿಮೆ ಪ್ರಮಾಣದಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಮಳೆ ತೀವ್ರತೆ ಹೆಚ್ಚಾಗಬಹುದು ಎಂದು ಐಎಂಡಿ ನಿರೀಕ್ಷಿಸಿದ್ದು, ಟ್ರಿಪ್‌ ಪ್ಲಾನ್‌ ಮಾಡಿರುವವರು, ಎಲ್ಲಾದರೂ ಹೋಗಬೇಕೆಂದುಕೊಂಡವರು ಸದ್ಯ ರದ್ದುಗೊಳಿಸುವುದು ಉತ್ತಮ ಎಂದು ಸಲಹೆ ನೀಡಲಾಗಿದೆ.

ಇನ್ನು ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಐಎಂಡಿ ಸೂಚನೆ ಹೊರಡಿಸಿದೆ. ಇನ್ನು ಮಂಡ್ಯ, ಕೊಡಗು, ಹಾಸನ, ರಾಮನಗರ, ಮೈಸೂರು, ತುಮಕೂರು, ಚಿಕ್ಕಮಗಳೂರು ಸೇರಿ, ಹಲವಾರು ಜಿಲ್ಲೆಗಳಲ್ಲಿ ಮಧ್ಯಮದಿಂದ ಸಾಧಾರಣ ಮಳೆಯಾಗಬಹುದು ಎಂದು ಸೂಚನೆ ಹೊರಡಿಸಲಾಗಿದೆ.

ಬೆಂಗಳೂರಿನಲ್ಲೂ ಮಳೆ!
ಇನ್ನು ಬೆಂಗಳೂರಿನಲ್ಲೂ ಇಂದು ಮತ್ತು ಮುಂದಿನ ದಿನಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಹಗುರದಿಂ ಮಧ್ಯಮ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಅಲ್ಲದೇ ಮಳೆ ಜೊತೆಗೆ, ಮೋಡಕವಿದ ವಾತಾವರಣ, ಚಳಿ, ಗಾಳಿ ಇರಲಿದೆ ಎಂದು ಸೂಚನೆ ನೀಡಲಾಗಿದೆ.

ಕೇರಳದಲ್ಲೂ ಭಾರೀ ಮಳೆ!

ಮುಂದಿನ ಐದು ದಿನಗಳಲ್ಲಿ ಕೇರಳದಲ್ಲೂ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಂದರೆ ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಇಂದು ಅಲ್ಲಲ್ಲಿ ಭಾರೀ ಮಳೆಯ ನಿರೀಕ್ಷೆಯಿದ್ದು, ಈ ಮೂರೂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಕೂಡಾ ನೀಡಲಾಗಿದೆ.

ನೈಋತ್ಯ ಬಂಗಾಳಕೊಲ್ಲಿ, ಆಗ್ನೇಯ ಶ್ರೀಲಂಕಾ ಸಮೀಪದ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಈ ಬದಲಾವಣೆಯಾಗಲು ಕಾರಣ. ಆದ್ದರಿಂದ ಮುಂದಿನ 24 ಗಂಟೆಗಳಲ್ಲಿ ಇದು ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸಿ, ಮತ್ತಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ..

ಈ ವಾಯುಭಾರ ಕುಸಿತವು ಉತ್ತರ ತಮಿಳುನಾಡು-ಪುದುಚೇರಿ ಕರಾವಳಿಯ ಮೂಲಕ ನೈಋತ್ಯ ಬಂಗಾಳಕೊಲ್ಲಿಯತ್ತ ಸಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆಯಲ್ಲಿ ತಿಳಿಸಿದೆ. ಮಳೆಯ ಅಲರ್ಟ್‌ ಹಿನ್ನೆಲೆಯಲ್ಲಿ, ಭೂಕುಸಿತ, ಮಣ್ಣುಕುಸಿತ ಮತ್ತು ಬೆಟ್ಟಗಳಲ್ಲಿ ಪ್ರವಾಹಕ್ಕೆ ಒಳಗಾಗುವ ಪ್ರದೇಶಗಳಲ್ಲಿ ವಾಸಿಸುವವರು ಅಧಿಕಾರಿಗಳ ಸೂಚನೆಗಳಂತೆ ಸುರಕ್ಷಿತ ಸ್ಥಳಗಳಿಗೆ ಹೋಗಬೇಕು ಎಂದು ಸೂಚನೆ ನೀಡಲಾಗಿದೆ

ನದಿಯ ದಡಗಳಲ್ಲಿ ಮತ್ತು ಅಣೆಕಟ್ಟುಗಳ ಕೆಳಭಾಗದಲ್ಲಿ ವಾಸಿಸುವವರೂ ಸಹ ಅಪಾಯದಿಂದ ಪಾರಾಗಲು ಸ್ಥಳಾಂತರವಾಗುವಂತೆ ಸಲಹೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+